ಕಸ-ರಸದ ಜಾಗೃತಿಗೆ ಶಾಸಕ ಒತ್ತಾಯ
Team Udayavani, Mar 13, 2017, 12:22 PM IST
ಬೆಂಗಳೂರು: ತ್ಯಾಜ್ಯದಿಂದ ಆದಾಯ ಗಳಿಸುವುದು ಹೇಗೆ ಎಂಬುದರ ಬಗ್ಗೆ ನಾಗರಿಕರಿಗೆ ತಿಳುವಳಿಕೆ ಮೂಡಿಸಲು ಬಿಬಿಎಂಪಿ ಕ್ರಮಕೈಗೊಳ್ಳಬೇಕು ಎಂದು ಶಾಸಕ ಕೆ.ಗೋಪಾಲಯ್ಯ ಹೇಳಿದ್ದಾರೆ. ಭಾನುವಾರ ನಗರದ ನಂದಿನಿ ಬಡಾವಣೆಯಲ್ಲಿ ಆಯೋಜಿಸಿದ್ದ “ಕಾಂಪೋಸ್ಟ್ ಸಂತೆ’ಗೆ ಚಾಲನೆ ನೀಡಿದರು.
“ತ್ಯಾಜ್ಯವನ್ನು ನಿರುಪಯುಕ್ತವೆಂದು ಬಗೆಯದೇ ಅದೊಂದು ಆದಾಯದ ಮೂಲ ಎಂದು ಪರಿಗಣಿಸಿದರೆ ನಾಗರಿಕರು ಲಾಭ ಗಳಿಸಬಹುದು. ತ್ಯಾಜ್ಯವನ್ನು ಮನೆ ಆವರಣದಲ್ಲಿಯೇ ಸುಲಭವಾಗಿ ಗೊಬ್ಬರವಾಗಿ ಪರಿವರ್ತಿಸಬಹುದು. ಇದರಿಂದ ನಗರದಲ್ಲಿನ ತ್ಯಾಜ್ಯ ಸಮಸ್ಯೆಗೂ ಪರಿಹಾರ ಸಿಗಲಿದೆ. ಗೊಬ್ಬರ ತಯಾರಿಸುವ ವಿಧಾನಗಳನ್ನು ಕಾಂಪೋಸ್ಟ್ ಸಂತೆಗಳ ಮೂಲಕ ಜನರಿಗೆ ತಿಳಿಸಿಕೊಡಬೇಕು. ಇಂತಹ ಕಾರ್ಯಕ್ರಮಗಳನ್ನು ಪ್ರತಿ ವಾರ್ಡ್‌ನಲ್ಲೂ ಹಮ್ಮಿಕೊಳ್ಳಬೇಕು,” ಎಂದರು.
ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಮಾತನಾಡಿ, “”ನಾಗರಿಕರಲ್ಲಿ ತ್ಯಾಜ್ಯ ವಿಂಗಡಣೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕಾಂಪೋಸ್ಟ್ ಸಂತೆಗಳನ್ನು ಆಯೋಜಿಸಲಾಗುತ್ತಿದೆ. ಆ ಮೂಲಕ ನಗರದಲ್ಲಿನ ತ್ಯಾಜ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು. ಜತೆಗೆ ತ್ಯಾಜ್ಯದಿಂದ ಸಾವಯವ ಗೊಬ್ಬರ ತಯಾರಿಕೆ, ಅನಿಲ ಉತ್ಪಾದನೆ ಸೇರಿ ಯಾವ ರೀತಿ ತ್ಯಾಜ್ಯವನ್ನು ಆದಾಯದ ಮೂಲವಾಗಿ ಮಾಡಿಕೊಳ್ಳಬಹುದು ಎಂಬುದನ್ನು ಸಂತೆಗಳಲ್ಲಿ ನಾಗರಿಕರಿಗೆ ತಿಳಸಲಾಗುವುದು,” ಎಂದರು.
ಪಾಲಿಕೆ ಸದಸ್ಯ ರಾಜೇಂದ್ರ ಕುಮಾರ್ ಮಾತನಾಡಿ, “ಕಾಂಪೋಸ್ಟ್ ಸಂತೆಯಲ್ಲಿ 40ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಮನೆಯಲ್ಲಿ ತ್ಯಾಜ್ಯಕ್ಕೆ ಬಳಸುವ ಬುಟ್ಟಿಗಳು, ಗೊಬ್ಬರ ಹಾಗೂ ಜೈವಿಕ ಅನಿಲ ಉತ್ಪಾದಿಸುವ ವಿಧಾನಗಳ ಬಗ್ಗೆ ನಾಗರಿಕರಿಗೆ ಮಾಹಿತಿ ನೀಡಲಾಗಿದೆ. ನಂದಿನಿ ಬಡಾವಣೆಯನ್ನು ಸ್ವತ್ಛ ಹಾಗೂ ಮಾದರಿ ಬಡಾವಣೆಯನ್ನಾಗಿ ಮಾಡುವ ಸದುದ್ದೇಶಕ್ಕೆ ವಾರ್ಡ್‌ನ ಜನತೆ ತ್ಯಾಜ್ಯ ವಿಂಗಡಣೆಗೆ ಹೆಚ್ಚಿನ ಆದ್ಯತೆ ನೀಡಬೇಕು,” ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kollywood: ಲೇಡಿ ಸೂಪರ್ ಸ್ಟಾರ್ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್ ದಾಖಲು
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು
Max Movie: ಅಂತೂ ಬಂದೇ ಬಿಡ್ತು ʼಮ್ಯಾಕ್ಸ್ʼ ರಿಲೀಸ್ ಡೇಟ್.. ಫ್ಯಾನ್ಸ್ ಖುಷ್
Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.