ಹೆದ್ದಾರಿಗಳ ಡಿನೋಟಿಫೈ ವಿಚಾರ ಪರಿಶೀಲನೆಯಲ್ಲಿದೆ

Team Udayavani, Jul 28, 2017, 10:56 AM IST

highway-road.jpg

ಬೆಂಗಳೂರು: ನಗರ ಪ್ರದೇಶದ ಮಧ್ಯೆ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಗಳ ಡಿನೋಟಿಫೈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸರ್ಕಾರ ಕಳುಹಿಸಿರುವ ಪ್ರಸ್ತಾವನೆ ಕೇಂದ್ರ ಕಾನೂನು ಸಚಿವಾಲಯದ ಪರಿಶೀಲನೆಯಲ್ಲಿದೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಸಂಬಂಧದ ಪ್ರಕರಣದ ವಿಚಾರಣೆ ವೇಳೆ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ, “ನಗರ ವ್ಯಾಪ್ತಿಯಲ್ಲಿರುವ  ಹೆದ್ದಾರಿಗಳನ್ನು ಡಿನೋಟಿಫೈ ಮಾಡುವ ಸಂಬಂಧ ರಾಜ್ಯಸರ್ಕಾರ ಸಲ್ಲಿಸಿರುವ ಪ್ರಸ್ತಾವನೆ ಕೇಂದ್ರ ಕಾನೂನು ಸಚಿವಾಲಯ ಪರಿಶೀಲಿಸುತ್ತಿದ್ದು, ಈ ಬಗ್ಗೆ ರಾಜ್ಯಸರ್ಕಾರದಿಂದ ಪೂರ್ಣ ವಿವರಣೆ ದೊರೆತ ನಂತರ ಕೇಂದ್ರದ ನಿಲುವು ತಿಳಿಸಲಾಗುತ್ತದೆ,’ ಎಂಬ ಅಂಶಗಳನ್ನೊಳಗೊಂಡ ಜ್ಞಾಪನಾಪತ್ರವನ್ನು ನ್ಯಾ. ವಿನೀತ್‌ ಕೊಠಾರಿ ಅವರ ನ್ಯಾಯಪೀಠಕ್ಕೆ ಸಲ್ಲಿಸಿದರು. 

ಈ ಕುರಿತಂತೆ ವಾದ – ಪ್ರತಿವಾದ ಆಲಿಸಿದ ನ್ಯಾಯ ಪೀಠ ಆಗಸ್ಟ್‌ 3ಕ್ಕೆ ವಿಚಾರಣೆ ಮುಂದೂಡಿತು. ಕಂದಾಯ ಇಲಾಖೆ ದಾಖಲೆಗಳಲ್ಲಿ ಹೆದ್ದಾರಿ ವ್ಯಾಪ್ತಿಗೆ ಒಳಪಟ್ಟಿದೆ ಎಂಬ ಕಾರಣಕ್ಕೆ ನಗರದ ಮಹಾತ್ಮಗಾಂಧಿ ರಸ್ತೆ, ರೆಸಿಡೆನ್ಸಿ ರಸ್ತೆ ಹಾಗೂ ಬ್ರಿಗೇಡ್‌ ರಸ್ತೆಗಳ ಬಾರ್‌ ಮತ್ತು ರೆಸ್ಟೋರೆಂಟ್‌ಗಳ ಪರವಾನಗಿ ನವೀಕರಣ ಮಾಡಲು ನಿರಾಕರಿಸಿರುವ ರಾಜ್ಯ ಅಬಕಾರಿ ಇಲಾಖೆಯ ಕ್ರಮ ಪ್ರಶ್ನಿಸಿ, ಬ್ರಿಗೇಡ್‌ ರಸ್ತೆಯ ಫ್ಯೂಷನ್‌ ಲಾಂಜ್‌ ಆ್ಯಂಡ್‌ ರೆಸ್ಟೋರೆಂಟ್‌ ಸೇರಿದಂತೆ 20ಕ್ಕೂ ಹೆಚ್ಚು ಬಾರ್‌ ಮಾಲೀಕರು ಸಲ್ಲಿಸಿರುವ ಅರ್ಜಿ ವಿಚಾರಣೆ ಗುರುವಾರ ನಡೆಯಿತು.

ರಾಜ್ಯ ಸರ್ಕಾರದ ವಾದವೇನು?: ನಗರ ಪ್ರದೇಶಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳನ್ನು ಈಗಾಗಲೇ ಕೇಂದ್ರ ಸರ್ಕಾರ ಡಿನೋಟಿಫೈ ಮಾಡಿದೆ. ಸ್ಥಳೀಯ ಪ್ರಾಧಿಕಾರಿಗಳು ನಿರ್ವಹಣೆ ಮಾಡುತ್ತಿರುವ ರಸ್ತೆಗಳನ್ನು ರಾಜ್ಯ ಸರ್ಕಾರ ಡಿನೋಟಿಫೈ ಮಾಡಿದೆ.

ಕಂದಾಯ ಇಲಾಖೆಯ ದಾಖಲೆಗಳ ಪ್ರಕಾರ ಇನ್ನೂ ಹೆದ್ದಾರಿ ಎಂದೇ ಗುರುತಿಸಲ್ಪಟ್ಟಿರುವ ರಾಷ್ಟ್ರೀಯ ಹೆದ್ದಾರಿ-4 ಹಾಗೂ ರಾಷ್ಟ್ರೀಯ ಹೆದ್ದಾರಿ- 77  ಕೇಂದ್ರ ಸರ್ಕಾರದ ಡಿನೋಟಿಫೈ ಅಧಿಸೂಚನೆಯಲ್ಲಿ ಉಲ್ಲೇಖೀಸಲಾಗಿಲ್ಲ. ಈ ರಸ್ತೆಗಳನ್ನು ಡಿನೋಟಿಫೈ ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ಹೀಗಾಗಿ  ಕೇಂದ್ರ ಸರ್ಕಾರವೇ ಡಿನೋಟಿಫೈ ಮಾಡಬೇಕು ಎಂಬುದು ರಾಜ್ಯಸರ್ಕಾರದ ವಾದ. 

ಟಾಪ್ ನ್ಯೂಸ್

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.