ಕದ್ದು ಗುಡಿ ಸೇರುತ್ತಿದ್ದ ಕುಖ್ಯಾತನ ಸೆರೆ

Team Udayavani, Nov 17, 2017, 11:31 AM IST

kaddu-gudi.jpg

ಬೆಂಗಳೂರು: ದಶಕಗಳ ಕಾಲ ಕಳವನ್ನೇ ವೃತ್ತಿಯನ್ನಾಗಿಸಿಕೊಂಡು ಐಷಾರಾಮಿ ಜೀವನ ನಡೆಸುತ್ತಿದ್ದ ಆರೋಪಿಯನ್ನು ಭಾರತೀನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉತ್ತರಹಳ್ಳಿ ನಿವಾಸಿ ಮಂಜುನಾಥ್‌ ಅಲಿಯಾಸ್‌ ಕಲ್ಕೇರೆ ಮಂಜ (32) ಬಂಧಿತ ಆರೋಪಿ.

ಈತನ ಬಂಧನದಿಂದ 6  ಕಳವು ಪ್ರಕರಣಗಳು ಪತ್ತೆಯಾಗಿದ್ದು, 30 ಲಕ್ಷ ರೂ. ಮೌಲ್ಯದ 850 ಗ್ರಾಂ ಚಿನ್ನಾಭರಣ, 850 ಗ್ರಾಂ ಬೆಳ್ಳಿ ವಸ್ತುಗಳು, ಒಂದು ಸ್ವಿಫ್ಟ್ ಕಾರು, 50 ಇಂಚಿನ ಎರಡು ಟಿವಿ ಮತ್ತು ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ.

ಯಾವುದೇ ಕೆಲಸಕ್ಕೆ ಹೋಗದೆ ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಸತತ 15 ವರ್ಷಗಳ ಕಾಲ ಕಳ್ಳತನವನ್ನೇ ವೃತ್ತಿಯನ್ನಾಗಿಸಿಕೊಂಡಿದ್ದ ಈತ, ಬೀಗ ಹಾಕಿರುವ ಮನೆಗಳನ್ನು ಕಬ್ಬಿಣದ ರಾಡ್‌ಗಳಿಂದ ಮೀಟಿ ಕಳವು ಮಾಡುತ್ತಿದ್ದ. ಮೂಲತಃ ರಾಣಿಪೇಟ್‌ನವನಾದ ಈತ ನಗರದ ಉತ್ತರಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ.

ಬೆಂಗಳೂರಿನ ಭಾರತೀನಗರ, ಪುಲಕೇಶಿ ನಗರ, ಸೋಲದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಮತ್ತು ಹಾಸನ ಜಿಲ್ಲೆಗಳ ವಿವಿಧ ಠಾಣೆಗಳಲ್ಲಿ ಈತನ ವಿರುದ್ಧ ಕಳವು ಪ್ರಕರಣಗಳು ದಾಖಲಾಗಿದೆ. ಇದೇ ವರ್ಷ ಆ.26ರಂದು ಜೈಲಿನಿಂದ ಬಿಡುಗಡೆಯಾಗಿದ್ದ ಈತ, ಆ.31ರಂದು ಕಳ್ಳತನ ಕೃತದ್ಯದಲ್ಲಿ ತೊಡಗಿದ್ದ ಎಂದು ಹೆಚ್ಚುವರಿ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕೇವಲ ಎರಡೇ ದಿನಗಳಲ್ಲಿ ಭಾರತೀನಗರ ಮತ್ತು ಪುಲಕೇಶಿನಗರ ವ್ಯಾಪ್ತಿಯಲ್ಲಿ ಇಬ್ಬರು ಉದ್ಯಮಿಗಳ ಮನೆಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ. ತನಿಖೆ ಆರಂಭಿಸಿದ ಪೊಲೀಸರಿಗೆ ಈತನ ಮೇಲೆ ಅನುಮಾನ ಬಂದಿತ್ತು. ಈತನನನ್ನು ಹುಡುಕಾಡುತ್ತಿದ್ದ ಪೊಲೀಸರಿಗೆ ಆರೋಪಿ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ. ಈತನಿಂದ ಚಿನ್ನಾಭರಣಗಳನ್ನು ಅಡವಿಟ್ಟುಕೊಳ್ಳುವವರ ವಿರುದ್ಧ ತನಿಖೆ ನಡೆಯುತ್ತಿದೆ. ಹಾಗೆಯೇ ಈತನನ್ನು ಜೈಲಿನಿಂದ ಬಿಡಿಸಲು ಜಾಮೀನು ನೀಡುವ ವ್ಯಕ್ತಿಗಳ ಬಗ್ಗೆಯೂ ನಿಗಾವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದೇವರೇ ಶ್ರೀರಕ್ಷೆ: ಆರೋಪಿ ಮಂಜ, 10ನೇ ತರಗತಿ ಮುಗಿಯುತ್ತಿದ್ದಂತೆ ಕಳ್ಳತನಕ್ಕೆ ಇಳಿದಿದ್ದ. ಯಾರೊಟ್ಟಿಗೂ ಸೇರದ ಈತ ಕೃತ್ಯವೆಸಗುತ್ತಿದ್ದ. ರಾಮಮೂರ್ತಿನಗರದ ಕಲ್ಕೇರೆಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮಂಜ, ಪರಿಚಿತ ಪ್ರದೇಶಗಳಲ್ಲಿ ಮಾತ್ರ ಕಳವು ಮಾಡುತ್ತಿದ್ದ.

ಕಳವು ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಇಲ್ಲಿನ ದೇವಾಲಯಗಳಲ್ಲಿ ಮಲಗುತ್ತಿದ್ದ. ವಿಶೇಷವೆಂದರೆ ಯಾವುದೇ ಸಂದರ್ಭದಲ್ಲಿಯೂ ಪೊಲೀಸರು ದೇವಾಲಯದ ಮೇಲೆ ಪೊಲೀಸರು ಬಂದು ಪರಿಶೀಲನೆ ನಡೆಸುವುದಿಲ್ಲ ಎಂಬ ನಂಬಿಕೆ ಮೇಲೆ ಈ ರೀತಿ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

44 ಕೇಸ್‌, 20 ಕ್ಲೀನ್‌ಚೀಟ್‌: 15 ವರ್ಷದ ಕಳ್ಳತನ ಜೀವನದಲ್ಲಿ ಈತನ ವಿರುದ್ಧ 44 ಪ್ರಕರಣಗಳು ದಾಖಲಾಗಿದ್ದು, 20 ಪ್ರಕರಣಗಳು ಖುಲಾಸೆಯಾಗಿವೆ. ಇನ್ನುಳಿದ 24 ಪ್ರಕರಣಗಳ ವಿಚಾರಣೆ ಬಾಕಿಯಿದೆ. ಎರಡು ವರ್ಷಗಳ ಹಿಂದೆ ಜೈಲು ಸೇರಿದ್ದ ಮಂಜುನಾಥ್‌, ಬಿಡುಗಡೆಯಾದ ಐದೇ ದಿನಗಳಲ್ಲಿ ಹಾಸನದಲ್ಲಿ ಮನೆಯೊಂದರ ಕಳ್ಳತನ ಮಾಡಿದ್ದ. ಇಲ್ಲಿ 550 ಗ್ರಾಂ ಚಿನ್ನ ಕದ್ದು ಐಷಾರಾಮಿ ಜೀವನ ನಡೆಸುತ್ತಿದ್ದ ಎಂದು ಪೊಲೀಸರು ಹೇಳಿದರು.

ಕಾರು ಖರೀದಿ: ಹಾಸನದಲ್ಲಿ ಕಳವು ಮಾಡಿದ್ದ ಚಿನ್ನಾಭರಣ ಮಾರಾಟ ಮಾಡಿ ಸ್ವಿಫ್ಟ್ ಕಾರು ಖರೀದಿಸಿದ್ದ. ಇದೇ ಕಾರಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹೋಗಿ ಒಂಟಿ ಮನೆಗಳು, ಬೀಗ ಹಾಕಿದ ಮನೆಗಳನ್ನು ಪತ್ತೆ ಹಚ್ಚಿ ಕಳವು ಮಾಡುತ್ತಿದ್ದ. ಅದಕ್ಕಾಗಿ ಕಾರಿನಲ್ಲಿ ಆಯುಧಗಳನ್ನು ಕೂಡ ಇಟ್ಟಿದ್ದ. ಮನೆ ಬೀಗವನ್ನು ಸುಲಭವಾಗಿ ಮುರಿಯುವ ಸಲುವಾಗಿ ಎರಡು ಚೂಪೂಗೊಳಿಸಿದ ಕಬ್ಬಿಣದ ರಾಡ್‌ ಯಾವಾಗಲೂ ಕಾರಿನಲ್ಲಿರುತ್ತಿತ್ತು.

ಟಿವಿ ಕೊಟ್ಟ ಮಾಹಿತಿ!: ಕಳ್ಳತನಕ್ಕೆ ಹೋದಾಗ 50 ಇಂಚಿನ ಎರಡು ಟಿವಿಗಳನ್ನು ಕಳ್ಳತನ ಮಾಡಿದ್ದ ಮಂಜುನಾಥ್‌, ಈ ಪೈಕಿ ಒಂದನ್ನು ಅಡವಿಟ್ಟು ಹಣ ಪಡೆದುಕೊಳ್ಳುವ ಸಲುವಾಗಿ ಶಿವಾಜಿನಗರಕ್ಕೆ ಬಂದಿದ್ದ. ಟಿವಿ ಅಡವಿಡಲು ಬಂದವನ ಮೇಲೆ ಸಾಕಷ್ಟು ಅನುಮಾನ ಬಂದ ಹಿನ್ನೆಲೆಯಲ್ಲಿ ಬಾತ್ಮೀದಾರರೊಬ್ಬರು ಭಾರತೀನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ‌ ನಡೆಸಿದಾಗ  ಆರೋಪಿಯ ಕಳ್ಳ ಚರಿತ್ರೆ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.