ಪಾಲಿಟೆಕ್ನಿಕ್ ಕಾಲೇಜಿನಲ್ಲೂ ವಿದ್ಯಾರ್ಥಿಗಳ ಸಂಖ್ಯೆ ಕುಸಿತ
Team Udayavani, Jul 21, 2018, 6:40 AM IST
ಬೆಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಪಾಲಿಟೆಕ್ನಿಕ್ ಕಾಲೇಜಿನ ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಏರಿಕೆ ಹಂತದಲ್ಲಿದ್ದ ವಿದ್ಯಾರ್ಥಿಗಳ ಸೇರ್ಪಡೆ ಪ್ರಮಾಣ 2017-18ನೇ ಸಾಲಿನಲ್ಲಿ ಗಣನೀಯವಾಗಿ ಇಳಿಕೆಯಾಗಿದೆ.
2016-17ನೇ ಸಾಲಿನಲ್ಲಿ ಎಂಜಿನಿಯರಿಂಗ್ ಕೋರ್ಸ್‌ಗೆ ವಿವಿಧ ಕಾಲೇಜಿನಲ್ಲಿ 77,092 ವಿದ್ಯಾರ್ಥಿಗಳು ದಾಖಲಾಗಿದ್ದರು. 2017-18ನೇ ಸಾಲಿನಲ್ಲಿ ಎಂಜಿನಿಯರಿಂಗ್ ಕೋರ್ಸ್‌ಗೆ ಸೇರಿದ ವಿದ್ಯಾರ್ಥಿಗಳ ಸಂಖ್ಯೆ 67,629ಕ್ಕೆ ಇಳಿಕೆಯಾಗಿದೆ. ಡಿಪ್ಲೊಮಾ ಕೋರ್ಸ್‌ಗೆ 2016-17ರಲ್ಲಿ 58,595 ವಿದ್ಯಾರ್ಥಿಗಳು ಸೇರಿಕೊಂಡಿದ್ದರು. 2017-18ರಲ್ಲಿ ವಿದ್ಯಾರ್ಥಿಗಳ ಸಂಖ್ಯೆ 53,957ಕ್ಕೆ ಕುಸಿದಿದೆ.
ಕಳೆದ ಮೂರ್‍ನಾಲ್ಕು ವರ್ಷಗಳಿಂದ ರಾಜ್ಯದ ಕೆಲವು ಪಾಲಿಟೆಕ್ನಿಕ್‌ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿರುವುದನ್ನು ಇಲಾಖೆ ತನ್ನ ವಾರ್ಷಿಕ ವರದಿಯಲ್ಲಿ ಉಲ್ಲೇಖೀಸಿದೆ.
ವರ್ಷ ಎಂಜಿನಿಯರಿಂಗ್ ಡಿಪ್ಲೊಮಾ
2013- 14 76333 71117
2014 -15 77466 61835
2015 -16 77832 59812
2016 -17 77092 58595
2017 -18 67629 53957
2017- 18ನೇ ಸಾಲಿನಲ್ಲಿ ಇಲಾಖೆ ಮಾಡಿರುವ ಸಾಧನೆ, ಆನ್‌ಲೈನ್ ಇಂಟರಾಕ್ಟಿವ್ ಕೌನ್ಸೆಲಿಂಗ್ ಮೂಲಕ ವಿದ್ಯಾರ್ಥಿಗಳಿಗೆ ಮಾಡಿಕೊಟ್ಟಿರುವ ಅನುಕೂಲ, ಇಲಾಖೆಯನ್ನು ಸಕಾಲ ವ್ಯಾಪ್ತಿಗೆ ತಂದಿದ್ದರಿಂದ ಆಗಿರುವ ಉಪಯೋಗ, ಪಾಲಿಟೆಕ್ನಿಕ್ ಕಾಲೇಜುಗಳ ನಿರ್ವಹಣೆ ಸೇರಿದಂತೆ ಒಂದು ವರ್ಷದ ಅಂಕಿ -ಅಂಶ ಸಹಿತವಾದ ವಾರ್ಷಿಕ ವರದಿಯನ್ನುಬಿಡುಗಡೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.