ಕೊಲ್ಲೂರಿನಲ್ಲಿ ಅತ್ಯಧಿಕ 25 ಸೆಂ.ಮೀ. ಮಳೆ
Team Udayavani, Jul 3, 2017, 3:45 AM IST
ಬೆಂಗಳೂರು: ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ
ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವೆಡೆ ಮಳೆಯಾಯಿತು.
ಕೊಲ್ಲೂರಿನಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 25 ಸೆಂ.ಮೀ.ಗಳಷ್ಟು ಭಾರಿ ಮಳೆ ಸುರಿಯಿತು. ಮಂಗಳೂರು, ಉಡುಪಿ, ಶಿರಸಿ, ಭಾಗಮಂಡಲ, ಸಿದ್ದಾಪುರ ಸೇರಿ ಕೊಡಗು, ಕರಾವಳಿ, ಮಲೆನಾಡಿನಾದ್ಯಂತ ಸಾಧಾರಣ ಮಳೆಯಾಗಿದೆ. ಕರ್ನಾಟಕ,ಆಂಧ್ರ ಹಾಗೂ ತೆಲಂಗಾಣ ರಾಜ್ಯದ ರೈತರ ಜೀವನಾಡಿ ಯಾಗಿರುವತುಂಗಭದ್ರಾ ಜಲಾಶಯಕ್ಕೆ 11 ಸಾವಿರ ಕ್ಯೂಸೆಕ್ನಷ್ಟು ನೀರು ಹರಿದು ಬರು ತ್ತಿದ್ದು, ಜಲಾಶಯದಲ್ಲಿ 5 ಟಿಎಂಸಿಯಷ್ಟು ನೀರು ಸಂಗ್ರ ಹ ವಿದೆ. ಭಾನುವಾರ ಜಲಾಶಯದ ನೀರಿನ ಮಟ್ಟ 1581.94 ಅಡಿಗಳಿಗೆ ಏರಿತ್ತು. ಮಂಗಳವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಘಟ್ಟ ಪ್ರದೇಶಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.