ಪಾಲಿಕೆ ಪ್ರಹಾರಕ್ಕೆ ಬೆದರಿದ ಪ್ರತಿಷ್ಠಿತರು


Team Udayavani, Jan 6, 2019, 6:50 AM IST

palike.jpg

ಬೆಂಗಳೂರು: ಹಲವು ವರ್ಷಗಳಿಂದ ಕೋಟ್ಯಂತರ ರೂ. ತೆರಿಗೆ ಬಾಕಿ ಉಳಿಸಿಕೊಂಡ ಕಟ್ಟಡಗಳಲ್ಲಿನ ಚರಾಸ್ತಿಗಳ ಜಪ್ತಿ ಮಾಡುವ ಮೂಲಕ ತೆರಿಗೆ ಬಾಕಿದಾರರಿಗೆ ಬಿಬಿಎಂಪಿ ಬಿಸಿಮುಟ್ಟಿಸಿದೆ. ಇದಕ್ಕೆ ಬೆದರಿಂದ ಬಾಕಿದಾರರು ಬಾಕಿ ತೆರಿಗೆ ಪಾವತಿಸಲು ಮುಂದಾಗುತ್ತಿದ್ದಾರೆ.

ಹಲವು ವರ್ಷಗಳಿಂದ ಪಾಲಿಕೆಗೆ ತೆರಿಗೆ ಬಾಕಿ ಉಳಿಸಿಕೊಂಡಿರುವ ಕಟ್ಟಡ ಮಾಲೀಕರ ವಿರುದ್ಧ ಕ್ರಮಕೈಗೊಳ್ಳುವಂತೆ ಕಂದಾಯ ವಿಭಾಗದ ಜಂಟಿ ಆಯುಕ್ತರು ಆದೇಶ ಹೊರಡಿಸಿದ್ದರು. ಜತೆಗೆ ಡಿಮ್ಯಾಂಡ್‌ ನೋಟಿಸ್‌ ಜಾರಿಗೊಳಿಸಿದ ನಂತರವೂ ತೆರಿಗೆ ಪಾವತಿಸದ ಹಾಗೂ ಯಾವುದೇ ಉತ್ತರ ನೀಡದಂತಹ ಆಸ್ತಿಗಳ ಜಪ್ತಿಗೆ ಮುಂದಾಗುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. 

ಅದರಂತೆ ನಗರದ ಪ್ರಮುಖ ವಲಯಗಳಲ್ಲಿ ಕೋಟ್ಯಂತರ ರೂ. ತೆರಿಗೆ ಬಾಕಿ ಉಳಿಸಿಕೊಂಡಿರುವ ಪ್ರತಿಷ್ಠಿತ ಮಾಲ್‌ಗ‌ಳು, ಬಹುಮಹಡಿ ವಾಣಿಜ್ಯ ಕಟ್ಟಡಗಳ ಮೇಲೆ ದಾಳಿ ನಡೆಸಿರುವ ಕಂದಾಯ ವಿಭಾಗದ ಅಧಿಕಾರಿಗಳು, ಚರಾಸ್ತಿಗಳ ಜಪ್ತಿಗೆ ಮುಂದಾಗಿದ್ದಾರೆ. ಇದಕ್ಕೆ ಬೆದರಿದ ಆಸ್ತಿ ಮಾಲೀಕರು ಕೂಡಲೇ ತೆರಿಗೆ ಪಾವತಿಸಲು ಮುಂದಾಗಿರುವುದು ಕಂಡುಬಂದಿದೆ. ಹೀಗಾಗಿ ಇದೇ ಕ್ರಮವನ್ನು ಮುಂದುವರಿಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ.

ನಗರದ ಪಶ್ಚಿಮ ವಲಯ ವ್ಯಾಪ್ತಿಯ ಒರಾಯನ್‌ ಮಾಲ್‌ ಕಟ್ಟಡದಾರರು ಪಾಲಿಕೆಗೆ ಕೋಟ್ಯಂತರ ತೆರಿಗೆ ಬಾಕಿ ಉಳಿಸಿಕೊಂಡಿತ್ತು. ನೋಟಿಸ್‌ ನೀಡಿದ ನಂತರವೂ ಸಕಾರಾತ್ಮಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಇತ್ತೀಚೆಗೆ ಜಂಟಿ ಆಯುಕ್ತ ಚಿದಾನಂದ ನೇತೃತ್ವದ ಅಧಿಕಾರಿಗಳ ತಂಡ ಒರಾಯನ್‌ ಮಾಲ್‌ನ ಮೂರನೇ ಮಹಡಿ ಹಾಗೂ ನಾಲ್ಕನೇ ಮಹಡಿಯಲ್ಲಿರುವ ಚರಾಸ್ತಿಗಳಾದ ಸಿನಿಮಾ ಟಿಕೆಟ್‌ ಯಂತ್ರಗಳ ಜಪ್ತಿಗೆ ಮುಂದಾಗಿತ್ತು.

ಇದರಿಂದ ಕಂಗಾಲಾದ ಮಾಲ್‌ನವರು ಸಂಜೆ ವೇಳೆಗೆ 2.6 ಕೋಟಿ ರೂ. ತೆರಿಗೆ ಪಾವತಿಸುವುದಾಗಿ ಹಾಗೂ ಜ10ರೊಳಗೆ ಸಂಪೂರ್ಣ ಬಾಕಿ ತೆರಿಗೆ ಪಾವತಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಅದೇ ರೀತಿಯ ಇಟಾ ಮಾಲ್‌, ಗೋಪಾಲನ್‌ ಮಾಲ್‌, ಮಂತ್ರಿ ಮಾಲ್‌ದಾರರು ಸಹ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಒರಾಯನ್‌ ಮಾಲ್‌ನಲ್ಲಿ ಅಧಿಕಾರಿಗಳ ಕಾರ್ಯಾಚರಣೆಗೆ ಬೆದರಿದ ಇತರೆ ಮಾಲ್‌ದಾರರು ಚರಾಸ್ತಿ ಜಪ್ತಿ ಕ್ರಮಕ್ಕೂ ಮೊದಲೇ ತೆರಿಗೆ ಪಾವತಿಸಿದ್ದಾರೆ.

ಆದರೆ, ಯಶವಂತಪುರದ ವರ್ಲ್ಡ್ ಟ್ರೇಡ್‌ ಸೆಂಟರ್‌ 15 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಪ್ರಕರಣ ನ್ಯಾಯಾಲಯದಲ್ಲಿದೆ. ಇನ್ನು ಮಾರಪ್ಪನಪಾಳ್ಯ ವಾರ್ಡ್‌ ಇಂಟರ್‌ ಟೆಕ್‌ ಸಾಫ್ಟ್ವೇರ್‌ ಸಂಸ್ಥೆಯವರು  ತೆರಿಗೆ ಪಾವತಿಸದೆ ಸತಾಯಿಸುತ್ತಿದ್ದರು. ಆ ಹಿನ್ನೆಲೆಯಲ್ಲಿ ಜಪ್ತಿ ಮಾಡಿ ಬಾಡಿಗೆದಾರರಿಂದ ತೆರಿಗೆ ವಸೂಲಿ ಮಾಡಲಾಗಿದೆ ಎಂದು ಪಶ್ಚಿಮ ವಲಯದ ಜಂಟಿ ಆಯುಕ್ತ ಚಿದಾನಂದ ಮಾಹಿತಿ ನೀಡಿದರು.

ಇನ್ನು ಪೂರ್ವ ವಲಯದಲ್ಲಿ ಸೆಂಟ್ರಲ್‌ ಮಾಲ್‌, ಗರುಡಾ ಮಾಲ್‌, ಸ್ಟಾರ್‌ ಹೋಟೆಲ್‌ಗ‌ಳು ಸೇರಿ 34 ಬೃಹತ್‌ ವಾಣಿಜ್ಯ ಕಟ್ಟಡಗಳು 35 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿದ್ದವು. ಆ ಪೈಕಿ 10 ಕಟ್ಟಡಗಳಿಂದ ಈಗಾಗಲೇ ತೆರಿಗೆ ಸಂಗ್ರಹಿಸಲಾಗಿದ್ದು, ಇನ್ನು 13 ಕಟ್ಟಡದಾರರು ನ್ಯಾಯಾಲಯದ ಮೆಟ್ಟಿಲೇರಿದ ಪರಿಣಾಮ ತೆರಿಗೆ ಸಂಗ್ರಹ ವಿಳಂಬವಾಗಿದೆ ಎಂದು ಪೂರ್ವ ವಲಯ ಜಂಟಿ ಆಯುಕ್ತ ರವೀಂದ್ರ ಹೇಳಿದರು. 

ಗೋಡೆ ಏರಿದ ಬಾಕಿದಾರರ ಹೆಸರು: ಪಾಲಿಕೆಗೆ ತೆರಿಗೆ ಬಾಕಿ ಉಳಿಸಿಕೊಂಡಿರುವವರ ಹೆಸರಿನ ವಿವರವನ್ನು ಸಾರ್ವಜನಿಕರಿಗೆ ತಿಳಿಯುವಂತೆ ಪಾಲಿಕೆ ಕಚೇರಿಗಳ ಗೋಡೆಗಳ ಮೇಲೆ ಅಂಟಿಸಲಾಗಿದೆ. ಇದರಿಂದ ಮುಜುಗರಕ್ಕೆ ಒಳಗಾದ ಹಲವಾರು ಆಸ್ತಿ ಮಾಲೀಕರು ತೆರಿಗೆ ಪಾವತಿಸಲು ಮುಂದಾಗುತ್ತಿದ್ದಾರೆ. ಇದೇ ರೀತಿ ಎಲ್ಲ ವಲಯಗಳಲ್ಲಿಯೂ ಪ್ರಮುಖ 100 ಜನ ಬಾಕಿದಾರರ ಹೆಸರಿನ ವಿವರವನ್ನು ಗೋಡೆಗಳ ಮೇಲೆ ಅಂಟಿಸುವಂತೆ ಉಪಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. 

ವಂಚಿಸಿದರೆ ಅಧಿಕಾರಿಗಳ ಅಮಾನತು: ಹಲವಾರು ವರ್ಷಗಳಿಂದ ಪಾಲಿಕೆಗೆ ತೆರಿಗೆ ಪಾವತಿಸದೆ ವಂಚಿಸಿದ ಆಸ್ತಿದಾರರಿಗೆ ನೆರವಾದ ಅಧಿಕಾರಿಗಳನ್ನು ಅಮಾನತುಗೊಳಿಸಲು ಪಾಲಿಕೆ ಮುಂದಾಗಿದೆ. ಆ ಹಿನ್ನೆಲೆಯಲ್ಲಿ ಈಗಾಗಲೇ ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ 15 ಕಂದಾಯ ಅಧಿಕಾರಿಗಳು ಹಾಗೂ ಸಹಾಯಕ ಕಂದಾಯ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಹಣಕಾಸು ವಿಭಾಗದ ವಿಶೇಷ ಆಯುಕ್ತ ಲೋಕೇಶ್‌ ತಿಳಿಸಿದ್ದಾರೆ. 

ಪಾಲಿಕೆಗೆ ಆರೇಳು ವರ್ಷಗಳಿಂದ ತೆರಿಗೆ ಬಾಕಿ ಉಳಿಸಿಕೊಂಡಿದ್ದ ಕಟ್ಟಡದಾರರಿಂದ ಈವರೆಗೆ 455 ಕೋಟಿ ರೂ. ತೆರಿಗೆ ಸಂಗ್ರಹಿಸುವ ಮೂಲಕ ಶೇ.27.48ರಷ್ಟು ಗುರಿ ಸಾಧಿಸಿದ್ದು, ಉಳಿದ ಮೂರು ತಿಂಗಳಲ್ಲಿ ಇನ್ನು ಹೆಚ್ಚಿನ ಬಾಕಿ ತೆರಿಗೆ ಸಂಗ್ರಹಿಸುವ ಮೂಲಕ ತೆರಿಗೆ ಪ್ರಮಾಣ ಹೆಚ್ಚಿಸಲಾಗುವುದು. ಜತೆಗೆ ಆರ್ಥಿಕ ವರ್ಷದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ತೆರಿಗೆ ಸಂಗ್ರಹಕ್ಕೆ ಕ್ರಮಕೈಗೊಳ್ಳಲಾಗುವುದು.
-ಲೋಕೇಶ್‌, ವಿಶೇಷ ಆಯುಕ್ತರು (ಹಣಕಾಸು)

ಟಾಪ್ ನ್ಯೂಸ್

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.