ಬಾಪೂಜಿ ಸೇವಾ ಕೇಂದ್ರಗಳಲ್ಲಿನ ಆನ್‌ಲೈನ್ ಸೇವೆಗಳಿಗೆ “ಕತ್ತರಿ’
Team Udayavani, Oct 20, 2018, 6:15 AM IST
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಹಳ್ಳಿಯ ಜನತೆಗೆ ಆನ್‌ಲೈನ್‌ನಲ್ಲಿ ಒದಗಿಸಲಾಗುತ್ತಿದ್ದ ಸೇವೆಗಳಿಗೆ “ಕತ್ತರಿ’ ಬಿದ್ದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ 43 ಸೇವೆಗಳ ಸಂಖ್ಯೆಯನ್ನು 25ಕ್ಕೆ ಇಳಿಸಲಾಗಿದೆ.
ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಸದ್ಯ ಒದಗಿಸಲಾಗುತ್ತಿರುವ 43 ಸೇವೆಗಳ ಪೈಕಿ ಕೆಲವೊಂದು ಫಲಾನುಭವಿ ಸಂಬಂಧಿತ, ತೆರಿಗೆ ಪಾವತಿ ಸಂಬಂಧಿತ ಸೇವೆಗಳು ಆಗಿರುವುದರಿಂದ ಹಾಗೂ ಕೆಲವೊಂದು ಸೇವೆಗಳನ್ನು ಆನ್‌ಲೈನ್ ಮೂಲಕ ಒದಗಿಸಲು ಗ್ರಾಪಂಗಳಿಂದ ಸಾಧ್ಯವಿಲ್ಲದಿರುವುದರಿಂದ ಸೇವೆಗಳ ಸಂಖ್ಯೆಯನ್ನು ಪರಿಷ್ಕರಿಸಲು ಇಲಾಖೆ ಮುಂದಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಇ-ಆಡಳಿತ) ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಬಾಪೂಜಿ ಸೇವಾ ಕೇಂದ್ರಗಳಲ್ಲಿನ ಸೇವೆಗಳನ್ನು ಪರಿಷ್ಕರಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಅದರಂತೆ, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಉಂಟಾಗುತ್ತಿರುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಸೇವೆಗಳನ್ನು ಪರಿಷ್ಕರಿಸಲಾಗಿದೆ.
ಹಾಗಾಗಿ, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಒದಗಿಸಲಾಗುತ್ತಿದ್ದ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ 43 ಸೇವೆಗಳನ್ನು ಇದೀಗ 25 ಸೇವೆಗಳನ್ನಾಗಿ ಪರಿಷ್ಕರಿಸಲಾಗಿದೆ. ಈ ಸಂಬಂಧ ತಂತ್ರಾಂಶದಲ್ಲಿ ಸೂಕ್ತ ಮಾರ್ಪಾಡುಗಳನ್ನು ಮಾಡಿಕೊಳ್ಳಲು ಎನ್‌ಐಸಿಗೆ ಸೂಚಿಸಲಾಗಿದೆ. ಪರಿಷ್ಕೃತ ಸೇವೆಗಳನ್ನು ಕಡ್ಡಾಯವಾಗಿ ಇ-ಸ್ವತ್ತು ತಂತ್ರಾಂಶದ ಫಾರಂ-9 ಮತ್ತು ಫಾರಂ 11ಎ ಮಾದರಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಡಿಜಿಟಲ್ ಸಹಿಯೊಂದಿಗೆ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗ್ರಾಮೀಣ ಜನತೆಯು ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಮತ್ತು ಕೃಷಿ ಚಟುವಟಿಕೆಗಳಿಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳನ್ನು ಪಡೆದುಕೊಳ್ಳುವ ಅವಶ್ಯಕತೆ ಇರುತ್ತದೆ. ಈ ದಾಖಲೆಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಒದಗಿಸಲು 2016ರಲ್ಲಿ ರಾಜ್ಯ ಸರ್ಕಾರ ನಿರ್ಧರಿಸಿತ್ತು. ಅದರಂತೆ, ಗ್ರಾಮೀಣಾಭಿವೃದ್ಧಿ ಇಲಾಖೆಯ 43 ಸೇವೆಗಳು, ಕಂದಾಯ ಇಲಾಖೆಯ 40 ಹಾಗೂ ಇತರ 17 ಸೇವೆಗಳನ್ನು ಸೇರಿಸಿ ಒಟ್ಟು ವಿವಿಧ 100 ಸೇವೆಗಳನ್ನು ಆನ್‌ಲೈನ್ ಮೂಲಕ ಒದಗಿಸಲು ಗ್ರಾಪಂಗಳಲ್ಲಿ “100-ಬಾಪೂಜಿ ಸೇವಾ ಕೇಂದ್ರ’ಗಳನ್ನು ಸ್ಥಾಪಿಸಲಾಗಿತ್ತು.
ಅದಕ್ಕಾಗಿ ಮೊದಲ ಹಂತದಲ್ಲಿ 2 ಸಾವಿರ, ನಂತರ 3,141 ಸೇರಿ ಒಟ್ಟು 5,141 ಗ್ರಾಪಂಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅಲ್ಲದೆ, ಈ ವರ್ಷದ ಆರಂಭದಲ್ಲಿ 535 ಗ್ರಾಪಂಗಳನ್ನು ಬಾಪೂಜಿ ಸೇವಾ ಕೇಂದ್ರಗಳ ವ್ಯಾಪ್ತಿಗೆ ಸೇರಿಸಲಾಗಿದೆ. ಈ ಕೇಂದ್ರಗಳಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ 43 ಸೇವೆಗಳನ್ನು ನೀಡಲಾಗುತ್ತಿತ್ತು. ಹೆಚ್ಚು ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕಂದಾಯ ಇಲಾಖೆಯ ಮತ್ತು ಇತರ ಕೆಲವು ಸೇವೆಗಳನ್ನೂ ಸಹ ಸೇರಿಸಲಾಗಿತ್ತು. ಈಗ ಗ್ರಾಮೀಣಾಭಿವೃದ್ಧಿ ಇಲಾಖೆಯ ಸೇವೆಗಳನ್ನು ಪರಿಷ್ಕರಿಸಲಾಗುತ್ತಿದೆ. ಇದರಿಂದ ಜನರಿಗೆ ಯಾವುದೇ ಅನಾನೂಕೂಲ ಆಗುವುದಿಲ್ಲ. ಬದಲಿಗೆ ಒಳ್ಳೆಯದೇ ಆಗುತ್ತದೆ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಯಾವ್ಯಾವ ಸೇವೆಗಳು:
ವಸತಿ ಮತ್ತು ವಾಣಿಜ್ಯ ಕಟ್ಟಡದ ನಿರ್ಮಾಣ ಅನುಮತಿ ಪತ್ರ, ಕಾಮಗಾರಿ ಮುಕ್ತಾಯ ಪ್ರಮಾಣಪತ್ರ, ಆಸ್ತಿ ತೆರಿಗೆ ಪಾವತಿ, ಮನ್ನಾ, ಭೂಪರಿವರ್ತನೆ ಅರ್ಜಿ, ನೀರಿನ ಸಂಪರ್ಕ ಮತ್ತು ಶುಲ್ಕ ಪಾವತಿ ಅರ್ಜಿ, ವಿಶೇಷ ಘಟಕ ಯೋಜನೆಗಳ ಅರ್ಜಿ, ವಸತಿ, ಉಚಿತ ನಿವೇಶನ ಪಡೆಯಲು ಅರ್ಜಿ, ಉದ್ಯೋಗ ಖಾತರಿ ಯೋಜನೆಯಡಿ ಕೆಲಸಕ್ಕೆ ಅರ್ಜಿ, ವ್ಯಾಪಾರ ಪರವಾನಿಗೆ ಮತ್ತು ಅದರ ನವೀಕರಣಕ್ಕೆ ಅರ್ಜಿ, ಜನಸಂಖ್ಯೆ, ಬೆಳೆ, ಜಾನುವಾರು ಗಣತಿ, ಬಿಪಿಎಲ್ ಪಟ್ಟಿಗೆ ಅರ್ಜಿ ಈ ರೀತಿ ಹಳ್ಳಿಗಳಲ್ಲಿ ಸಾರ್ವಜನಿಕರಿಗೆ ದಿನನಿತ್ಯದ ಬದುಕಿನಲ್ಲಿ ತುರ್ತಾಗಿ ಬೇಕಾಗುವ ತೀರಾ ಅನಿವಾರ್ಯ ಮತ್ತು ಅವಶ್ಯಕ ವಿವಿಧ 43 ಸೇವೆಗಳನ್ನು ಒದಗಿಸಲಾಗುತ್ತಿತ್ತು, ಅದರಲ್ಲಿ ಇದೀಗ ಕೆಲವು ಸೇವೆಗಳನ್ನು ತೆಗೆಯಲಾಗಿದೆ.
ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೀಡಲಾಗುತ್ತಿದ್ದ ಗ್ರಾಮೀಣಾಭಿವೃದ್ಧಿ ಇಲಾಖೆಯ 43 ಸೇವೆಗಳನ್ನು ಪರಿಷ್ಕರಿಸಲಾಗಿದೆ. ಕೆಲವೊಂದು ಸೇವೆಗಳು, ನಿಜವಾಗಿ ಸೇವೆಗಳಾಗಿರಲಿಲ್ಲ, ಅವುಗಳಿಂದ ಕಾರ್ಯದ ಒತ್ತಡ ಹೆಚ್ಚಾಗುತ್ತಿತ್ತು. ಅದಕ್ಕಾಗಿ ಕೇವಲ ಸೇವಾ ರೂಪದ ಸೇವೆಗಳನ್ನು ಉಳಿಸಿಕೊಂಡು, ಉಳಿದವುಗಳನ್ನು ಕಡಿತ ಮಾಡಲಾಗಿದೆ.
– ಶ್ರೀನಿವಾಸ ಮಾರಂಗಪ್ಪನವರ್, ನಿರ್ದೇಶಕ, ಇ-ಆಡಳಿತ.
– ರಫೀಕ್ ಅಹ್ಮದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
Surathkal: ಬೇಕು ವ್ಯವಸ್ಥಿತ ಒಳಚರಂಡಿ; ಸೋರುತ್ತಿರುವ ವೆಟ್‌ವೆಲ್‌ಗಳಿಂದ ಮಾಲಿನ್ಯ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.