ಪತ್ರಕರ್ತನಾಗುವ ಆಸೆ ಹೊಂದಿದ್ದವ ನೇಣಿಗೆ
Team Udayavani, Jun 3, 2017, 12:48 PM IST
ಬೆಂಗಳೂರು: ಪತ್ರಿಕೋದ್ಯಮದಲ್ಲಿ ಕೆಲಸ ಮಾಡುವ ಅಭಿಲಾಷೆಹೊಂದಿದ್ದ ಯುವಕನೊಬ್ಬ ಮಾಸಿಕ ಖನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಘಟನೆ ಚಂದ್ರಲೇಔಟ್ನ ವೆಂಕಟೇಶ್ವರ ಲೇಔಟ್ನಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಕೊಪ್ಪಳದ ಗಂಗಾವತಿ ತಾಲೂಕಿನ ಸಲ್ಲಾದ್ ಜಿನೂರ್(26) ಆತ್ಮಹತ್ಯೆಗೆ ಶರಣಾದವರು.
ನಗರದಲ್ಲಿ ಸಹೋದರನ ಜತೆ ನೆಲೆಸಿದ್ದ ಸಲ್ಲಾದ್, ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದರು. ಮಾಧ್ಯಮದಲ್ಲಿ ಕೆಲಸ ಹುಡುಕುತ್ತಿದ್ದ ಅವರು, ಹಲವೆಡೆ ಅರ್ಜಿಯನ್ನೂ ಹಾಕಿದ್ದರು. ಆದರೆ ಎಲ್ಲಿಯೂ ಕೆಲಸ ಸಿಕ್ಕಿರಲಿಲ್ಲ. ಈ ನಡುವೆ ರಸ್ತೆ ಅಪಘಾತದಲ್ಲಿ ಕಾಲು ಮುರಿದುಕೊಂಡಿದ್ದರಿಂದ ರಾಡ್ ಅಳವಡಿಸಿಕೊಂಡಿದ್ದರು.
ಇದರಿಂದ ಮಾನಸಿಕವಾಗಿ ಕುಗ್ಗಿದ್ದ ಸಲ್ಲಾದ್ ಖನ್ನತೆಗೊಳಗಾಗಿದ್ದರು. ಗುರುವಾರ ಸಂಜೆ ಸಹೋದರ ಮತ್ತು ಸ್ನೇಹಿತರು ಮನೆಯಿಂದ ಹೊರಗೆ ಹೋಗಿದ್ದ ಸಮಯದಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಸಹೋದರ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.