ಕೇಂದ್ರ ಸಚಿವರಿಂದ ಬೇಜವಾಬ್ದಾರಿ ಹೇಳಿಕೆ
Team Udayavani, Sep 11, 2017, 7:55 AM IST
ಮೈಸೂರು: ಗೌರಿ ಹತ್ಯೆ ವಿಚಾರದಲ್ಲಿ ಕೇಂದ್ರ ಸಚಿವ ರವಿಶಂಕರ ಪ್ರಸಾದ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಭಾನುವಾರ ಸುದ್ದಿಗಾರರ ಜತೆ ಅವರು ಮಾತ ನಾಡಿದರು. ಗೌರಿ ಹತ್ಯೆ ನಂತರ ಸರ್ಕಾರ ಸ್ವಯಂಪ್ರೇರಿತವಾಗಿ ಪ್ರಗತಿಪರ ಸಾಹಿತಿಗಳು, ಚಿಂತಕರಿಗೆ ಭದ್ರತೆ ಕಲ್ಪಿಸಲು ನಿರ್ಧರಿಸಿದೆ. ಕಳೆದ ವಾರ ಮೋಹನ್ ಕೊಂಡಜ್ಜಿ, ವಿಮಲಾ ಜತೆಗೆ ತಮ್ಮನ್ನು ಭೇಟಿ ಮಾಡಿದ್ದ ಗೌರಿ ಲಂಕೇಶ್, ಪತ್ರಿಕೆಯ ವಿಶೇಷ ಸಂಚಿಕೆಗೆ ಜಾಹಿರಾತು ಕೊಡಿಸಲು ಮನವಿ ಮಾಡಿದ್ದರೇ ಹೊರತು, ರಕ್ಷಣೆ ಕೋರಿರಲಿಲ್ಲ. ಅವರು ರಕ್ಷಣೆ ಕೇಳಿದ್ದರೆ ಸರ್ಕಾರ ಕೊಡದೆ ಇರುತ್ತಿತ್ತೇ? ಕೇಂದ್ರ ಸಚಿವರಾದವರು ಇಂತಹ ವಿಚಾರದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಬಾರದು ಎಂದರು. ಗೌರಿ ಕುಟುಂಬದವರೇ ಸಿಬಿಐ ತನಿಖೆ ಬೇಡ, ಎಸ್ಐಟಿ ತನಿಖೆಯನ್ನೇ ಮುಂದುವರೆಸಿ ಎಂದು ಕೇಳಿಕೊಂಡಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.