ಶಬರಿಮಲೆ ವಿವಾದಕ್ಕೆ ಸಚಿವೆ ಕಾರಣ
Team Udayavani, Dec 10, 2018, 12:10 PM IST
ಬೆಂಗಳೂರು: ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶ ನೀಡುವ ವಿವಾದದಲ್ಲಿ ಕರ್ನಾಟಕದ ಪಾತ್ರವೂ ಇದೆ. ವಿವಾದದ ಮೂಲ ಕಾರಣೀಕರ್ತರಲ್ಲಿ ಕರ್ನಾಟಕದ ಹಾಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯೂ ಸೇರಿದ್ದಾರೆ ಎಂದು ಆರ್‌ಎಸ್‌ಎಸ್‌ನ ಅಖೀಲ ಭಾರತೀಯ ಕಾರ್ಯಕಾರಣಿ ಮಂಡಳಿಯ ಆಹ್ವಾನಿತ ಸದಸ್ಯ ಜೆ.ನಂದಕುಮಾರ್ ದೂರಿದರು.
ಶಬರಿಮಲೆ ಅಯ್ಯಪ್ಪ ಸಂರಕ್ಷಣಾ ಸಮಿತಿ ಜಯನಗರದ ರಾಷ್ಟ್ರೋತ್ಥಾನ ಯೋಗ ಮತ್ತು ಫೀಟ್ನೆಸ್ ಕೇಂದ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ “ಶಬರಿಮಲೆಯಲ್ಲಿ ಏನು ನಡೆಯುತ್ತಿದೆ’? ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಹಾಲಿ ಜೆಡಿಎಸ್ – ಕಾಂಗ್ರೆಸ್ ಸಮಿಶ್ರ ಸರ್ಕಾರದಲ್ಲಿ
ಸಚಿವೆಯೊಬ್ಬರು ಈ ಹಿಂದೆ ಶಬರಿಮಲೆ ವಿವಾದದ ಕೇಂದ್ರ ಬಿಂದುವಾಗಿದ್ದರು ಎಂದು ಟೀಕಿಸಿದರು.
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸರ್ಕಾರ ಶಬರಿಮಲೆ ವಿಚಾರದಲ್ಲಿ ಹಿಂದೂ ಭಾವನೆಗಳಿಗೆ ದಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿದೆ. ಪೋಲಿಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಶಬರಿಮಲೆ ಸಂರಕ್ಷಕರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ.
ಕೇರಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಮೂಲದ ಐಪಿಎಸ್ ಅಧಿಕಾರಿ ಯತೀಶ್‌ಚಂದ್ರ ಕೂಡ ತಮ್ಮ ಎಲ್ಲೆ ಮೀರಿ ವರ್ತಿಸುತ್ತಿದ್ದಾರೆ ಎಂದು ದೂರಿದರು.
ದಕ್ಷಿಣ ಭಾರತದ ದೇವಾಲಯಗಳಿಗೂ ಬರಬಹುದು: ಧಾರ್ಮಿಕ ವಿಚಾರದಲ್ಲಿ ನ್ಯಾಯಾಲಗಳು ಮಧ್ಯಪ್ರವೇಶ ಅಷ್ಟೊಂದು ಸೂಕ್ತವಲ್ಲ. ಈ ಪ್ರವೃತ್ತಿ ಹೀಗೆ ಮುಂದುವರಿದರೆ ಈಗ ಶಬರಿಮಲೆಗೆ ಬಂದಿರುವ ಪರಿಸ್ಥಿತಿ ಮುಂದೆ ದಕ್ಷಿಣ ಭಾರತದ ಹಿಂದೂ ಧಾರ್ಮಿಕ ಕ್ಷೇತ್ರಗಳಾದ ಕೊಲ್ಲೂರ ಮೂಕಾಂಬಿಕೆ, ಗುರುವಾಯೂರು, ಅನಂತ ಪದ್ಮನಾಭ ಸ್ವಾಮಿ, ತಿರುಪತಿ ತಿಮ್ಮಪ್ಪ ದೇವಸ್ಥಾಗಳಿಗೂ ಬಂದರೂ ಅಚ್ಚರಿಯೇನಿಲ್ಲ ಎಂದರು.
ಪ್ರಸ್ತಾವಿಕ ಮಾತನಾಡಿದ ಆರ್‌ಎಸ್‌ಎಸ್ ಮುಖಂಡ ರಾಜೇಶ್ ಪದ್ಮಾರ್, ಶಬರಿಮಲೆ ಕ್ಷೇತ್ರದ ಭಕ್ತರ ಮತ್ತು ಅವರ ಭಾವನೆಗಳನ್ನು ಗೌರವಿಸಿ ಬೆಂಬಲಿಸುವ ಸಲುವಾಗಿ ದಕ್ಷಿಣ ಪ್ರಾಂತದ ಶಬರಿಮಲೆ ಕ್ಷೇತ್ರ ಸಂರಕ್ಷಣಾ ಸಮಿತಿ ಅಸ್ಥಿತ್ವಕ್ಕೆ ಬಂದಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
World Rapid Championships: ಕೊನೆರು ಹಂಪಿ ಚಾಂಪಿಯನ್; ಇರೆನ್ ವಿರುದ್ಧ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.