ಎರಡು ದಿನ ಭೇಟಿ ಕೊಟ್ಟವರ ಸಂಖ್ಯೆ ಲಕ್ಷಕ್ಕೂ ಅಧಿಕ
Team Udayavani, Aug 13, 2019, 3:03 AM IST
ಬೆಂಗಳೂರು: ಲಾಲ್‌ಬಾಗ್‌ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ರಜಾ ದಿನಗಳಾದ ಭಾನುವಾರ ಮತ್ತು ಸೋಮವಾರ ಒಂದು ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದಾರೆ. ಭಾನುವಾರ ಹಾಗೂ ಬಕ್ರೀದ್ ಹಬ್ಬದ ಅಂಗವಾಗಿ ಸೋಮವಾರ ರಜೆ ದಿನವಾದ್ದರಿಂದ ಎರಡೂ ದಿನಗಳು ಉದ್ಯಾನಕ್ಕೆ ಜನಸಾಗರ ಹರಿದು ಬಂದಿತ್ತು.
ಮೋಡ ಕವಿದ ವಾತಾವರಣ ಹಾಗೂ ತುಂತುರು ಮಳೆಯ ನಡುವೆ ಹಸಿರು ಪರಿಸರ ಹಾಗೂ ಹೂಗಳಿಂದ ಅರಳಿದ ಕಲಾಕೃತಿ ನೋಡಿ ಖುಷಿಪಟ್ಟರು. ಬಾಲರಾಜ್ ಎಂಬುವರು ನೇತೃತ್ವದಲ್ಲಿ ದೃಷ್ಟಿ ವಿಕಲಚೇತನರ ತಂಡದಿಂದ ಸೋಮವಾರ ಬೆಳಗ್ಗೆ 11ರಿಂದ ವಾದ್ಯಗೋಷ್ಠಿ ನಡೆಯಿತು. ಕರ್ನಾಟಕ ಇತಿಹಾಸವನ್ನು ಬಿಂಬಿಸುವ ಹಾಡಗಳನ್ನು ಹಾಡಿ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಬಂದಿದ್ದ ಜನರನ್ನು ರಂಜಿಸಿದರು.
ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಬಂದಿದ್ದ ಜನರನ್ನು ನಿಯಂತ್ರಿಸಲು ಪೊಲೀಸ್ ಸಿಬ್ಬಂದಿ ಜತೆಗೆ ಸ್ವಯಂ ಸೇವಕರು, ಇಲಾಖೆ ಸಿಬ್ಬಂದಿ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದರು. ಜೈನ್ ಕಾಲೇಜಿನ ಯುವಕರು ನೀರಿನ ಸಂರಕ್ಷಣೆಗಾಗಿ ಅರಣ್ಯ ಉಳಿಸಿ ಎಂದು ಜಾಗೃತಿ ಫಲಕಗಳನ್ನು ಪ್ರದರ್ಶಿಸುವ ಮೂಲಕ ಅರಿವು ಮೂಡಿಸಿದರು.
ಎರಡು ದಿನ ಭೇಟಿ ಕೊಟ್ಟವರ ಸಂಖ್ಯೆ ಲಕ್ಷಕ್ಕೂ ಅಧಿಕ: “ಭಾನುವಾರ ವಯಸ್ಕರು ಮತ್ತು ಮಕ್ಕಳು ಸೇರಿ ದಂತೆ 60,500 ಮಂದಿ ವೀಕ್ಷಣೆಗೆ ಆಗಮಿಸಿದ್ದು, ಒಂದೇ ದಿನ 29.86 ಲಕ್ಷ ರೂ. ಹಾಗೂ ಸೋಮವಾರ ವಯಸ್ಕರು 40,350 ಹಾಗೂ ಮಕ್ಕಳು 10,150 ಮಂದಿ ಆಗಮಿಸಿದ್ದು, ಒಟ್ಟು 27.56 ಲಕ್ಷ ರೂ.ಸಂಗ್ರಹವಾಗಿದೆ’ ಎಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Bengaluru: ಬಿಷಪ್ ಕಾಟನ್ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್: ಆತಂಕ
Bengaluru: ಮನೆಯ ಬಾಲ್ಕನಿಯಲ್ಲಿ ಗಿಡಗಳ ಮಧ್ಯೆ ಗಾಂಜಾ ಬೆಳೆದಿದ್ದ ದಂಪತಿ ಬಂಧನ
MUST WATCH
ಹೊಸ ಸೇರ್ಪಡೆ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.