ಕಾಲುವೆ ಒತ್ತುವರಿಯದ್ದೇ ಸಮಸ್ಯೆ
Team Udayavani, Sep 11, 2017, 11:53 AM IST
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ಉಂಟಾಗಿರುವ ಸಮಸ್ಯೆ ನಿವಾರಣೆಗೆ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು, “ಮೂರು ವರ್ಷದಿಂದ ಭಾರೀ ಮಳೆ ಬೀಳುತ್ತಿರುವುದರಿಂದ ಬೆಂಗಳೂರಿನ ಜನತೆಗೆ ತೊಂದರೆಯಾಗುತ್ತಿದೆ.
ರಾಜಕಾಲುವೆಗಳ ಒತ್ತುವರಿ, ರಾಜಕಾಲುವೆಗಳ ಮೇಲೆ ಕಟ್ಟಡಗಳನ್ನು ಕಟ್ಟಿರುವುದರಿಂದ ನೀರು ಸರಾಗವಾಗಿ ಹರಿಯಲಾಗದೆ ಸಮಸ್ಯೆ ಉಂಟಾಗುತ್ತಿದೆ. ಇದರ ನಿವಾರಣೆಗೆ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಬಿಬಿಎಂಪಿ ಆಡಳಿತಕ್ಕೆ ಸೂಚಿಸಿದ್ದೇನೆ. ಸಚಿವ ಜಾರ್ಜ್ ಬೆಳಗಿನ ಜಾವ 3ಗಂಟೆವರೆಗೂ ಕೆಲಸ ಮಾಡುತ್ತಾ, ಪರಿಸ್ಥಿತಿ ನಿಭಾಯಿಸುತ್ತಿದ್ದಾರೆ. ಮಳೆಯಿಂದ ಎಲ್ಲೆಲ್ಲಿ ಮರಗಳು ಬಿದ್ದಿವೆಯೋ ಅವನ್ನು ತೆರವು ಮಾಡಲಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು ನಗರದಲ್ಲಿ ರಾಜಕಾಲುವೆ ಸೇರಿದಂತೆ 800ಕಿ.ಮೀ ಉದ್ದದ ಮಳೆ ನೀರು ಚರಂಡಿಇದೆ. ಮಳೆ ನೀರು ಚರಂಡಿಯಲ್ಲಿ ತುಂಬಿರುವ ಹೂಳು ತೆಗೆಯಲು ಅನುದಾನ ಕೊಡಲಾಗಿದೆ. ಒತ್ತುವರಿಯಾಗಿರುವ ರಾಜಕಾಲುವೆಗಳನ್ನು ತೆರವುಗೊಳಿಸುತ್ತಿದ್ದೇವೆ. ಮೂರು ದಿನಗಳ ಹಿಂದೆ ಮಳೆ ಸುರಿದ ಸಂದರ್ಭದಲ್ಲಿ ಮರ ಬಿದ್ದು ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಕೊಡಲಾಗಿದೆ.
ತಿರುಗೇಟು: ಬೆಂಗಳೂರಿನಲ್ಲಿ ವ್ಯಾಪಕವಾಗಿ ಮಳೆ ಬಿದ್ದು ಉಂಟಾಗಿರುವ ಅನಾಹುತ ತಡೆಯಲು ರಾಜ್ಯಸರ್ಕಾರ ವಿಫಲವಾಗಿದೆ ಎನ್ನುವಂತೆ ಕೇಂದ್ರ ಸಚಿವ ಅನಂತಕುಮಾರ್ ಆರೋಪ ಮಾಡುತ್ತಾರೆ, ಐದು ವರ್ಷ ಅವರೇ (ಬಿಜೆಪಿ) ಅಧಿಕಾರದಲ್ಲಿ ಇದ್ರಲ್ಲಾ ಏನು ಮಾಡಿದ್ರು?, ಅವರು ರಾಜಕಾಲುವೆ ಒತ್ತುವರಿ ತೆರವು ಮಾಡಿದ್ದರೆ ಇಂಥಾ ಸಮಸ್ಯೆ ಉಂಟಾಗುತ್ತಿರಲಿಲ್ಲ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.