ಕನ್ನಡ ಪುಸ್ತಕ ಪ್ರಾಧಿಕಾರದ ಬೆಳ್ಳಿಹಬ್ಬ 29ರಂದು


Team Udayavani, Aug 28, 2018, 12:46 PM IST

kannada.jpg

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ಬೆಳ್ಳಿಹಬ್ಬ ಕಾರ್ಯಕ್ರಮ ಆಗಸ್ಟ್‌ 29ರಂದು ನಡೆಯಲಿದೆ ಎಂದು ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಹೇಳಿದ್ದಾರೆ. ಕನ್ನಡ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11 ಗಂಟೆಗೆ ನಯನ ಸಭಾಂಗಣದಲ್ಲಿ ಆಯೋಜಿಸಿರುವ ಸಮಾರಂಭವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಡಾ.ಜಯಮಾಲಾ ಉದ್ಘಾಟಿಸುವರು.

ಮುಖ್ಯಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್‌.ಆರ್‌.ವಿಶುಕುಮಾರ್‌ ಸೇರಿ ಹಲವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಬೆಳ್ಳಿ ಹಬ್ಬವನ್ನು ಅವಿಸ್ಮರಣೀಯಗೊಳಿಸುವ ಸಂಬಂಧ ಅಂಧರಿಗಾಗಿ “ಪಂಪ ಭಾರತದ ಆಯ್ದ ಪ್ರಸಂಗಗಳನ್ನು’ ದ್ವನಿ ಹೊತ್ತಿಗೆ ರೂಪದಲ್ಲಿ ಹೊರತರಲಾಗಿದೆ.

ಪ್ರಾಧಿಕಾರದ ಹಿಂದಿನ ಅಧ್ಯಕ್ಷರ ಸಾಧನೆ ಕುರಿತು ಸಾಕ್ಷ್ಯಚಿತ್ರ ನಿರ್ಮಿಸಲಾಗಿದೆ. ಗುಲ್ವಾಡಿ ವೆಂಕಟರಾಯರ “ಇಂದಿರಾಬಾಯಿ’, ಕಾದಂಬರಿಯನ್ನು ಇ-ಪುಸ್ತಕಕ್ಕೆ ಅಳವಡಿಸಿದ್ದು, ಇದರ ಬಿಡುಗಡೆ ಜತೆಗೆ 300 ಪೋಸ್ಟಲ್‌ ಸ್ಟಾಂಪ್‌ ಕವರ್‌ ಮತ್ತು 2 ಸಾವಿರ ಪೋಸ್ಟಲ್‌ ಕವರ್‌ಗಳ ಲೋಕಾರ್ಪಣೆ ಕಾರ್ಯ ಕೂಡ ನಡೆಯಲಿದೆ ಎಂದರು.

ಇದೇ ವೇಳೆ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ, ಡಾ.ಸಿದ್ದಲಿಂಗಯ್ಯ, ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಸೇರಿದಂತೆ ಹಲವು ಲೇಖಕರ 30 ಪುಸ್ತಕಗಳ ಬಿಡಗಡೆ, 50 ಯುವ ಬರಹಗಾರ ಚೊಚ್ಚಲ ಕೃತಿಗಳಿಗೆ ಪ್ರೋತ್ಸಾಹ ಧ‌ನ ವಿತರಣೆ ಸಹ ನಡೆಯಲಿದೆ ಎಂದರು.

ಪ್ರೋತ್ಸಾಹ ಧನದ ಮೊತ್ತ ಏರಿಕೆ: ಈ ಹಿಂದೆ ಯುವ ಬರಹಗಾರರ ಚೊಚ್ಚಲ ಕೃತಿಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಇದೀಗ ಆ ಮೊತ್ತವನ್ನು 15 ಸಾವಿರಕ್ಕೆ ಏರಿಕೆ ಮಾಡಲಾಗಿದೆ. ಬೆಳ್ಳಿ ಹಬ್ಬದ ಅಂಗವಾಗಿ ಪ್ರಾಧಿಕಾರ, ಮನೆ ಮನೆಗೂ ಪುಸ್ತಕ ಕಾರ್ಯಕ್ರಮ ರೂಪಿಸಿದೆ.

ಓದುಗರಲ್ಲಿ ಸಾಹಿತ್ಯದ ಅಭಿರುಚಿ ವೃದ್ಧಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದ್ದು, ಆರಂಭಿಕ ಹಂತದಲ್ಲಿ ಬೆಂಗಳೂರಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಆ ನಂತರ ರಾಜ್ಯದ 25 ಕಡೆಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ವಸುಂಧರಾ ಭೂಪತಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.