ಸದನಕ್ಕೆ ಚಕ್ಕರ್ ಹಾಕುವ ಸಚಿವರು,ಅಧಿಕಾರಿಗಳ ವಿರುದ್ಧ ಕ್ರಮ: ಹೊರಟ್ಟಿ
Team Udayavani, Jul 1, 2018, 6:00 AM IST
ಬೆಂಗಳೂರು: ಅಧಿವೇಶನ ಸಂದರ್ಭದಲ್ಲಿ ಕಲಾಪಕ್ಕೆ ಗೈರು ಹಾಜರಾಗುವ ಸಚಿವರು ಮತ್ತು ಅಧಿಕಾರಿಗಳ ವಿರುದ್ಧ
ಕ್ರಮ ತೆಗೆದುಕೊಳ್ಳಲಾಗುವುದು ಎಂದು ವಿಧಾನಪರಿಷತ್ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರದಿಂದ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ ಆರಂಭವಾಗಲಿದೆ. ಮೊದಲ ದಿನದ ಆರಂಭದಲ್ಲೇ ಸದನದಲ್ಲಿ ಇರಬೇಕಾದ ಸಚಿವರ ಮತ್ತು ಅಧಿಕಾರಿಗಳ ಹೆಸರನ್ನು ಕರೆಯಲಾಗುತ್ತದೆ. ಹೆಸರು ಕರೆದ ಸಚಿವರು, ಅಧಿಕಾರಿಗಳು ಆ ಸಂದರ್ಭ ಸದನದಲ್ಲಿ ಹಾಜರಿರಬೇಕು. ಮೊದಲ ಬಾರಿಗೆ ಇಂತಹ ವ್ಯವಸ್ಥೆ ಜಾರಿಗೆ ತರುತ್ತಿದ್ದೇವೆ ಎಂದು ಹೇಳಿದರು.
ಸದನದಲ್ಲಿ ಗೈರು ಹಾಜರಾಗುವ ಸಚಿವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸು ಮಾಡುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದೇವೆ. ಸದನಕ್ಕೆ ಬಾರದೇ ಇರುವ ಅಧಿಕಾರಿಗಳ ವಿರುದ್ಧ ಈ ಹಿಂದೆ ತೆಗೆದುಕೊಂಡಿರುವ ಕ್ರಮದ ಬಗ್ಗೆಯೂ ಮಾಹಿತಿ ಪಡೆಯ ಲಾಗುತ್ತದೆ.
ಸದನದಲ್ಲಿ ಸದಸ್ಯರು ಕೇಳುವ ಪ್ರಶ್ನೆ ಅಥವಾ ಮಾಹಿತಿಗೆ ಉತ್ತರ ನೀಡಲು ಸಂಬಂಧ ಪಟ್ಟ ಸಚಿವರು ಹಾಜರಿರಬೇಕು. ಸಚಿವರು ಯಾವುದೇ ಮಾಹಿತಿ ಕೇಳಿದಾಗ ತಕ್ಷಣವೇ ಅಧಿಕಾರಿಗಳು ನೀಡು ವಂತಿರಬೇಕು. ಒಂದು ವೇಳೆ ಸಚಿವರು ಅಥವಾ ಅಧಿಕಾರಿಗಳು ಸದನದಲ್ಲಿ ಹಾಜರಿಲ್ಲದೇ ಇದ್ದರೆ ಸದನದ ಗಾಂಭೀರ್ಯತೆಗೆ ಧಕ್ಕೆ ಬರುತ್ತದೆ.
ಕಲಾಪಗಳು ಸುಗಮವಾಗಿ ನಡೆಯಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಾಜರಿರಬೇಕು ಎಂದರು.
ಯಾವುದೇ ಮಾಹಿತಿ ನೀಡದೇ ಗೈರು ಹಾಜರಾಗುವ ಅಧಿಕಾರಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸರ್ಕಾರದ
ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆಯಲಾಗುವುದು. ಸದನಕ್ಕೆ ಬಾರದ ಸಚಿವರ ವಿರುದ್ಧ ಯಾವ ರೀತಿ
ಕ್ರಮ ತೆಗೆದುಕೊಳ್ಳಬಹುದು ಎಂಬುದರ ಬಗ್ಗೆಯೂ ಚಿಂತನೆ ನಡೆಸಲಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ.ಕ.ದ ವೈಭವಿ, ಉಡುಪಿಯ ಧೀರಜ್ ಐತಾಳ್ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ
D.K. Shivakumar: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಬಗ್ಗೆ ಚರ್ಚೆ
KEA: ಎಂಎಸ್ಸಿ ನರ್ಸಿಂಗ್: ಅರ್ಜಿ ಸಲ್ಲಿಕೆಗೆ ಡಿ. 2 ಕೊನೆ ದಿನ
Karnataka: ಪಠ್ಯಪುಸ್ತಕಕ್ಕೆ ಬೇಡಿಕೆ ಸಲ್ಲಿಸಲು ಡಿ. 9 ಕಡೇ ದಿನ
ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.