ಪಾಲಿಕೆ ಪ್ರಯೋಗಾಲಯಗಳಿಗೆ ಸ್ಥಳದ ಅಭಾವ
Team Udayavani, Apr 18, 2017, 12:27 PM IST
ಬೆಂಗಳೂರು: ಬಿಬಿಎಂಪಿಯಿಂದ ಕೈಗೊಳ್ಳುವ ಕಾಮಗಾರಿಗಳಿಗೆ ಬಳಸುವ ಕಚ್ಚಾ ವಸ್ತುಗಳ ಗುಣಮಟ್ಟ ಪರೀಕ್ಷೆಗೆ ಪಾಲಿಕೆಯಿಂದಲೇ ನಿರ್ಮಿಸಲು ಉದ್ದೇಶಿಸಿದ್ದ ಪ್ರಯೋಗಾಲಯಗಳಿಗೆ ಸ್ಥಳ ಸಿಗುತ್ತಿಲ್ಲ. 2016- 17ನೇ ಸಾಲಿನ ಬಜೆಟ್‌ನಲ್ಲಿ 8 ವಲಯಗಳಲ್ಲೂ ತಲಾ ಒಂದು ಪ್ರಯೋಗಾಲಯ ನಿರ್ಮಿಸುವ ಯೋಜನೆಯನ್ನು ಘೋಷಿಸಲಾಗಿತ್ತು.
ಆದರೆ, ಪ್ರಯೋಗಾಲಯ ನಿರ್ಮಾಣಕ್ಕೆ ಸಮರ್ಪಕ ಜಾಗ ದೊರೆಯದ ಹಿನ್ನೆಲೆಯಲ್ಲಿ ಪಾಲಿಕೆಯ ಮಹತ್ವದ ಯೋಜನೆ ನೆನೆಗುದಿಗೆ ಬಿದ್ದಂತಾಗಿದೆ. ಬಿಬಿಎಂಪಿ ಕಾಮಗಾರಿಗಳಲ್ಲಿ ಗುತ್ತಿಗೆದಾರರು ಗುಣಮಟ್ಟದ ವಸ್ತುಗಳನ್ನು ಬಳಸುವುದಿಲ್ಲ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಕಾಮಗಾರಿಗಳಿಗೆ ಬಳಸಲಾಗುವ ವಸ್ತುಗಳ ಪರೀಕ್ಷೆಗೆ ಪಾಲಿಕೆ ವತಿಯಿಂದಲೇ ಪ್ರಯೋಗಾಲಯ ಸ್ಥಾಪಿಸಲು ನಿರ್ಧರಿಸಲಾಗಿತ್ತು.
ಎಂಟು ವಲಯಗಳಲ್ಲಿ ಪ್ರಯೋಗಾಲಯ ನಿರ್ಮಾಣಕ್ಕೆ ಸಂಬಂಧಿಸಿದಂತೆ 19.52 ಕೋಟಿ ರೂ. ಯೋಜನಾ ವೆಚ್ಚದ ಪ್ರಸ್ತಾಪ ಸಿದ್ಧಪಡಿಸಲಾಗಿತ್ತು. ಜತೆಗೆ ಯಂತ್ರೋಪಕರಣ, ಸಿಬ್ಬಂದಿ, ಸಂಚಾರಿ ಘಟಕಗಳಿಗಾಗಿ 2.44 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿತ್ತು. ಬಿಬಿಎಂಪಿಯಲ್ಲಿ ಯಾವುದೇ ಕಾಮಗಾರಿ ನಡೆಸುವುದಕ್ಕೂ ಮುನ್ನ ಕಾಮಗಾರಿಗೆ ಬಳಸುವ ವಸ್ತುಗಳನ್ನು ಮೂರು ರೀತಿಯಲ್ಲಿ ಪರೀಕ್ಷಿಸಲಾಗುತ್ತಿದೆ.
ಗುತ್ತಿಗೆದಾರರು ಎನ್‌ಎಬಿಸಿ ಸಂಸ್ಥೆಯಿಂದ ಪರೀಕ್ಷೆ ನಡೆಸಿ ಪ್ರಮಾಣ ಪತ್ರ ಒದಗಿಸಬೇಕಿದೆ. ಅದಾದ ನಂತರ ಬಿಬಿಎಂಪಿ ಅಧಿಕಾರಿಗಳಿಗೆ ಅದರಲ್ಲಿ ದೋಷ ಕಂಡು ಬಂದರೆ ಈಗಿರುವ ಕೇಂದ್ರ ಕಚೇರಿಯಲ್ಲಿನ ಪ್ರಯೋಗಾಲಯದಲ್ಲಿ ಮತ್ತು ನಿವೃತ್ತ ಮುಖ್ಯ ಇಂಜಿನಿಯರ್‌ಗಳಿಂದಲೂ ಪರೀಕ್ಷಿಸಲಾಗುತ್ತಿತ್ತು. ಈ ಮೂರು ರೀತಿಯ ಹಂತದ ಪರೀಕ್ಷೆ ತಪ್ಪಿಸಲು ಪ್ರತಿ ವಲಯದಲ್ಲಿ ಪ್ರಯೋಗಾಲಯ ನಿರ್ಮಾಣಕ್ಕೆ ಪಾಲಿಕೆ ಮುಂದಾಗಿತ್ತು.
ಪಾಲಿಕೆಯ ವ್ಯಾಪ್ತಿಯಲ್ಲಿ ನಡೆಸಲಾಗುವ ಕಾಮಗಾರಿಗಳಿಗೆ ಬಳಸುವ ವಸ್ತುಗಳ ಗುಣಮಟ್ಟ ಪರೀಕ್ಷೆಗೆಂದು ವಲಯ ಮಟ್ಟದಲ್ಲಿ ಪ್ರಯೋಗಾಲಯ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಆದರೆ, ಅದಕ್ಕೆ ಸಂಬಂಧಿಸಿದಂತೆ ಸೂಕ್ತ ಜಾಗ ಸಿಗದ ಕಾರಣ ಇನ್ನೂ ಪ್ರಯೋಗಾಲಯ ನಿರ್ಮಾಣ ಸಾಧ್ಯವಾಗಿಲ್ಲ.
-ಎಂ.ಆರ್.ವೆಂಕಟೇಶ್, ಬಿಬಿಎಂಪಿ ಪ್ರಧಾನ ಎಂಜಿನಿಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ- ಮಕ್ಕಳ ಆರೋಗ್ಯದ ಚಿಕಿತ್ಸೆಯನ್ನು ಸೇವೆ ಎಂಬಂತೆ ಮಾಡಬೇಕು: ಅರವಿಂದ ಲಿಂಬಾವಳಿ
Bengaluru: ಕಬ್ಬನ್ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ
Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್ ಭಕ್ಷ್ಯಗಳಿವು…
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Renukaswamy Case: ಶೆಡ್‌ನಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.