ಪ್ರಧಾನಿ ಕಾರ್ಯಕ್ರಮಕ್ಕೆ ಪೊಲೀಸ್‌ ಸರ್ಪಗಾವಲು

Team Udayavani, Feb 4, 2018, 12:15 PM IST

Electric-1.jpg

ಬೆಂಗಳೂರು: ಭಾನುವಾರ ಪ್ರಧಾನಿ ನರೇಂದ್ರ ಮೋದಿ ಪರಿವರ್ತನಾ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಗಾಗಿ 4,500 ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಟಿ.ಸುನಿಲ್‌ ಕುಮಾರ್‌ ಹೇಳಿದ್ದಾರೆ.

14 ಮಂದಿ ಡಿಸಿಪಿ, 35 ಮಂದಿ ಎಸಿಪಿ ನೇತೃತ್ವದಲ್ಲಿ ಕಾನೂನು ಸುವ್ಯವಸ್ಥೆಗೆ 3 ಸಾವಿರ ಹಾಗೂ ಸಂಚಾರ ನಿಯಂತ್ರಣಕ್ಕೆ 1,500 ಮಂದಿ, 50 ಕೆಎಸ್‌ಆರ್‌ಪಿ ತುಕಡಿ, 30 ಸಿಎಆರ್‌ ತುಕಡಿ ನಿಯೋಜಿಸಲಾಗಿದೆ. ಹಾಗೇ ಅರಮನೆ ಸುತ್ತಮುತ್ತಲ ಪ್ರದೇಶಗಳಾದ ಬಳ್ಳಾರಿ ರಸ್ತೆ, ಜಯಮಹಲ ರಸ್ತೆ, ಮೇಖೀ ವೃತ್ತದಲ್ಲಿ ಅಧಿಕ ಮಂದಿ ಪೊಲೀಸರು ಭದ್ರತೆಗೆ ನಿಯೋಜನೆಗೊಂಡಿದ್ದು, ನಗರ ಪ್ರವೇಶಿಸುವ ಪ್ರತಿ ವಾಹನವನ್ನು ತಪಾಸಣೆ ನಡೆಸಲಾಗುವುದು ಎಂದು ತಿಳಿಸಿದರು.

ಸಂಚಾರ ಮಾರ್ಗ ಬದಲು: ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಮೈಸೂರು ಮತ್ತು ತುಮಕೂರು ರಸ್ತೆ ಕಡೆಯಿಂದ ಬರುವ ವಾಹನಗಳು ಮೈಸೂರು ರಸ್ತೆಯ ನಾಯಂಡಹಳ್ಳಿ-ಡಾ ರಾಜ್‌ಕುಮಾರ್‌ ಸಮಾಧಿ-ಗೊರಗುಂಟೆ ಪಾಳ್ಯ-ಹೆಬ್ಟಾಳ ಮೇಲ್ಸೆತ್ತುವೆ ಮಾರ್ಗದಲ್ಲಿ,

ಕನಕಪುರ ಮಾರ್ಗವಾಗಿ ಬರುವವರು ಬನಶಂಕರಿ ದೇವಾಲಯ-ಜಯನಗರ ಸೌತ್‌ ಎಂಡ್‌ ಸರ್ಕಲ್‌, ಟೌನ್‌ಹಾಲ್‌, ಮೈಸೂರು ಬ್ಯಾಂಕ್‌ ಮಾರ್ಗವಾಗಿ ಕಂಟೋನ್ಮೆಂಟ್‌ ರೈಲ್ವೆ ನಿಲ್ದಾಣ ಬಳಿಯ ಸುರಂಗ ಮಾರ್ಗವಾಗಿ ಅರಮನೆ ಮೈದಾನ ಪ್ರವೇಶಿಸಬೇಕು. ಹೊಸೂರು ರಸ್ತೆ ಮೂಲಕ ಆಗಮಿಸುವ ಕಾರ್ಯಕರ್ತರು ಡೈರಿ ಸರ್ಕಲ್‌, ಲಾಲ್‌ಬಾಗ್‌ ಮುಖ್ಯದ್ವಾರ ಮೂಲಕ ಆಗಮಿಸಬೇಕು.

ಹಳೇ ಮದ್ರಾಸ್‌ ರಸ್ತೆ ಮಾರ್ಗವಾಗಿ ಬರುವವರು ಕೆ.ಆರ್‌.ಪುರಂ-ಹೆಣ್ಣೂರು ಜಂಕ್ಷನ್‌, ಹೆಬ್ಟಾಳ ಮೇಲ್ಸೆತ್ತುವೆ, ಮೇಖೀ ವೃತ್ತ ಮೂಲಕ, ಬಳ್ಳಾರಿ ರಸ್ತೆಯಿಂದ ಆಗಮಿಸುವವರು ದೇವನಹಳ್ಳಿ, ಚಿಕ್ಕಜಾಲ, ಕೊಡಗೇಹಳ್ಳಿ ಗೇಟ್‌, ಹೆಬ್ಟಾಳ, ಮೇಲ್ಸೆತ್ತುವೆ ಮಾರ್ಗ ಬಳಸಬೇಕು. ದೊಡ್ಡಬಳ್ಳಾಪುರ ಕಡೆಯಿಂದ ಬರುವವರು ದೊಡ್ಡಬಳ್ಳಾಪುರ ರಸ್ತೆ, ಮೇಜರ್‌ ಸಂದೀಪ್‌ ಉನ್ನಿಕೃಷ್ಣನ್‌ ಜಂಕ್ಷನ್‌, ಬಳ್ಳಾರಿ ರಸ್ತೆ, ಹೆಬ್ಟಾಳ ಮೇಲ್ಸೆತ್ತುವೆ ಮೂಲಕ ಆಗಮಿಸಬೇಕು ಎಂದು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಪಾರ್ಕಿಂಗ್‌ ನಿಷೇಧ: ಬಳ್ಳಾರಿ ರಸ್ತೆ, ಮೇಖೀ, ಚಾಲುಕ್ಯ ವೃತ್ತ, ರಮಣಮಹರ್ಶಿ, ಪ್ಯಾಲೇಸ್‌ ರಸ್ತೆ, ಕಬ್ಬನ್‌ ರಸ್ತೆ, ಸರ್‌ ಸಿ.ವಿ.ರಾಮನ್‌, ಹೆಬ್ಟಾಳ ಮೇಲ್ಸೆತ್ತುವೆ ಮೇಲೆ ಫೆ.4ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ವಾಹನಗಳ ಪಾರ್ಕಿಂಗ್‌ ನಿಷೇಧಿಸಲಾಗಿದೆ. ಅದೇ ರೀತಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕಾರ್ಯಕರ್ತರ ವಾಹನ ನಿಲ್ಲಿಸಲು ಸರ್ಕಸ್‌ ಮೈದಾನ, ಮಾವಿನಕಾಯಿ ಮಂಡಿ ಬಳಿ ಬಸ್‌ಗಳು ಹಾಗೂ ಕಾರುಗಳ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗಿದೆ. ದ್ವಿಚಕ್ರ ವಾಹನಗಳು ಸರ್ಕಸ್‌ ಮೈದಾನ ಪ್ರವೇಶಿಸಿ ಗೋಕಾರ್ಟಿಂಗ್‌ ಮೈದಾನದಲ್ಲಿ ನಿಲ್ಲಿಸಬೇಕು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.