ಬಜೆಟ್‌ ಸಭೆಯಲ್ಲಿ ನುಸುಳಿದ ಚೂರಿ

Team Udayavani, Mar 9, 2018, 11:52 AM IST

budget00.jpg

ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥಶೆಟ್ಟಿ ಅವರಿಗೆ ಚೂರಿ ಇರಿತ ಪ್ರಕರಣ ವಿಚಾರ ಬಿಬಿಎಂಪಿ ಮೈತ್ರಿ ಪಕ್ಷಗಳಾದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರ ನಡುವಿನ ವಾಕ್ಸಮರಕ್ಕೆ ಕಾರಣವಾಯಿತು.

ಗುರುವಾರ ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ, ಕಳೆದ ಸಾಲಿನ ಬಜೆಟ್‌ನಲ್ಲಿ ನಗರದ ಹಲವೆಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದಾಗಿ ಘೋಷಿಸಲಾಗಿತ್ತು. ಆದರೆ, ಈವರೆಗೆ ಅದು ಜಾರಿಯಾಗಿಲ್ಲ.

ಜತೆಗೆ ಈ ಬಾರಿಯ ಬಜೆಟ್‌ನಲ್ಲಿಯೂ ಉಲ್ಲೇಖವಿಲ್ಲ. ನಗರದಲ್ಲಿ ನ್ಯಾಯಮೂರ್ತಿಗಳಿಗೇ ರಕ್ಷಣೆ ಇಲ್ಲ. ಇನ್ನು ಜನಸಾಮಾನ್ಯರಿಗೆ ಹೇಗೆ ರಕ್ಷಣೆ ಸಿಗುತ್ತದೆ. ಬೆಂಗಳೂರು ಗೂಂಡಾಗಳ, ರೌಡಿಗಳ ನಗರವಾಗಿದೆ ಎಂದು ದೂರಿದರು. 

ಅದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್‌ ಸದಸ್ಯರು, ನಿಮ್ಮದೇ ಪಕ್ಷದ ಸದಸ್ಯರೊಬ್ಬರು ಮಂಡಿಸಿರುವ ಬಜೆಟ್‌ಗೆ ಗೌರವ ನೀಡುವುದನ್ನು ಕಲಿಯಿರಿ. ಬಜೆಟ್‌ನಲ್ಲಿರುವ ಅಂಶಗಳ ಬಗ್ಗೆ ಮಾತ್ರ ಸಭೆಯಲ್ಲಿ ಮಾತನಾಡಿ ಅದನ್ನು ಬಿಟ್ಟು ಬೇರೆ ಮಾತನಾಡುವುದು ಬೇಡ ಎಂದು ತಿರುಗೇಟು ನೀಡಿದರು. 

ಶರವಣ ಅವರ ಆರೋಪಕ್ಕೆ ಉತ್ತರಿಸಿದ ಮೇಯರ್‌ ಸಂಪತ್‌ರಾಜ್‌, ನೀವು ಈಗ ಬಿಬಿಎಂಪಿಯಲ್ಲಿದ್ದೀರಿ, ಇಲ್ಲಿಂದ ಸುರಕ್ಷಿತವಾಗಿ ಹೊರ ಹೋಗುತ್ತೀರಿ, ಆ ಬಗ್ಗೆ ಚಿಂತೆ ಬೇಡ. ನಿಮಗೆ ರಕ್ಷಣೆ ನೀಡುವುದು ನಮ್ಮ ಜವಾಬ್ದಾರಿ ಎಂದು ತೀಕ್ಷ್ಣವಾಗಿ ಉತ್ತರಿಸಿದರು. 

ನಂತರ ಜೆಡಿಎಸ್‌ ಶಾಸಕ ಗೋಪಾಲಯ್ಯ ಬಜೆಟ್‌ ಕುರಿತು ಮಾತನಾಡಲು ಮುಂದಾದಾಗ ಅವರನ್ನು ತಡೆದ ಮೇಯರ್‌, ಕಾಂಗ್ರೆಸ್‌ ಸದಸ್ಯರಿಗೆ ಮಾತನಾಡಲು ಅವಕಾಶ ನೀಡಿದ್ದು, ನೀವು ನಂತರ ಮಾತನಾಡಿ ಎಂದರು. ಇದರಿಂದ ಕೋಪಗೊಂಡ ಗೋಪಾಲಯ್ಯ, ಜೆಡಿಎಸ್‌ನವರಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ಹೀಗಾದರೆ, ಬಜೆಟ್‌ ಮೇಲೆ ನೀವೆ ಚರ್ಚೆ ಮಾಡಿ, ನೀವೆ ಅನುಮೋದನೆ ಪಡೆಯಿರಿ. ನಮ್ಮ ಸಹಕಾರ ನಿಮಗೇಕೆ? ಎಂದು ದೂರಿದರು. 

ಅದಕ್ಕೆ ಉತ್ತರಿಸಿದ ಮೇಯರ್‌, ಜೆಡಿಎಸ್‌ ಸದಸ್ಯರಿಗೆ ಈಗಾಗಲೇ ಮಾತನಾಡಲು ಅವಕಾಶ ನೀಡಲಾಗಿದೆ. ಎಲ್ಲದಕ್ಕೂ ಹೆದರಿಸಬೇಡಿ. ನೀವು ಹೇಳಿದಾಗೆಲ್ಲ ಕೇಳಲು ಸಾಧ್ಯವಿಲ್ಲ ಎಂದು ಗರಂ ಆದರು. ಈ ವೇಳೆ ಎರಡು ಪಕ್ಷಗಳ ಸದಸ್ಯರ ನಡುವೆ ವಾಗ್ವಾದ ನಡೆದು, ಹೆದರಿಸಬೇಡಿ ಎಂಬ ಪದ ತೆಗೆಯಬೇಕು ಎಂದು ಜೆಡಿಎಸ್‌ ಸದಸ್ಯರು ಬಾವಿಗಿಳಿದು ಪ್ರತಿಭಟಿಸಿದರಿಂದ ಮೇಯರ್‌ ಪದವನ್ನು ಕಡತದಿಂದ ತೆಗೆದರು. 

ದಲಿತರಿಗೆ ಮೀಸಲಾತಿ ನೀಡಿಲ್ಲ: ನಗರದಲ್ಲಿ ಬೀದಿ ದೀಪಗಳನ್ನು ಬದಲಿಸಲು ಮುಂದಾಗಿದ್ದು, ಗುತ್ತಿಗೆ ಪಡೆಯುವವರು 150 ಕೋಟಿ ರೂ. ವಾರ್ಷಿಕ ವ್ಯವಹಾರ ನಡೆಸಿರಬೇಕು ಎಂಬ ನಿಯಮ ಹಾಕಲಾಗಿದ್ದು, ಟೆಂಡರ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ.25ರಷ್ಟು ಮೀಸಲಾತಿ ನೀಡಬೇಕು. ಇಲ್ಲವೆ, ಟೆಂಡರ್‌ ಪ್ರಕ್ರಿಯೆ ರದ್ದುಗೊಳಿಸಬೇಕು ಎಂದು ವಿರೋಧ ಪಕ್ಷ ನಾಯಕ ಪದ್ಮನಾಭರೆಡ್ಡಿ ಒತ್ತಾಯಿಸಿದರು. 

ಅದಕ್ಕೆ ಉತ್ತರಿಸಿದ ಪಾಲಿಕೆ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌, ನಗರದಲ್ಲಿ ಎಲ್‌ಇಡಿ ಬಲ್ಬ್ಗಳ ಅಳವಡಿಕೆಯಿಂದ ಶೇ.50ರಷ್ಟು ವಿದ್ಯುತ್‌ ಉಳಿತಾಯವಾಗಲಿದೆ. ಅದಕ್ಕಾಗಿ ಜಾಗತಿಕ ಟೆಂಡರ್‌ ಕರೆಯಲಾಗಿದ್ದು, ಸರ್ಕಾರದ ಆದೇಶದ ಪ್ರಕಾರ 50 ಲಕ್ಷ ರೂ.ವರೆಗಿನ ಕಾಮಗಾರಿಗಳಿಗೆ ಎಸ್‌ಸಿ, ಎಸ್‌ಟಿ ಗುತ್ತಿಗೆದಾರರಿಗೆ ಶೇ. 25 ಮೀಸಲಾತಿ ನೀಡಲಾಗುತ್ತದೆ. ಹಾಗಾಗಿ ನಿಯಮ ಉಲ್ಲಂಘನೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. 

ಉಪಮೇಯರ್‌ಗೆ “ಮೇಯರ್‌’ ಭಾಗ್ಯವಿಲ್ಲ: ವಿಶ್ವ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ಮೇಯರ್‌ ಅವರು ಕೆಲಹೊತ್ತು ವಿಶ್ರಾಂತಿ ಪಡೆದು ಸಭೆ ನಡೆಸುವ ಅವಕಾಶವನ್ನು ಉಪಮೇಯರ್‌ ಪದ್ಮಾವತಿ ನರಸಿಂಹಮೂರ್ತಿ ಅವರಿಗೆ ನೀಡಬೇಕು ಎಂದು ಪದ್ಮನಾಭರೆಡ್ಡಿ ಮೇಯರ್‌ ಅವರಿಗೆ ಮನವಿ ಮಾಡಿದರು. ಆದರೆ, ಅದಕ್ಕೆ ಮೇಯರ್‌ ಸಂಪತ್‌ರಾಜ್‌ ಯಾವುದೇ ಪ್ರತಿಕ್ರಿಯೆ ನೀಡಿದೆ ಸುಮ್ಮನಾದರು. 

ಮಹಿಳೆಯರಿಗೆ ಗುಲಾಬಿ: ಮಹಿಳಾ ದಿನಚಾರಣೆಯ ಅಂಗವಾಗಿ ಪಾಲಿಕೆಯ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಗುರುವಾರ ಪಾಲಿಕೆ ಮಹಿಳಾ ಸದಸ್ಯರು ಹಾಗೂ ಮಹಿಳಾ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಗುಲಾಬಿ ಹೂ ನೀಡಿ ಶುಭ ಕೋರಿದರು.

ಟಾಪ್ ನ್ಯೂಸ್

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bengaluru

ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

2

Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್‌ ಮೂಲಕ ನಕ್ಸಲ್‌ ಸೋಮನ್‌ ವಿಚಾರಣೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.