ದುಷ್ಕರ್ಮಿಗಳಿಂದ ವೃದ್ಧನ ಕೊಲೆ


Team Udayavani, Mar 2, 2019, 6:09 AM IST

murder.jpg

ಬೆಂಗಳೂರು: ಮನೆಯ ಸಮೀಪದ ತೋಟ ನೋಡಿಕೊಂಡು ಬರಲು ತೆರಳಿದ್ದ ವೃದ್ಧರೊಬ್ಬರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಪೀಣ್ಯ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಚನ್ನನಾಯಕನಹಳ್ಳಿ ನಿವಾಸಿ ಮುನಿಯಪ್ಪ (87) ಕೊಲೆಯಾದವರು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿರುವ ಪೊಲೀಸರು ಕೆಲ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಣಕಾಸು ವ್ಯವಹಾರ, ಜಮೀನು ವಿವಾದ ವಿಚಾರಕ್ಕೆ ಕೊಲೆ ನಡೆದಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಚನ್ನನಾಯಕನಹಳ್ಳಿಯ ನಿವಾಸದ ಸ್ವಲ್ಪ ದೂರದಲ್ಲಿಯೇ ಮುನಿಯಪ್ಪ ಅವರಿಗೆ ಒಂದೂವರೆ ಎಕರೆ ಕೃಷಿ ಜಮೀನಿದೆ. ಶುಕ್ರವಾರ ಬೆಳಗ್ಗೆ 7.30ರ ಸುಮಾರಿಗೆ ಎಂದಿನಂತೆ ತೋಟಕ್ಕೆ ಹೋಗಿಬರುವುದಾಗಿ ಪತ್ನಿ ಪುಟ್ಟಮ್ಮ ಅವರಿಗೆ ತಿಳಿಸಿ ತೆರಳಿದವರು 11 ಗಂಟೆಯಾದರೂ ವಾಪಸ್‌ ಬಂದಿಲ್ಲ.

ಹೀಗಾಗಿ ತೋಟಕ್ಕೆ ಹೋಗಿ ನೋಡಿಕೊಂಡು ಬರುವಂತೆ ಪುಟ್ಟಮ್ಮ ಅವರು, ಮನೆ ಕೆಲಸದಾತನಿಗೆ ಹೇಳಿ ಕಳುಹಿಸಿದ್ದರು. ಅದರಂತೆ ಆತ ತೋಟದ ಪಂಪ್‌ಸೆಟ್‌ ಕೊಠಡಿಯಲ್ಲಿ ನೋಡಿದಾಗ ಮುನಿಯಪ್ಪ ಅವರ ಮೃತದೇಹ ರಕ್ತದ ಮಡುವಲ್ಲಿ ಬಿದ್ದಿತ್ತು. ಕೂಡಲೇ ಆತ ಸ್ಥಳೀಯರಿಗೆ ಮಾಹಿತಿ ನೀಡಿದ್ದಾನೆ.

ವಿಷಯ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದು, ಶ್ವಾನದಳ ಕೂಡ ಪರಿಶೀಲನೆ ನಡೆಸಿದೆ. ಮಾರಕಾಸ್ತ್ರಗಳಿಂದ ಮುನಿಯಪ್ಪ ಅವರ ತಲೆಗೆ ಹೊಡೆದಿರುವ ಗುರುತುಗಳಿವೆ. ಪೂರ್ವನಿಯೋಜಿತವಾಗಿ ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ತನಿಖಾ ಭಾಗವಾಗಿ ಮುನಿಯಪ್ಪ ಅವರ ದೂರವಾಣಿ ಕರೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಮುನಿಯಪ್ಪ ದಂಪತಿಗೆ ಆರು ಮಂದಿ ಗಂಡು ಮಕ್ಕಳು, ಇಬ್ಬರು ಹೆಣ್ಣುಮಕ್ಕಳಿದ್ದು, ಹೆಣ್ಣುಮಕ್ಕಳಿಗೆ ಮದುವೆ ಮಾಡಿಕೊಡಲಾಗಿದೆ. ಜಮೀನು ನಿರ್ವಹಣೆ ಅವರೇ ಮಾಡುತ್ತಿದ್ದರು. ಕೆಲ ವ್ಯಕ್ತಿಗಳ ಜತೆ ಹಣಕಾಸು ಲೇವಾದೇವಿ ವ್ಯವಹಾರ ನಡೆಸುತ್ತಿದ್ದು, ಊರಿನ ಕೆಲವರ ಜತೆ ಈ ಹಿಂದೆ ಜಗಳವಾಗಿತ್ತು ಎಂದು ಅವರ ಪತ್ನಿ ಪುಟ್ಟಮ್ಮ ಹೇಳಿಕೆ ನೀಡಿದ್ದಾರೆ.

ಹಣಕಾಸು ವ್ಯವಹಾರ ಹಾಗೂ ಜಮೀನು ವಿವಾದಕ್ಕೆ ಕೊಲೆ ನಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿ ಹೇಳಿದರು.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

7

Bengaluru: ನಗರದಲ್ಲಿ ಏಕಕಾಲಕ್ಕೆ  200 ಗಣೇಶ ಮೂರ್ತಿಗಳ ಮೆರವಣಿಗೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

5

Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.