ಮೆಟ್ರೋ ಮಾರ್ಗ ರಾಮನಗರ, ರಾಜಾನಕುಂಟೆಯವರೆಗೆ ವಿಸ್ತರಣೆಯಾಗಬೇಕು: ಸಿಎಂ
Team Udayavani, Aug 29, 2021, 7:08 PM IST
ಬೆಂಗಳೂರು: ಕೆಂಗೇರಿವರೆಗಿನ ವಿಸ್ತರಿತ ಮೆಟ್ರೋ ಮಾರ್ಗದಿಂದ ಅಭಿವೃದ್ಧಿಯ ನವಯುಗ ಪ್ರಾರಂಭವಾಗಿದೆ. ಮೆಟ್ರೋ ಮಾರ್ಗಗಳು ರಾಮನಗರ, ಮಾಗಡಿ ಮತ್ತು ರಾಜಾನಕುಂಟೆವರೆಗೂ ವಿಸ್ತರಣೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮೈಸೂರು ರಸ್ತೆಯಿಂದ ಕೆಂಗೇರಿವರೆಗಿನ 7.5 ಕಿ.ಮೀ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಮೆಟ್ರೋ ವಿಸ್ತರಣೆಗೆ ಸಂಬಂಧಿಸಿದಂತೆ ಯೋಜನೆಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೆಂಪೇಗೌಡರ ಹೆಜ್ಜೆಗುರುತಿನಲ್ಲಿ ಇಂದಿನ ಆಧುನಿಕ ಅವಶ್ಯಕತೆಯನ್ನು ಗಮನದಲ್ಲಿರಿಸಿಕೊಂಡು ಬೆಂಗಳೂರನ್ನು ಕಟ್ಟಲು ಎಲ್ಲರೂ ಕೈಜೋಡಿಸುವಂತೆ ಮುಖ್ಯಮಂತ್ರಿಗಳು ಕರೆ ನೀಡಿದರು.
ನಗರದಲ್ಲಿ ಒಟ್ಟು 317 ಕಿ.ಮೀ ಮೆಟ್ರೋ ಮಾರ್ಗ ಆಗಬೇಕು. ಇಂದು ಉದ್ಘಾಟಿಸಲಾಗಿರುವ 7.5 ಕಿ.ಮೀ ಸೇರಿದಂತೆ ಈವರೆಗೆ 56 ಕಿ.ಮೀ ಸಾಧನೆ ಆಗಿದೆ. ಮುಂದಿನ ವರ್ಷ 36 ಕಿ.ಮೀ ಸಾಧನೆ ಮಾಡಲಾಗುವುದು ಎಂದು ಅವರು ಹೇಳಿದರು.
ಬೆಂಗಳೂರು ಅಭಿವೃದ್ಧಿಯಾದರೆ ಕರ್ನಾಟಕ ಅಭಿವೃದ್ಧಿಯಾಗುತ್ತದೆ. ಕರ್ನಾಟಕ ಅಭಿವೃದ್ಧಿಯಾದರೆ ಭಾರತ ಅಭಿವೃದ್ಧಿಯಾಗುತ್ತದೆ ಎಂದರು.
ಜಿ.ಡಿ.ಪಿಗೆ ಶೇ.36 ರಷ್ಟು ಕೊಡುಗೆ ನೀಡುತ್ತಿರುವ ಬೆಂಗಳೂರು ಇನ್ನು ಹೆಚ್ಚಿನ ಕೊಡುಗೆ ನೀಡಲು ಹೂಡಿಕೆ ಅಗತ್ಯವಿದೆ, ಬೆಂಗಳೂರು ಅಮೃತ್ ನಗರೋತ್ಥಾನ ಯೋಜನೆಯನ್ನು ಘೋಷಣೆ ಕೆಲವೇ ತಿಂಗಳಲ್ಲಿ ಮಾಡಲಾಗುವುದು ಎಂದರು. ಈ ಎಲ್ಲ ಯೋಜನೆಗಳು ಕಾರ್ಯಗತವಾಗಲು ಕೇಂದ್ರ ಸರ್ಕಾರದ ನೆರವು ನಮಗೆ ದೊರೆಯಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕದಲ್ಲಿ ನೂತನ ನಗರ ಕೇಂದ್ರಗಳನ್ನು ನಾವು ನಿರ್ಮಿಸಬೇಕಿದೆ. ‘ನವ ಭಾರತಕ್ಕೆ ನವ ಕರ್ನಾಟಕ; ಸ್ವರಾಜ್ಯದಿಂದ ಸುರಾಜ್ಯ’ಎಂಬುದು ನಮ್ಮ ಘೋಷವಾಕ್ಯವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ
Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್ ಡೆಲಿವರಿ ಬಾಯ್ ಸಾವು
Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.