ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿನಿ ಸಾವು


Team Udayavani, Jul 23, 2018, 12:06 PM IST

lorry.jpg

ಬೆಂಗಳೂರು: ಲಾಲ್‌ಬಾಗ್‌ ಸಮೀಪದ ಕೃಂಬಿಗಲ್‌ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿದ್ದು, ಆಕೆಯ ಸಹೋದರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಯನಗರದ ಸುರಾನ ಕಾಲೇಜಿನ ಅಂತಿಮ ವರ್ಷದ ಬಿ.ಕಾಂ. ವ್ಯಾಸಾಂಗ ಮಾಡುತ್ತಿರುವ ಪ್ರೀತಿ  (19) ಮೃತ ದುರ್ದೈವಿ.

ಪ್ರೀತಿ ಅವರ ಸಹೋದರಿ ಲಾವಣ್ಯ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತವೆಸಗಿದ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಲು ಯತ್ನಿಸಿದನಾದರೂ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಕುರಿತು ವಿ.ವಿ.ಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಟನ್‌ಪೇಟೆ ನಿವಾಸಿಯಾದ ರವಿಚಂದ್ರನ್‌ ದಂಪತಿಯ ಪುತ್ರಿಯರಾದ ಪ್ರೀತಿ ಹಾಗೂ ಲಾವಣ್ಯ ಭಾನುವಾರ ಬೆಳಗ್ಗೆ 7.30ರ ಸುಮಾರಿಗೆ ಸ್ಕೂಟಿಯಲ್ಲಿ ಲಾಲ್‌ಬಾಗ್‌ಗೆ ತೆರಳುತ್ತಿದ್ದರು. ಈ ವೇಳೆ ಲಾವಣ್ಯ ಸ್ಕೂಟಿ ಚಾಲನೆ ಮಾಡುತ್ತಿದ್ದರು. ಮಾರ್ಗಮಧ್ಯೆ ಕೃಂಬಿಗಲ್‌ ರಸ್ತೆಯಲ್ಲಿ ತಿರುವು ಪಡೆಯುವಾಗ ಹಿಂಬದಿಯಿಂದ ಬಂದ ಸಿಮೆಂಟ್‌ ಮಿಕ್ಸರ್‌ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಹಿಂಬದಿ ಕುಳಿತಿದ್ದ ಪ್ರೀತಿ ರಸ್ತೆ ಬದಿಯ ಕಾಂಪೌಂಡ್‌ಗೆ ಅಪ್ಪಳಿಸಿ ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾವಣ್ಯ ಕೂಡ ರಸ್ತೆಬದಿ ಬಿದ್ದಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ಭೀಕರ ಅಪಘಾತ ಕಂಡ ಸ್ಥಳೀಯರು ಕೂಡಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರೀತಿ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫ‌ಲಿಸದೆ ಆಕೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸಾವಿನಲ್ಲೂ ಸಾರ್ಥಕತೆ: ಅಪಘಾತದಲ್ಲಿ ಮೃತಪಟ್ಟ ಪ್ರೀತಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಸಾವಿನ ನಂತರ ಮಗಳು ಮತ್ತೂಬ್ಬರಿಗೆ ಬೆಳಕಾಗಲಿ ಎಂದು ನಿರ್ಧರಿಸಿದ ಪೋಷಕರು, ಪ್ರೀತಿ ಅವರ ಎರಡೂ ಕಣ್ಣುಗಳನ್ನು ಲಯನ್ಸ್‌ ಕ್ಲಬ್‌ಗ ದಾನ ಮಾಡಿದ್ದಾರೆ.

ಸದಾ ಲವಲವಿಕೆಯಿಂದ ಇರುತ್ತಿದ್ದ ಪ್ರೀತಿ ಬಡವರು, ಅಂಧರು, ವಿಶೇಷ  ಚೇತರನ್ನು ಕಂಡ ಬಗ್ಗೆ ಕಾಳಜಿ ಹೊಂದಿದ್ದಳು. ನೇತ್ರದಾನ ಮಾಡುವ ಬಗ್ಗೆ ಯಾವಾಗಲೂ ಮಾತನಾಡುತ್ತಿದ್ದಳು. ಹೀಗಾಗಿ, ಆಕೆಯ ಕನಸನ್ನು ನೆರವೇರಿಸಿದ್ದೇವೆ ಎಂದು ಪೋಷಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.