ಕೆಪಿಸಿಸಿ ಎಸ್ಸಿ ಘಟಕದ ಸಂಚಾಲಕ ಬಿಜೆಪಿಗೆ
Team Udayavani, Nov 2, 2017, 7:00 AM IST
ಬೆಂಗಳೂರು: ಕೆಪಿಸಿಸಿ ಪರಿಶಿಷ್ಟ ಜಾತಿ(ಎಸ್ಸಿ) ಘಟಕದ ಸಂಚಾಲಕರಾಗಿದ್ದ ಭೋವಿ ಜನಾಂಗ ಒಕ್ಕೂಟದ
ರಾಜ್ಯಾಧ್ಯಕ್ಷ ನಂಜಪ್ಪ ಬೋವಿ ಬುಧವಾರ ಬಿಜೆಪಿ ಸೇರಿದ್ದಾರೆ. ಇವರೊಂದಿಗೆ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಡಾ.ಸಿ.ರಾ.ವೀರಣ್ಣ, ರಾಜ್ಯ ಪದಾಧಿಕಾರಿಗಳಾದ ವೀರೇಶ್ ಕುಮಾರ್, ಎಚ್.ಸಿ.ರವಿ, ವೇಣುಗೋಪಾಲ್, ಶ್ರೀನಿವಾಸ ಬಾಬು, ಸವಿತಾ ಸೇರಿ ನೂರಾರು ಮಂದಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಬಳಿಕ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಈ ಮುಖಂಡರು ಬಿಜೆಪಿ ಸೇರಿಕೊಂಡರು. ಬಿಎಸ್ವೈ ಪಕ್ಷದ ಧ್ವಜ ನೀಡಿ ಶಾಲು ಹೊದಿಸುವ ಮೂಲಕ ಎಲ್ಲರನ್ನೂ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಯಡಿಯೂರಪ್ಪ, ಮುಂಬರುವ ದಿನಗಳಲ್ಲಿ ಇನ್ನಷ್ಟು ಮಂದಿ ಬಿಜೆಪಿ ಸೇರಲಿದ್ದಾರೆ. ರಾಜ್ಯೋತ್ಸವ ದಿವಸದಂದು ಪಕ್ಷದಿಂದ ದೂರವಿರುವವರನ್ನು ಮರಳಿ ಪಕ್ಷಕ್ಕೆ ಬರಮಾಡಿಕೊಳ್ಳುವ ಸಂಕಲ್ಪ ಮಾಡಲಾಗಿದೆ. ಪಕ್ಷ ಸೇರಿದವರೆಲ್ಲರೂ ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ರಾಜ್ಯದಲ್ಲಿ ಮತ್ತಷ್ಟು ಬಲಪಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ರಾಮಚಂದ್ರಗೌಡ, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ನಾಯಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ
Winter session: ವರ್ಷದ ಕೊನೆಯ ಸಂಸತ್ ಅಧಿವೇಶನ ಫಲಪ್ರದವಾಗಲಿ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.