ಹೆತ್ತ ಮಗುವಿಗೆ ಪುನರ್ಜನ್ಮ ನೀಡಿದ ತಾಯಿ!
Team Udayavani, Mar 8, 2017, 11:45 AM IST
ಬೆಂಗಳೂರು: ನಾಲ್ಕು ವರ್ಷದ ಹೆಣ್ಣು ಮಗುವಿಗೆ ತಾಯಿಯೇ ಮೂತ್ರಪಿಂಡ ದಾನ ಮಾಡಿ ಜೀವ ಉಳಿಸಿದ ಅಪರೂಪದ ಘಟನೆ ನಗರದಲ್ಲಿ ನಡೆದಿದೆ. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ 4 ವರ್ಷದ ಹೆಣ್ಣು ಮಗು ವಿಗೆ ಅಗತ್ಯವಿದ್ದ ಮೂತ್ರಪಿಂಡ ದಾನ ಮಾಡಲು ಯಾರೂ ದೊರಕ ದಿದ್ದಾಗ ಆ ಮಗುವಿನ ತಾಯಿ ಪ್ರಿಯಾಂಕ (31) ತಾನೇ ಮುಂದಾಗಿ ಹೊಸ ಜೀವನ ನೀಡಿದ್ದಾರೆ.
ಆಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರೈನ್ಬೋ ಮಕ್ಕಳ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೂತ್ರಪಿಂಡ ದಾನ ಮಾಡಿದ ಪ್ರಿಯಾಂಕ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈನ್ಬೋ ಆಸ್ಪತ್ರೆಯ ಡಾ.ಸೌಮಿಲ್ ಗೌರ್, ನಾಲ್ಕು ವರ್ಷದ ಮಗು ನೆಫೊಟಿಕ್ ಸಿಂಡ್ರೋಮ್ನಿಂದ ಬಳಲುತ್ತಿತ್ತು.
ಒಂದೂವರೆ ವರ್ಷ ದಿಂದ ಪೆರಿಟೋನಿಯಲ್ ಡಯಾಲಿಸಿಸ್ಗೆ ಒಳಗಾಗಿತ್ತು. ಆ ಮಗುವಿಗೆ ಮೂತ್ರಪಿಂಡ ಕಸಿ ಮಾಡುವ ಸವಾಲು ನಮ್ಮ ಮುಂದಿತ್ತು. ಬೇರೆ ಯಾರೂ ದಾನ ಮಾಡವವರು ದೊರಯದಿದ್ದಾಗ ಆ ಮಗುವಿನ ತಾಯಿಯೇ ಮೂತ್ರಪಿಂಡ ದಾನ ಮಾಡಲು ಮುಂದಾದರು. ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ ಮೂಲಕ ಜೋಡಣೆ ಮಾಡಲಾಯಿತು. ಈಗ ತಾಯಿ ಮತ್ತು ಮಗ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.