ಮಾರುಕಟ್ಟೆಯಂತಾಗಿದೆ ಶಾಸಕರ ಭವನ ಆವರಣ
Team Udayavani, Jul 24, 2018, 7:00 AM IST
ಬೆಂಗಳೂರು: ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಹೊಸ ಕಟ್ಟಡದಲ್ಲಿ ಕಾರ್ ಪಾರ್ಕಿಂಗ್‌ಗೆ ಜಾಗವಿಲ್ಲ. ಸಾರ್ವಜನಿಕ ಶೌಚಾಲಯವೂ ಇಲ್ಲ. ನೀರು ನಿಂತು ಓಡಾಡಲು ಆಗದ ಪರಿಸ್ಥಿತಿ. ಆದರೂ ಕಟ್ಟಡಕ್ಕೆ ಕಾಮಗಾರಿ ಪೂರ್ಣ ಪ್ರಮಾಣಪತ್ರ ನೀಡಿ ಬಿಲ್ ಪಾವತಿಯೂ ಆಗಿದೆ.
ಪಕ್ಕದಲ್ಲೇ ಆಸ್ಪತ್ರೆ ಇದೆಯಾದರೂ ಅಲ್ಲಿ ಹೋಗಲೂ ಸಾಧ್ಯವಿಲ್ಲದಂತೆ ನೀರು ನಿಂತಿದೆ. ಟೆಂಡರ್ ಕರೆಯದೆ ಅಂಗಡಿ, ಹೋಟೆಲ್‌ಗಳನ್ನು ಗುತ್ತಿಗೆ ನೀಡಲಾಗಿದೆ… ಇಷ್ಟೆಲ್ಲಾ ಆಗಿರುವುದು ಬೇರೆಲ್ಲೂ ಅಲ್ಲ, ಶಕ್ತಿಸೌಧ ವಿಧಾನಸೌಧದ ಪಕ್ಕದಲ್ಲೇ ಇರುವ ಶಾಸನ ರಚಿಸುವವರಿಗಾಗಿ ನಿರ್ಮಿಸಿರುವ ಶಾಸಕರ ಭವನದ ಆವರಣದಲ್ಲಿ. ಶಾಸಕರ ಭವನದ ಅನಾನುಕೂಲತೆಗಳು, ಅಲ್ಲಿ ಆಗಿರುವ ಲೋಪಗಳ ಕುರಿತಂತೆ ಬಂದ ದೂರುಗಳ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪರಿಶೀಲನೆ ನಡೆಸಿದಾಗ ಈ ಅಂಶಗಳು ಕಂಡುಬಂದಿವೆ.
ತಕ್ಷಣ ವಿಧಾನಸಭೆ ಮತ್ತು ವಿಧಾನ ಪರಿಷತ್ ಕಾರ್ಯದರ್ಶಿಗಳಿಬ್ಬರನ್ನೂ ಸ್ಥಳಕ್ಕೆ ಕರೆಸಿದ ಸಭಾಪತಿಯವರು, ಶಾಸಕರ ಭವನಕ್ಕೆ ಸಂಬಂಧಿಸಿದ ಕಾಮಗಾರಿಗಳು, ಟೆಂಡರ್, ಖರೀದಿ ಸೇರಿ ಎಲ್ಲ ವಿಚಾರಗಳ ಬಗ್ಗೆ ಮಾಹಿತಿಗಳನ್ನು ಕಳುಹಿಸಿಕೊಡುವಂತೆ ಸೂಚಿಸಿದ್ದಾರೆ.ಅಲ್ಲದೆ, ವಿಧಾನ ಪರಿಷತ್ ವ್ಯಾಪ್ತಿಗೆ ಬರುವ ಶಾಸಕರ ಭವನದ ಲೋಪಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.