ಮೆಟ್ರೋ ಹಿಂದಿಗೆ ಮಸಿ ಬಳಿದ ಕರವೇ


Team Udayavani, Jul 21, 2017, 11:11 AM IST

metro-masi.jpg

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಹಿಂದಿ ನಾಮಫ‌ಲಕ ತೆರವಿಗೆ ಕನ್ನಡ ಪರ ಸಂಘಟನೆಗಳು ನೀಡಿದ್ದ ಗಡುವು ಮುಗಿದ ಹಿನ್ನೆಲೆಯಲ್ಲಿ ಗುರುವಾರ ನಸುಕಿನಲ್ಲಿ ಮೆಟ್ರೋ ನಿಲ್ದಾಣಗಳಿಗೆ ತೆರಳಿದ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು, ನಾಮಫ‌ಲಕಗಳಲ್ಲಿದ್ದ ಹಿಂದಿ ಭಾಷೆಗೆ ಮಸಿ ಬಳಿದರು. 

ಪೂರ್ವ-ಪಶ್ಚಿಮ ಮತ್ತು ಉತ್ತರ-ದಕ್ಷಿಣ ಕಾರಿಡಾರ್‌ಗಳಲ್ಲಿ ಬರುವ ಎಲ್ಲ 40 ಮೆಟ್ರೋ ನಿಲ್ದಾಣಗಳಿಗೆ ಬೆಳಗಿನಜಾವ 4ರ ಸುಮಾರಿಗೆ ಏಕಕಾಲದಲ್ಲಿ ತೆರಳಿದ ಕಾರ್ಯಕರ್ತರು, ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಇರುವ ಹಿಂದಿ ನಾಮಫ‌ಲಕಗಳಿಗೆ ಮಸಿ ಬಳಿದರು. ನಂತರ ಆ ನಾಮಫ‌ಲಕಗಳ ಪಕ್ಕದಲ್ಲಿ ಹಿಂದಿ ವಿರೋಧಿ ಕರಪತ್ರಗಳನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದರು. 

ಇದರ ಬೆನ್ನಲ್ಲೇ ಗಸ್ತು ಪೊಲೀಸರು ರಾಸಾಯನಿಕಗಳನ್ನು ಬಳಸಿ ಫ‌ಲಕಗಳ ಮೇಲಿನ ಮಸಿ ಅಳಿಸಲು ಪ್ರಯತ್ನಿಸಿದರು. ನಂತರ ನಿಲ್ದಾಣಗಳಿಗೆ ಬಿಗಿ ಭದ್ರತೆ ಒದಗಿಸಲಾಯಿತು. ಪರಿಣಾಮ ಬೆಳಿಗ್ಗೆ ನಿಲ್ದಾಣಗಳಿಗೆ ಬರುವ ಪ್ರಯಾಣಿಕರಿಗೆ ಎಂದಿನಂತೆ ಕನ್ನಡ ಮತ್ತು ಇಂಗ್ಲಿಷ್‌ ಜತೆಗೆ ಹಿಂದಿ ನಾಮಫ‌ಲಕ ಎದುರಾಯಿತು. ಈ ಮಧ್ಯೆ ರಾಜಾಜಿನಗರ ನಿಲ್ದಾಣ ಸೇರಿದಂತೆ ಕೆಲವೆಡೆ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಮೆಟ್ರೋದಲ್ಲಿ ಕನ್ನಡ ಮತ್ತು ಇಂಗ್ಲಿಷ್‌ ನಾಮಫ‌ಲಕಗಳು ಮತ್ತು ಧ್ವನಿ ಆಧಾರಿತ ಪ್ರಕಟಣೆಗಳು ಮಾತ್ರ ಇರಬೇಕು. ಹಿಂದಿ ನಾಮಫ‌ಲಕಗಳನ್ನು ತೆರವುಗೊಳಿಸಬೇಕು ಎಂದು ಹಲವು ಬಾರಿ ಬಿಎಂಆರ್‌ಸಿಗೆ ಮನವಿ ಸಲ್ಲಿಸಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಗಮನವನ್ನೂ ಸೆಳೆಯಲಾಗಿದೆ. ನಂತರ ನಿಗಮಕ್ಕೆ ಗಡುವು ಕೂಡ ನೀಡಲಾಗಿತ್ತು. ಆದರೆ, ಇದಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮೆಟ್ರೋ ಸೇವೆ ಆರಂಭವಾಗುವ ಒಂದು ತಾಸು ಮುನ್ನ ಮಸಿ ಬಳಿಯಲಾಯಿತು ಎಂದು ರಕ್ಷಣಾ ವೇದಿಕೆ ತಿಳಿಸಿದೆ.

ಎರಡು ದಿನಗಳಿಂದ ಯೋಜನೆ 
ಸಾಮಾನ್ಯ ವೇಳೆಯಲ್ಲಿ ಮಸಿ ಬಳಿಯಲು ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಅವಕಾಶ ನೀಡುವುದಿಲ್ಲ. ಕೆಲವೊಮ್ಮೆ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಗಿ, ಜನರಿಗೆ ತೊಂದರೆ ಆಗುವ ಸಾಧ್ಯತೆಯೂ ಇರುತ್ತದೆ. ಈ ಹಿನ್ನೆಲೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮಸಿ ಬಳಿಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಇದಕ್ಕಾಗಿ ಎರಡು ದಿನಗಳ ತಯಾರಿ ಮಾಡಿಕೊಳ್ಳಲಾಗಿತ್ತು. ಪ್ರತಿ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳಿಗೆ ತಲಾ 10 ಜನರ ಎರಡು ತಂಡಗಳನ್ನು ನಿಯೋಜಿಸಲಾಗಿತ್ತು ಎಂದು ಕರವೇ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಿ. ಸಣ್ಣೀರಪ್ಪ ತಿಳಿಸಿದರು. 

ನಸುಕಿನ 4ರ ಸುಮಾರಿಗೆ ಮಸಿ ಬಳಿಯಲಾಗಿದೆ. ಆದರೆ, ಇದಾದ 15-20 ನಿಮಿಷಗಳಲ್ಲಿ ಪೊಲೀಸರು ರಾಸಾಯನಿಕದಿಂದ ಮಸಿಯನ್ನು ತೊಳೆದಿದ್ದಾರೆ. ಈ ಪ್ರಯತ್ನ ನಿರಂತರವಾಗಿರಲಿದೆ. ಮುಂದಿನ ಹೋರಾಟದ ಬಗ್ಗೆ ಇನ್ನೆರಡು ದಿನಗಳಲ್ಲಿ ವೇದಿಕೆ ಕಾರ್ಯಕರ್ತರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದೂ ಅವರು ಹೇಳಿದರು. ಈ ಮಧ್ಯೆ ಕೆ.ಆರ್‌. ಮಾರುಕಟ್ಟೆ ನಿಲ್ದಾಣದ ಬಳಿ ಮಸಿ ಬಳಿದ ಕರ್ನಾಟಕ ರಕ್ಷಣಾ ವೇದಿಕೆಯ 8ರಿಂದ 10 ಜನ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು ಎನ್ನಲಾಗಿದೆ. 

ಮೆಟ್ರೋ ನಾಮಫ‌ಲಕಗಳಿಗೆ ಮಸಿ  6 ಮಂದಿಯ ಸೆರೆ 
ಬೆಂಗಳೂರು: ಮೆಟ್ರೋ ನಿಲ್ದಾಣದ ನಾಮಫ‌ಲಕಗಳಲ್ಲಿ ಹಿಂದಿ ಬರಹಗಳಿಗೆ ಮಸಿ ಬಳಿದ ಪ್ರಕರಣ ಸಂಬಂಧ ಕರ್ನಾಟಕ ರಕ್ಷಣಾ  ವೇದಿಕೆ ( ನಾರಾಯಣ ಗೌಡ) ಬಣದ 6 ಮಂದಿ ಕಾರ್ಯಕರ್ತರನ್ನು ಕಾಮಾಕ್ಷಿಪಾಳ್ಯ ಠಾಣೆ  ಪೊಲೀಸರು  ಗುರುವಾರ  ಬಂಧಿಸಿದ್ದರು. 

ವಿಕ್ಟೋರಿಯಾ ಆಸ್ಪತ್ರೆಯ ಮೆಟ್ರೋ ನಿಲ್ದಾಣದ ಬಳಿ ಮೆಟ್ರೋ ನಾಮಫ‌ಲಕಗಳಿಗೆ ಗುರುವಾರ ಬೆಳಗಿನ ಜಾವ 4ರ ಸುಮಾರಿಗೆ ಮಸಿ ಬಳಿಯುತ್ತಿದ್ದಾಗ, ಕರವೇ ಕಾರ್ಯಕರ್ತರಾದ ಮಲ್ಲಿಕಾರ್ಜುನ್‌, ತ್ಯಾಗರಾಜ್‌, ಕಿರಣ್‌ಕುಮಾರ್‌, ರಘು, ಶ್ರೀಧರ್‌ ಚಂದ್ರು ಎಂಬುವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಯಿತು. ಜಾಮೀನಿನ ಆಧಾರದಲ್ಲಿ ಮುಚ್ಚಳಿಕೆ ಪತ್ರ ಬರೆದುಕೊಟ್ಟ ಮೇಲೆ ಕಾರ್ಯಕರ್ತರನ್ನು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರ ಪಶ್ಚಿಮ ವಿಭಾಗ ಹಾಗೂ ಉತ್ತರ ವಿಭಾಗದ ಮೆಟ್ರೋ ನಿಲ್ದಾಣದ ನಾಮಫ‌ಲಕಗಳಿಗೆ ಕರವೇ ಕಾರ್ಯಕರ್ತರು ಮಸಿ ಬಳಿಯುತ್ತಿರುವ ಬಗ್ಗೆ ಸಿಕ್ಕ ಮಾಹಿತಿ ಆಧಾರದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಈ ಪೈಕಿ 6 ಮಂದಿಯನ್ನು ಬಂಧಿಸಲಾಗಿದೆ. ಈ ಕಾರ್ಯದಲ್ಲಿ ಪಾಲ್ಗೊಂಡಿದ್ದವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.