ಕಂಪ್ಯೂಟರ್ ಕುರಿತ ಕನ್ನಡ ಪುಸ್ತಕ ವಿರಳ
Team Udayavani, Jul 23, 2018, 12:06 PM IST
ಬೆಂಗಳೂರು: ಸೌಲಭ್ಯ ಹಾಗೂ ಪ್ರೋತ್ಸಾಹ ಇದ್ದರೂ ಸಾಹಿತಿಗಳು ವಿಜ್ಞಾನ, ತಂತ್ರಜ್ಞಾನ ಮತ್ತು ಕಂಪ್ಯೂಟರ್ ವಿಷಯಾಧಾರಿತ ಪುಸ್ತಕಗಳನ್ನು ಕನ್ನಡದಲ್ಲಿ ಬರೆಯುವ ಮನಸು ಮಾಡುತ್ತಿಲ್ಲ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಹೊನ್ನೇಗೌಡ ಕಳವಳ ವ್ಯಕ್ತಪಡಿಸಿದ್ದಾರೆ.
ಕ್ಲಾರಿಟ್ರೀ ಸಂಸ್ಥೆ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲೇಖಕ ಮಹದೇವಯ್ಯ ಅವರ “ವೃತ್ತಿಪರ ಕಂಪ್ಯೂಟರ್ ಸಾಕ್ಷರತೆ’ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು. ಕನ್ನಡಿಗರು ಕಂಪ್ಯೂಟರ್ ಶಿಕ್ಷಣಕ್ಕಾಗಿ ಇಂಗ್ಲಿಷ್ ಪುಸ್ತಕದ ಮೊರೆ ಹೋಗುತ್ತಿದ್ದಾರೆ.
ಬೆಂಗಳೂರಿನಲ್ಲಿರುವ 3500ಕ್ಕೂ ಅಧಿಕ ಐಟಿ ಕಂಪನಿಗಳಲ್ಲಿ 10 ಸಾವಿರಕ್ಕೂ ಹೆಚ್ಚು ಇಂಜಿನಿಯರ್‌ಗಳು, ವಿಜ್ಞಾನಿಗಳು ಕೆಲಸ ಮಾಡುತ್ತಿ¨ªಾರೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರ ಜಿಡಿಪಿಗೂ ಸಾಕಷ್ಟು ಕೊಡುಗೆ ನೀಡುತ್ತಿದೆ. ಇಷ್ಟಾದರೂ ಕನ್ನಡದಲ್ಲಿ ಸುಲಭವಾದ ತಂತ್ರಾಂಶ ಲಭ್ಯವಾಗುತ್ತಿಲ್ಲ ಎಂದರು.
ನಮ್ಮಲ್ಲಿ ಎಲ್ಲ ಅನುಕೂಲ ಇದ್ದರೂ ಮಾಹಿತಿ ತಂತ್ರಜ್ಞಾನ ಹಾಗೂ ಕಂಪ್ಯೂಟರ್ ಕುರಿತ ಕನ್ನಡ ಪುಸ್ತಕ ಬರೆಯಲು ಸಾಧ್ಯವಾಗುತ್ತಿಲ್ಲ. ಕನ್ನಡ ಸಾಫ್ಟ್ವೇರ್‌ಗಳು ಬರುತ್ತಿಲ್ಲ ಎಂದ ಅವರು, ಕನ್ನಡ ಪುಸ್ತಕ ಬರೆಯಲು ಲೇಖಕರು ಆಸಕ್ತಿ ತೋರಬೇಕು ಎಂದು ಸಲಹೆ ನೀಡಿದರು.
ದೇಶದ ನಗರ ಪ್ರದೇಶದ ಶೇ.60ರಷ್ಟು ಹಾಗೂ ಗ್ರಾಮೀಣ ಭಾಗದ ಶೇ.15ರಷ್ಟು ಜನ ಇಂಟರ್‌ನೆಟ್ ಬಳಸುತ್ತಿದ್ದಾರೆ. ತಮಿಳು ಮತ್ತು ಹಿಂದಿ ಭಾಷೆಯಲ್ಲಿ ಗೂಗಲ್ ಸರ್ಚಿಂಗ್ ಹೆಚ್ಚಾಗುತ್ತಿದೆ. ಬಹುತೇಕರು ಮಾತೃಭಾಷೆಯಲ್ಲಿ ಇಂಟರ್‌ನೆಟ್ ಸರ್ಚ್ ಮಾಡಲು ಬಯಸುತ್ತಾರೆ. ಆದರೆ, ಅದು ಕನ್ನಡಿಗರಿಗೆ ಸುಲಭ ಸಾಧ್ಯವಾಗಿಲ್ಲ.
ಹೀಗಾಗಿ ಮಾತೃಭಾಷೆಯಲ್ಲಿ ತಂತ್ರಜ್ಞಾನ ಕುರಿತ ಹೆಚ್ಚು ಹೆಚ್ಚು ಕೃತಿಗಳನ್ನು ರಚಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಲೇಖಕ ಮಹದೇವಯ್ಯ ಅವರು ಉತ್ತಮ ಕೆಲಸ ಮಾಡಿದ್ದಾರೆ ಎಂದು ಶ್ಲಾ ಸಿದರು. ವಿಜ್ಞಾನಿ ಡಾ.ಸುಧೀಂದ್ರ ಹಾಲೊªಡ್ಡೇರಿ ಮಾತನಾಡಿ, ಕಂಪ್ಯೂಟರ್ ನಮ್ಮ ನಿತ್ಯ ಜೀವನದ ಸಂಗತಿ. ವಿಜ್ಞಾನ ಮತ್ತು ತಂತ್ರಜ್ಞಾನದ ಕನ್ನಡ ಬರಹಗಳನ್ನು ಯಾರೂ ಓದುವುದಿಲ್ಲ ಎಂಬ ಭ್ರಮೆ ಬಿಟ್ಟು ಹೆಚ್ಚು ಪುಸ್ತಕ ಬರೆಯಬೇಕು.
ಕನ್ನಡದ ಶಾಸ್ತ್ರೀಯ ಸ್ಥಾನಮಾನಕ್ಕೆ ಇಂತಹ ಕೃತಿಗಳು ಅವಶ್ಯ. ತಂತ್ರಜ್ಞಾನದ ನಾಗಾಲೋಟದ ಯುಗದಲ್ಲಿ ಕಂಪ್ಯೂಟರ್ ಕುರಿತ ಕನ್ನಡ ಬರಹ ಕಬ್ಬಿಣದ ಕಡಲೆ ಅಲ್ಲ ಎಂಬುದು ಈ ಪುಸ್ತಕದಿಂದ ಸ್ಪಷ್ಟವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್, ಲೇಖಕ ಮಹದೇವಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.