ಇಂದಿರಾ ಕ್ಯಾಂಟೀನ್‌ ಯೋಜನೆ ರಾಜ್ಯದೆಲ್ಲೆಡೆ ಕಾಮಗಾರಿಗೆ ವೇಗ

Team Udayavani, Jan 3, 2018, 12:48 PM IST

indra-canteen.jpg

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್‌ ಯೋಜನೆಯನ್ನು ಜನವರಿಯೊಳಗೆ ರಾಜ್ಯದ ಜನರಿಗೆ ದೊರೆಯುವಂತೆ ಮಾಡಲು ಸರ್ಕಾರ ಮುಂದಾಗಿದ್ದು, ಶೀಘ್ರ ಕ್ಯಾಂಟೀನ್‌ ಗಳ ಕಾಮಗಾರಿ ಪೂರ್ಣಗೊಳಿಸಲು ಸಿದ್ಧತೆ ನಡೆಸಿದೆ. ಬೆಂಗಳೂರಿನಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಸರ್ಕಾರ ಇಂದಿರಾ ಕ್ಯಾಂಟೀನ್‌ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ತೀರ್ಮಾನಿಸಿತ್ತು.

ಅದರಂತೆ ಜಿಲ್ಲೆ, ತಾಲೂಕು ಕೇಂದ್ರಗಳು ಸೇರಿ ಒಟ್ಟು 171 ಭಾಗಗಳಲ್ಲಿ 247 ಕ್ಯಾಂಟೀನ್‌ಗಳನ್ನು ನಿರ್ಮಿಸಲು ನಿರ್ಧರಿಸಿದೆ. ಈಗಾಗಲೇ ಬಹುತೇಕ ಕ್ಯಾಂಟೀನ್‌ಗಳ ನಿರ್ಮಾಣ ಕಾಮಗಾರಿ ಅಂತಿಮ ಹಂತ  ತಲುಪಿದೆ. ಸಿಎಂ ಸಿದ್ದರಾಮಯ್ಯ ಕಳೆದ ಶುಕ್ರವಾರ ರಾಜ್ಯದ ಮೊದಲ ಇಂದಿರಾ ಕ್ಯಾಂಟೀನ್‌ಗೆ ತುಮಕೂರಿನ ಶಿರಾದಲ್ಲಿ ಚಾಲನೆ ನೀಡಿದರು. 

ಉದ್ಘಾಟನೆಗೆ ಸಿದ್ಧ: ಬೆಂಗಳೂರಿನಲ್ಲಿ ನಿರ್ಮಿಸಿರುವ ಕ್ಯಾಂಟೀನ್‌ ಮಾದರಿಯಲ್ಲಿ 90 ಕಡೆ ಪ್ರೀಕ್ಯಾಸ್ಟ್‌ ಎಲಿಮೆಂಟ್‌ ಬಳಸಿ ಕ್ಯಾಂಟೀನ್‌ ನಿರ್ಮಿಸಲಾಗುತ್ತಿದ್ದು,  ಈಗಾಗಲೇ 60 ಕಡೆಗಳಲ್ಲಿ ಕ್ಯಾಂಟೀನ್‌ಗಳು ಉದ್ಘಾಟ ನೆಗೆ ಸಿದ್ಧವಾಗಿವೆ. ಪ್ರೀಕ್ಯಾಸ್ಟ್‌ ಹೊರತುಪಡಿಸಿ ಉಳಿದ ಕಡೆಗಳಲ್ಲೂ  ಕ್ಯಾಂಟೀನ್‌ಗಳ ನಿರ್ಮಾಣಕ್ಕೆ ಟೆಂಡರ್‌ ಕರೆದು ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ. ಕಾಮಗಾರಿ ಕೂಡ ಆರಂಭವಾಗಿದೆ ಎಂದು ನಗರಾಭಿವೃದ್ಧಿ  ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಆಹಾರ ಪೂರೈಕೆ, ಉಪಕರಣ ಖರೀದಿಗೆ ಟೆಂಡರ್‌: ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು ಕಳೆದ ತಿಂಗಳು ಇಂದಿರಾ ಕ್ಯಾಂಟೀನ್‌ಗಳ ನಿರ್ಮಾಣ,  ಆಹಾರ ಪೂರೈಕೆ ಹಾಗೂ ಕ್ಯಾಂಟೀನ್‌ ಉಪಕರಣಗಳ ಖರೀದಿಗೆ ಕೂಡಲೇ ಟೆಂಡರ್‌ ಕರೆಯುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು.  ಅದರಂತೆ ಎಲ್ಲ ಕಡೆಗಳಲ್ಲಿ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕೆಲವು ಕಡೆಗಳಲ್ಲಿ ಆಹಾರ ಸರಬರಾಜು ಮಾಡಲು ಕಾರ್ಯಾದೇಶ ನೀಡಲಾಗಿದೆ  ಎನ್ನಲಾಗಿದೆ.

17 ಅಡುಗೆ ಮನೆ ಸಿದ್ಧ: ತಾಲೂಕು ಕೇಂದ್ರಗಳು ಹಾಗೂ ನಗರ, ಪಟ್ಟಣ ಪಂಚಾಯಿತಿ ಭಾಗಗಳ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಸಲು ಸರ್ಕಾರದಿಂದ 17 ಕಡೆಗಳಲ್ಲಿ ಅಡುಗೆ ಮನೆಗಳನ್ನು ನಿರ್ಮಿಸಲಾಗಿದೆ. ಜತೆಗೆ, ಆಹಾರ ತಯಾರಿಕೆಗೆ ಬೇಕಾದ ಉಪಕರಣಗಳ ಖರೀದಿಗೆ ಟೆಂಡರ್‌  ಕರೆದು, ಗುತ್ತಿಗೆದಾರರಿಗೆ ಕಾರ್ಯಾದೇಶವನ್ನೂ ನೀಡಲಾಗಿದೆ. 10 ದಿನಗಳಲ್ಲಿ ಉಪಕರಣಗಳು ಪೂರೈಕೆಯಾಗಲಿವೆ ಎಂದು ಅಧಿಕಾರಿಗಳು ಮಾಹಿತಿ  ನೀಡಿದ್ದಾರೆ. 

ಮಾಸಾಂತ್ಯಕ್ಕೆ ಉದ್ಘಾಟನೆ: ಈಗಾಗಲೇ ಮೈಸೂರು, ಗದಗ, ಚಾಮರಾಜನಗರ, ಕೋಲಾರ, ರಾಮನಗರ, ಹಾಸನ, ಮಂಗಳೂರು ಸೇರಿ ಹಲವಾರು  ಭಾಗಗಳಲ್ಲಿ ಕ್ಯಾಂಟೀನ್‌ ಕಾಮಗಾರಿ ಪೂರ್ಣಗೊಂಡಿದ್ದು, ಸಣ್ಣಪುಟ್ಟ ಕೆಲಸಗಳು ಮಾತ್ರ ಬಾಕಿಯಿವೆ. ಹೀಗಾಗಿ, ಜನವರಿ ಕೊನೆಯಲ್ಲಿ ಮೈಸೂರು ಸೇರಿ  ಹಲವು ಕಡೆಗಳಲ್ಲಿ ಕ್ಯಾಂಟೀನ್‌ಗಳನ್ನು ಉದ್ಘಾಟಿಸುವ ಕುರಿತು ಚರ್ಚೆ ನಡೆಸಲಾಗಿದೆ. 

ಇಂದಿರಾ ಕ್ಯಾಂಟೀನ್‌ ಯೋಜನೆಯನ್ನು ಶೀಘ್ರ ಜಾರಿಗೊಳಿಸಲು ಅಗತ್ಯ ಸಿದ್ಧತೆ ನಡೆಸಿಕೊಳ್ಳಲಾಗಿದ್ದು, ಈಗಾಗಲೇ ಮುಖ್ಯಮಂತ್ರಿಗಳು ಶಿರಾದಲ್ಲಿ  ಕ್ಯಾಂಟೀನ್‌ ಉದ್ಘಾಟಿಸುವ ಮೂಲಕ ಚಾಲನೆ ನೀಡಿದ್ದಾರೆ. ಅದರಂತೆ ಈಗಾಗಲೇ ಆಹಾರ ಸರಬರಾಜು ಹಾಗೂ ಉಪಕರಣಗಳ ಪೂರೈಕೆಗೆ ಟೆಂಡರ್‌  ಕರೆಯಲಾಗಿದ್ದು, ಈ ಮಾಸಾಂತ್ಯ ಅಥವಾ ಫೆಬ್ರವರಿ ಮೊದಲ ವಾರದೊಳಗೆ ಕ್ಯಾಂಟೀನ್‌ಗಳು ಜನರಿಗೆ ಲಭ್ಯವಾಗಲಿವೆ. 
-ಅಂಜುಮ್‌ ಫ‌ರ್ವೇಜ್‌, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.