ಮತ್ತೆ ಪೊಲೀಸ್‌ ರಿವಾಲ್ವರ್‌ ಸದ್ದು

Team Udayavani, May 21, 2019, 11:57 AM IST

blore-1

ಬೆಂಗಳೂರು: ಏಳು ದಿನ… 20ಕ್ಕೂ ಹೆಚ್ಚು ಸರಗಳವು… ಪೊಲೀಸ್‌ ರಿವಾಲ್ವರ್‌ನಿಂದ ಹೊರಬಿದ್ದ ನಾಲ್ಕು ಬುಲೆಟ್‌ಗಳು… ಗಾಯಗೊಂಡು ಆಸ್ಪತ್ರೆ ಸೇರಿದ ಇಬ್ಬರು ಕುಖ್ಯಾತ ಸರಗಳ್ಳರು…

ಪಲ್ಸರ್‌ ಬೈಕ್‌ನಲ್ಲಿ ಸುತ್ತಾಡಿ ಮಹಿಳೆಯರ ಸರ ಕಿತ್ತುಕೊಂಡು ಪರಾರಿಯಾಗಿ ಸಾರ್ವಜನಿಕರಿಗೆ ತಲೆ ನೋವಾಗಿದ್ದ ಇಬ್ಬರು ನವದೆಹಲಿ ಮೂಲದ ಸರ ಗಳ್ಳರಿಗೆ ಉತ್ತರ ವಿಭಾಗದ ಪೊಲೀಸರು ಸೋಮವಾರ ಬೆಳಗ್ಗೆ ಗುಂಡೇಟಿನ ರುಚಿ ತೋರಿಸಿದ್ದಾರೆ.

ಗುಂಡೇಟು ತಿಂದಿರುವ ಸುರೇಂದ್ರ ಸಿಂಗ್‌ ಹಾಗೂ ಕರಣ್‌ ಗುಪ್ತಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರೂ ಆರೋಪಿಗಳು, ನಗರದ ವಿವಿಧ ಭಾಗಗಳಲ್ಲಿ ಏಳು ದಿನಗಳಲ್ಲಿ 20ಕ್ಕೂ ಹೆಚ್ಚು ಸರಗಳ್ಳತನ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ.

ಸರಗಳವು ಪ್ರಕರಣಗಳ ಹಿನ್ನೆಲೆಯಲ್ಲಿ ಆರೋಪಿಗಳ ಬಂಧನಕ್ಕೆ ರಚಿಸಿದ್ದ ವಿಶೇಷ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದು, ಆರೋಪಿಗಳ ಬಗ್ಗೆ ಸುಳಿವು ದೊರೆತಿತ್ತು. ಭಾನುವಾರ ಬೆಳಗ್ಗೆ 5.30ರ ಸುಮಾರಿಗೆ ರಾಮಯ್ಯ ಲೇಔಟ್‌ನಲ್ಲಿ ಮಹಿಳೆಯೊಬ್ಬರ ಸರ ಕಿತ್ತ ಬಗ್ಗೆ ಮಾಹಿತಿ ಆಧರಿಸಿ ಬಾಗಲಕುಂಟೆ ಠಾಣೆ ಇನ್ಸ್‌ಪೆಕ್ಟರ್‌ ಶಿವಸ್ವಾಮಿ ಹಾಗೂ ನಂದಿನಿ ಲೇಔಟ್ ಠಾಣೆ ಇನ್ಸ್‌ಪೆಕ್ಟರ್‌ ಲೋಹಿತ್‌ ನೇತೃತ್ವದ ತಂಡಗಳು ಕಾರ್ಯಾಚರಣೆ ಚುರುಕುಗೊಳಿಸಿದ್ದವು.

ಸೋಮವಾರ ಮುಂಜಾನೆ 6 ಗಂಟೆ ಸುಮಾರಿಗೆ ಆರೋಪಿಗಳಿಬ್ಬರು ಕುದುರೆ ಕ್ರಾಸ್‌ನಲ್ಲಿ ಪೊಲೀಸರ ಕಣ್ತಪ್ಪಿಸಿ ಸಾಸರಘಟ್ಟ ಗ್ರಾಮದ ಮಣ್ಣಿನ ರಸ್ತೆ ತಲುಪಿ ದ್ದರು. ಈ ವೇಳೆ ಸುರೇಂದ್ರಸಿಂಗ್‌ನನ್ನು ಹಿಡಿಯಲು ಬಾಗಲಗುಂಟೆ ಠಾಣೆಯ ಪ್ರೊಬೆಷನರಿ ಪಿಎಸ್‌ಐ ಪ್ರಭು ಹಾಗೂ ಪೊಲೀಸ್‌ ಪೇದೆ ಪ್ರಕಾಶ್‌ ಕಿಲಾರಿ ಅವರು ಮುಂದಾದಾಗ, ಆರೋಪಿ ಅವರ ಮೇಲೆಯೇ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಕೂಡಲೇ ಇನ್‌ಸ್ಪೆಕ್ಟರ್‌ ಶಿವಸ್ವಾಮಿ, ರಿವಾಲ್ವರ್‌ನಿಂದ ಒಂದು ಸುತ್ತು ಗುಂಡು ಹಾರಿಸಿ, ಸುರೇಂದ್ರನಿಗೆ ಶರಣಾಗುವಂತೆ ಸೂಚಿಸಿದರೂ ಒಪ್ಪದೆ ಹಲ್ಲೆ ಮುಂದುವರಿಸಿದ್ದ ಹೀಗಾಗಿ ಆತ್ಮರಕ್ಷಣೆ ಸಲುವಾಗಿ ಸುರೇಂದ್ರ ಸಿಂಗ್‌ನ ಎರಡೂ ಕಾಲಿಗೆ ಒಂದೊಂದು ಗುಂಡು ಹೊಡೆದಿದ್ದಾರೆ.

ಮತ್ತೂಂದೆಡೆ ಸ್ವಲ್ಪವೇ ದೂರದಲ್ಲಿ ಮತ್ತೂಂದು ತಂಡ ಕರಣ್‌ ಗುಪ್ತಾನನ್ನು ಬಂಧನಕ್ಕೆ ತೆರಳಿತ್ತು. ಈ ವೇಳೆ ನಂದಿನಿ ಲೇಔಟ್ ಠಾಣೆಯ ಪ್ರೊಬೆಷನರಿ ಪಿಎಸ್‌ಐ ರಾಜಾಸಾಬ್‌ ಹಾಗೂ ಪೇದೆ ಗಣೇಶ್‌ ವಿರುದ್ಧ ತಿರುಗಿಬಿದ್ದ ಆರೋಪಿ ಕರಣ್‌, ಚಾಕುವಿನಿಂದ ಇಬ್ಬರಿಗೂ ಇರಿಯಲು ಯತ್ನಿಸಿದ್ದಾನೆ. ಆಗ ಸ್ಥಳದಲ್ಲೇ ಇದ್ದ ಇನ್‌ಸ್ಪೆಕ್ಟರ್‌ ಲೋಹಿತ್‌, ಆತ್ಮರಕ್ಷಣೆಗಾಗಿ ಕರಣ್‌ ಗುಪ್ತಾನ ಎರಡೂ ಕಾಲಿಗೆ ಗುಂಡು ಹೊಡೆದಿದ್ದಾರೆ.

ಗುಂಡೇಟಿನಿಂದ ಗಾಯಗೊಂಡ ಇಬ್ಬರೂ ಆರೋಪಿಗಳನ್ನು ಬಂಧಿಸಿ ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕಾರ್ಯಾಚರಣೆ ವೇಳೆ ಆರೋಪಿಗಳ ಹಲ್ಲೆಯಿಂದ ಗಾಯಗೊಂಡ ಪೊಲೀಸ್‌ ಸಿಬ್ಬಂದಿಗೂ ಚಿಕಿತ್ಸೆ ಕೊಡಿಸಲಾಗಿದೆ ಎಂದು ಹಿರಿಯ ಅಧಿಕಾರಿ ವಿವರಿಸಿದರು.

5 ನಿಮಿಷ; 2 ಸರಗಳವು: ಆರೋಪಿಗಳಿಬ್ಬರೂ ನೆಲಮಂಗಲ, ಬಾಗಲಕುಂಟೆ, ಸೋಲದೇವನಹಳ್ಳಿ, ಮಾದನಾಯಕನಹಳ್ಳಿ ಸೇರಿ ಹಲವೆಡೆ ಸರಕಳ್ಳತನ ಕೃತ್ಯಗಳನ್ನು ಎಸಗಿ ಪರಾರಿಯಾಗಿದ್ದರು.

ಪಲ್ಸರ್‌ ಬೈಕ್‌ ಹತ್ತಿ ಮುಂಜಾನೆ ಅಥವಾ ಸಂಜೆ ವೇಳೆ ಕೃತ್ಯಕ್ಕೆ ಅಣಿಯಾಗುತ್ತಿದ್ದ ಆರೋಪಿಗಳು, ಒಮ್ಮೆ ರಸ್ತೆಗೆ ಇಳಿದರೆ ಕನಿಷ್ಠ ಮೂರು ಸರಗಳವು ಮಾಡುತ್ತಿದ್ದರು. ಐದು ಅಥವಾ ಹತ್ತು ನಿಮಿಷಗಳ ಅಂತರದಲ್ಲಿ ಇಬ್ಬರು ಮಹಿಳೆಯರ ಸರ ಕೀಳುತ್ತಿದ್ದರು. ಮೇ 12ರಂದು ಮಧ್ಯಾಹ್ನ ನೆಲಮಂಗಲ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಕೇವಲ ಐದು ನಿಮಿಷಗಳ ಅಂತರದಲ್ಲಿ ಎರಡು ಸರ ಕದ್ದಿದ್ದರು. ಮಾರನೇ ದಿನ ಬಾಗಲಕುಂಟೆಯಲ್ಲೂ ಎರಡು ಸರಗಳವು ಮಾಡಿದ್ದರು ಎಂದು ಹಿರಿಯ ಅಧಿಕಾರಿ ತಿಳಿಸಿದರು.

ಚಾಟ್ಸ್‌ ಅಂಗಡಿ ಮಾಲೀಕರು: ದೆಹಲಿಯಲ್ಲಿ ಚಾಟ್ಸ್‌ ಅಂಗಡಿ ನಡೆಸುವ ಆರೋಪಿಗಳು, ಸರಗಳ್ಳತನ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ದೆಹಲಿ ಪೊಲೀಸರಿಂದ ಬಂಧಿತರಾಗಿದ್ದ ಮಾಹಿತಿಯಿದೆ. ವಿಮಾನದ ಮೂಲಕ ನಗರಕ್ಕೆ ಆಗಮಿಸಿದ್ದ ಆರೋಪಿಗಳು, ಬ್ಯಾಡರಹಳ್ಳಿಯಲ್ಲಿ ವಾಸವಿದ್ದರು. ಸಂಬಂಧಿಕರೊಬ್ಬರ ಹೆಸರಿನಲ್ಲಿ ಪಲ್ಸರ್‌ ಬೈಕ್‌ ಖರೀದಿಸಿ ಸರಗಳವು ಮಾಡಿ ಐಶಾರಾಮಿ ಜೀವನ ನಡೆಸುತ್ತಿದ್ದರು ಎಂದು ಅಧಿಕಾರಿ ಹೇಳಿದರು.

ಮಹಿಳೆಯರ ಮುಖ, ತಲೆಗೆ ಪೆಟ್ಟು

ಆರೋಪಿಗಳು ಸರ ಕಿತ್ತುಕೊಳ್ಳುವ ಭರದಲ್ಲಿ ಮಹಿಳೆಯೊಬ್ಬರನ್ನು ಬಲವಾಗಿ ತಳ್ಳಿದ್ದು ಅವರ ಮುಖಕ್ಕೆ ಪೆಟ್ಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಮತ್ತಿಬ್ಬರು ಮಹಿಳೆಯರಿಗೆ ತಲೆಗೆ ಹಾಗೂ ಕತ್ತಿನ ಭಾಗದಲ್ಲಿ ಗಾಯಗಳಾಗಿವೆ ಎಂದು ಅಧಿಕಾರಿ ಮಾಹಿತಿ ನೀಡಿದರು.ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಲು ಬಂದಿದ್ದರಿಂದ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್‌ಗಳು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಆರೋಪಿಗಳು 20ಕ್ಕೂ ಹೆಚ್ಚು ಸರಗಳವು ಮಾಡಿದ್ದು, ಚಿಕಿತ್ಸೆ ಬಳಿಕ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುವುದು.
● ಎನ್‌. ಶಶಿಕುಮಾರ್‌, ಉತ್ತರ ವಿಭಾಗದ ಡಿಸಿಪಿ

ಟಾಪ್ ನ್ಯೂಸ್

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

dw

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.