ಹಾಡಹಗಲೇ ಗೃಹಿಣಿ ಕೊಂದ ದುಷ್ಕರ್ಮಿಗಳು
Team Udayavani, Nov 21, 2018, 11:49 AM IST
ಬೆಂಗಳೂರು: ರಾಮಮೂರ್ತಿನಗರದ ಅಬ್ಬಯ್ಯಲೇಔಟ್‌ನ ಮನೆಯೊಂದಕ್ಕೆ ಮಂಗಳವಾರ ಹಾಡಹಗಲೇ ನುಗ್ಗಿರುವ ದುಷ್ಕರ್ಮಿಗಳು ಮಹಿಳೆಯನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾರೆ.
ಮೇಘಲ ದೇವಿ (50) ಮೃತ ಮಹಿಳೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ರಾಮಮೂರ್ತಿನಗರ ಪೊಲೀಸರು ದುಷ್ಕರ್ಮಿಗಳ ಬಂಧನಕ್ಕೆ ಬಲೆಬೀಸಿದ್ದಾರೆ. ಚಿನ್ನಾಭರಣ ದೋಚುವ ಉದ್ದೇಶದಿಂದ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಮಹಿಳೆ ಕಿರುಚಿಕೊಂಡಿದ್ದರಿಂದ ಹೆದರಿ ಆಕೆಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಸಾಧ್ಯತೆಯಿದೆ ಎಂದು ಶಂಕಿಸಿದ್ದಾರೆ.
ತಮಿಳುನಾಡು ಮೂಲದ ಮೇಘಲ ದೇವಿ ಹಾಗೂ ಪತಿ ಕೃಷ್ಣಮೂರ್ತಿ ಕಳೆದ 30 ವರ್ಷಗಳಿಂದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಕೃಷ್ಣಮೂರ್ತಿ ಖಾಸಗಿ ಕಂಪೆನಿಯೊಂದರಲ್ಲಿ ಲಿಫ್ಟ್ ಆಪರೇಟರ್ ಆಗಿ ಕೆಲಸ ಮಾಡಿಕೊಂಡಿದ್ದಾರೆ. ದಂಪತಿ ಇಬ್ಬರೇ ವಾಸಿಸುತ್ತಿದ್ದರು. ಮಂಗಳವಾರ ಎಂದಿನಂತೆ ಕೃಷ್ಣಮೂರ್ತಿ ಕೆಲಸಕ್ಕೆ ಹೋಗಿದ್ದು ಮೇಘಲ ದೇವಿ ಮನೆಯಲ್ಲಿದ್ದರು.
ಮಧ್ಯಾಹ್ನ 2.15 ರ ಸುಮಾರಿಗೆ ದುಷ್ಕರ್ಮಿಗಳು ಬಾಗಿಲು ತಟ್ಟಿದ್ದಾರೆ. ಪರಿಚಯಸ್ಥರು ಎಂದುಕೊಂಡು ಮೇಘಲ ದೇವಿ ಬಾಗಿಲು ತೆಗೆಯುತ್ತಿದ್ದಂತೆ ಮನೆಯೊಳಗೆ ಪ್ರವೇಶಿಸಿದ್ದಾರೆ. ಬಳಿಕ ಆಕೆಯ ಜತೆ ಮಾತನಾಡುತ್ತಲೇ ಚಿನ್ನಾಭರಣ ಕಿತ್ತುಕೊಳ್ಳಲು ಯತ್ನಿಸಿದ್ದು ಆಕೆ ಕಿರುಚಿಕೊಂಡಿದ್ದಾರೆ. ಇದರಿಂದ ಗಾಯಬರಿಗೊಂಡ ದುಷ್ಕರ್ಮಿಗಳು ಆಕೆಯ ಕತ್ತಿನ ಭಾಗಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿರಬಹುದು ಎಂದು ಪೊಲೀಸರು ತಿಳಿಸಿದರು.
ಸಂಜೆ 4 ಗಂಟೆ ಸುಮಾರಿಗೆ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಕೃಷ್ಣಮೂರ್ತಿ ಪತ್ನಿ ಮೇಘಲ ದೇವಿ ರಕ್ತದ ಮಡುವಿನಲ್ಲಿ ಕೊಲೆಯಾಗಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಅವರ ಕಿರುಚಾಟ ಕೇಳಿ ಸ್ಥಳೀಯರು ಬಂದಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು ಎಂದು ಹಿರಿಯ ಅಧಿಕಾರಿ ತಿಳಿಸಿದರು.
ಪ್ರಕರಣವನ್ನು ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದ್ದು ಆರೋಪಿಗಳ ಬಂಧನಕ್ಕೆ ಕ್ರಮ ವಹಿಸಲಾಗಿದೆ. ಜತೆಗೆ ಮೇಘಲದೇವಿ ಮನೆ ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆಯಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ವರದಿ ಬರಬೇಕಿದೆ. ಜತೆಗೆ ಸ್ಥಳೀಯರ ಬಳಿಯೂ ಮಾಹಿತಿ ಕಲೆಹಾಕಬೇಕಿದೆ ಎಂದು ಅಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.