ಕೊಲೆಗಾರ 15 ನಿಮಿಷದಲ್ಲೇ ಸೆರೆ
Team Udayavani, Dec 22, 2019, 3:05 AM IST
ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆ ಯಲ್ಲಿ ಆಟೋ ಚಾಲಕನನ್ನು ಸ್ನೇಹಿತನೇ ಆತನ ಮನೆಗೆ ನುಗ್ಗಿ ಮಾರಕಾಸ್ತ್ರದಿಂದ ಇರಿದು ಹತ್ಯೆಗೈದಿರುವ ಘಟನೆ ಬೈಯಪ್ಪ ನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದ್ದು, ಕೃತ್ಯ ನಡೆದ ಹದಿನೈದು ನಿಮಿಷದಲ್ಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುದ್ದುಗುಂಟೆಪಾಳ್ಯದ ಸಂತೋಷ್ (27) ಮೃತನು.
ಕೃಷ್ಣಪ್ಪ ಗಾರ್ಡನ್ ನಿವಾಸಿ ಆನಂದ್ (26) ಬಂಧಿತನಾಗಿದ್ದು, ಆರೋಪಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆಟೋ ಚಾಲಕ ಸಂತೋಷ್ ವಿರುದ್ಧ ಮಹದೇವಪುರ ಠಾಣೆಯಲ್ಲಿ ರೌಡಿಪಟ್ಟಿ ತೆರೆಯಲಾಗಿದ್ದು, ಹಲವು ವರ್ಷಗಳಿಂದ ಆಟೋ ಚಾಲನೆ ಮಾಡಿಕೊಂಡು ಜೀವನ ನಡೆಸುತ್ತಿದ್ದಾನೆ. ಮೂರು ವರ್ಷ ಗಳ ಹಿಂದಷ್ಟೇ ಸಂತೋಷ್ ಮದುವೆ ಯಾಗಿದ್ದು, ಸುದ್ದುಗುಂಟೆ ಪಾಳ್ಯದಲ್ಲಿ ದಂಪತಿ ವಾಸವಾಗಿದ್ದರು.
ಆರೋಪಿ ಆನಂದ್ ಕೂಡ ಆಟೋ ಚಾಲಕನಾಗಿದ್ದು, ಸಂತೋಷ್‌ನ ಸ್ನೇಹಿತನಾಗಿದ್ದಾನೆ. ಕೆಲ ದಿನಗಳ ಹಿಂದೆ ಆಟೋ ಪಾರ್ಕಿಂಗ್ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿತ್ತು. ಆಗ ಸಂತೋಷ್, ಆನಂದ್ ಮೇಲೆ ಹಲ್ಲೆ ನಡೆಸಿದ್ದ. ಇದರಿಂದ ಆಕ್ರೋಶಗೊಂಡಿದ್ದ ಆನಂದ್, ಆತನ ವಿರುದ್ಧ ದ್ವೇಷ ಸಾಧಿಸುತ್ತಿದ್ದ. ಶನಿವಾರ ಸಂಜೆ ಮದ್ಯ ಸೇವಿಸಿ ಸಂತೋಷ್‌ಗೆ ಕರೆ ಮಾಡಿದ ಆನಂದ್ ಮತ್ತೂಮ್ಮೆ ವಾಗ್ವಾದ ನಡೆಸಿದ್ದಾನೆ. ಅಲ್ಲದೆ, ಎಲ್ಲಿರುವೆ ಅಲ್ಲಿಗೆ ಬಂದು ಮಾತನಾಡುತ್ತೇನೆ ಎಂದು ಖಚಿತ ಪಡಿಸಿಕೊಂಡಿದ್ದಾನೆ.
ನಂತರ ಸಂಜೆ ಏಳು ಗಂಟೆ ಸುಮಾರಿಗೆ ಸಂತೋಷ್ ಮನೆಗೆ ನುಗ್ಗಿದ ಆರೋಪಿ, ಏಕಾಏಕಿ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಕೆಳಗೆ ಬಿದ್ದ ಸಂತೋಷ್‌ನ ಚೀರಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಾರ್ವಜನಿಕ ರನ್ನು ಕಂಡ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಆದರೂ ಕೆಲವರು ಆರೋಪಿಯನ್ನು ಬೆನ್ನಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.
ಬೆನ್ನಟ್ಟಿದ ಪೊಲೀಸರು: ಅದೇ ವೇಳೆ ಗಸ್ತು ತಿರುಗುತ್ತಿದ್ದ ಬೈಯಪ್ಪನಹಳ್ಳಿ ಠಾಣೆ ಇನ್‌ಸ್ಪೆಕ್ಟರ್ ಹಾಗೂ ಸಿಬ್ಬಂದಿ ನೂರಾರು ಮಂದಿ ಜಮಾಯಿಸಿದ್ದನ್ನು ಗಮನಿಸಿ ಸ್ಥಳಕ್ಕೆ ಆಗಮಿಸಿ, ಸ್ಥಳಿಯರಿಂದ ಮಾಹಿತಿ ಪಡೆದಿ ದ್ದಾರೆ. ಈ ಮಧ್ಯೆ ಪೊಲೀಸರು ಗಸ್ತು ತಿರುಗುತ್ತಿದ್ದ ಮಾರ್ಗದಲ್ಲೇ ಆರೋಪಿ ಓಡಿ ಹೋಗುತ್ತಿದ್ದನ್ನು ಗಮನಿಸಿದ ಸಿಬ್ಬಂದಿಯೊಬ್ಬರು ಇನ್‌ಸ್ಪೆಕ್ಟರ್‌ಗೆ ಮಾಹಿತಿ ನೀಡಿದರು.
ಕೂಡಲೇ ಆರೋಪಿಯನ್ನು ಬೆನ್ನಟ್ಟಿದ್ದ ತಂಡ, ಘಟನೆ ನಡೆದ ಹದಿನೈದು ನಿಮಿಷದಲ್ಲೇ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಘಟನೆ ನಡೆದ ವೇಳೆ ಸಂತೋಷ್ ಮನೆಯಲ್ಲಿ ಪತ್ನಿ ಇರಲಿಲ್ಲ. ಆಕೆಗೂ ಮಾಹಿತಿ ನೀಡಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.