ಉಳ್ಳವರು ಬಡವರಿಗೆ ನೆರವಾಗಲಿ
Team Udayavani, Apr 10, 2017, 11:55 AM IST
ಕೆಂಗೇರಿ: ಉಳ್ಳವರು ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಬಡವರ ನೆರವಿಗೆ ಧಾವಿಸುವ ಮೂಲಕ ಸಮಾಜ ಮುಖೀಗಳಾಗಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಸಲಹೆ ನೀಡಿದ್ದಾರೆ. ಮಾಗಡಿ ಮುಖ್ಯರಸ್ತೆಯ ಮಾಚೋ ಹಳ್ಳಿಯ ಮೂಕಾಂಬಿಕ ನಗರ ಹಾಗೂ ವಿವೇಕಾನಂದ ನಗರದಲ್ಲಿ ಶುದ್ಧ ಕುಡಿ ಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದರು.
“ಇತ್ತೀಚಿನ ದಿನಗಳಲ್ಲಿ ಭೂಮಿ ಬೆಲೆ ಗಗನಕ್ಕೇರಿದೆ. ಹೀಗಿದ್ದರೂ, ಕುಡಿಯುವ ನೀರು ಘಟಕಕ್ಕೆ ಜಾಗವನ್ನು ಉಚಿತವಾಗಿ ನೀಡಿದ ಟಿ.ಎನ್.ಜವರಾಯಿಗೌಡ ಹಾಗೂ ಆ ಜಾಗದಲ್ಲಿ ಸ್ವಂತ ಖರ್ಚಿನಿಂದ ಕಟ್ಟಡ ನಿರ್ಮಾಣ ಮಾಡಿ ಕೊಟ್ಟು ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲು ಕಾರಣಕರ್ತರಾದ ಜಯಮ್ಮ ಭೈರಪ್ಪ ಕಾರ್ಯ ವೈಖರಿ ಮಾದರಿಯಾಗಿದೆ,’ ಎಂದು ಶ್ಲಾ ಸಿದರು.
ಗ್ರಾಪಂ ಮಾಜಿ ಅಧ್ಯಕ್ಷ ಎಂ.ಬಿ. ನರಸಿಂಹಮೂರ್ತಿ ಮಾತನಾಡಿ “ಬರ ದಿಂದ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು ಜನರ ಅನುಕೂಲ ಕ್ಕಾಗಿ ಹಾಗೂ ಆರೋಗ್ಯದ ದೃಷ್ಟಿಯಿಂದ ಈ ಘಟಕವನ್ನು ಸ್ಥಾಪಿಸಲಾಗಿದ್ದು ಮಿತವಾಗಿ ನೀರನ್ನು ಬಳಸಬೇಕು ಎಂದು ಮನವಿ ಮಾಡಿದರು. ಗ್ರಾಪಂ ಅಧ್ಯಕ್ಷೆ ಅನ್ನಪೂರ್ಣೇಶ್ವರಿ ಮುರಳಿ, ಯಶವಂತಪುರ ಕ್ಷೇತ್ರ ಜೆಡಿಎಸ್ ಅಧ್ಯಕ್ಷ ಟಿ.ಎನ್.ಜವರಾಯಿ ಗೌಡ, ಗ್ರಾಮಪಂಚಾಯತಿ ಸದಸ್ಯ ಎಂ.ಬಿ.ರಾಮಕೃಷ್ಣಯ್ಯ, ಲಿಂಗಮ್ಮ ಮಲ್ಲಯ್ಯ, ರತ್ನಮ್ಮಸುರೇಶ್, ಎಂ.ವಿ. ವೆಂಕಟೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.