ಜೆಡಿಎಸ್ ಕಾನೂನು ಘಟಕ ಪುನರ್‌ರಚನೆಗೆ ತೀರ್ಮಾನ
Team Udayavani, Sep 16, 2017, 6:05 AM IST
ಬೆಂಗಳೂರು: ಜೆಡಿಎಸ್ ಕಾನೂನು ಘಟಕದ ಜಿಲ್ಲಾ ಮತ್ತು ತಾಲೂಕು ಘಟಕಗಳನ್ನು ಪುನರ್‌ರಚಿಸಿ ಭ್ರಷ್ಟಾಚಾರದ ಬಗ್ಗೆ ವ್ಯಾಪಕ ಹೋರಾಟ ನಡೆಸುವುದು ಹಾಗೂ ಪಕ್ಷ ಸಂಘಟನೆಗಾಗಿ ಕಾರ್ಯಕ್ರಮ ರೂಪಿಸಲು ತೀರ್ಮಾನಿಸಲಾಗಿದೆ.
ಜೆಡಿಎಸ್ ಕಚೇರಿಯಲ್ಲಿ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ.ರಂಗನಾಥ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ, ಕಾನೂನು ಘಟಕದ ಜಿಲ್ಲಾ ಮತ್ತು ತಾಲೂಕು ಘಟಕ ಪುನರ್‌ರಚಿಸಿ ಯುವಕರಿಗೆ ಹೆಚ್ಚು ಅವಕಾಶ ನೀಡಲು ನಿರ್ಧರಿಸಲಾಯಿತು. ಜತೆಗೆ ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಂಘಟನೆ ಮಾಡಲು ಕಾನೂನು ಘಟಕ ಕಾರ್ಯಕ್ರಮ ರೂಪಿಸಲು ನಿರ್ಣಯ ಕೈಗೊಳ್ಳಲಾಯಿತು.
ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಎ.ಪಿ.ರಂಗನಾಥ್, ಜೆಡಿಎಸ್ ಕಾನೂನು ಘಟಕದ ವತಿಯಿಂದ ಹಲವಾರು ಹೋರಾಟ ರೂಪಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ವಕೀಲರು ನ್ಯಾಯಾಂಗದ ಒಂದು ಭಾಗವಾಗಿದ್ದು ಅನೇಕ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ, ಅವರಿಗೆ ಮೂಲಸೌಕರ್ಯಗಳು ಇಲ್ಲ ಎಂದು ಹೇಳಿದರು. ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸಲು ಹಾಗೂ ಬಾರ್ ಕೌನ್ಸಿಲ್‌ನಿಂದ ವಕೀಲರಿಗೆ ನೀಡುವ ವೆಲ್‌ಫೇರ್ ಫಂಡ್‌ನಲ್ಲಿ ಯುವಕರಿಗೆ ಮತ್ತು ಹಿರಿಯರಿಗೆ ವ್ಯತ್ಯಾಸವಿಲ್ಲದೆ ಸಮಾನವಾಗಿ ನೀಡಬೇಕು. ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದರು.
ಬಿಬಿಎಂಪಿಯ 109 ವಾರ್ಡ್‌ಗಳಲ್ಲಿ 2008 ರಿಂದ ನಡೆದಿರುವ ಅವ್ಯವಹಾರಗಳ ಬಗ್ಗೆ ಕಾನೂನು ಘಟಕ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.