ಪರಿಹಾರಕ್ಕಾಗಿ ಕೋರ್ಟ್‌ಗೆ ವಕೀಲನ ಅರ್ಜಿ
Team Udayavani, Feb 8, 2017, 11:31 AM IST
ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ 2012ರ ಮಾರ್ಚ್ 2ರಂದು ನಡೆದ ಪೊಲೀಸರು, ಮಾಧ್ಯಮ ಪ್ರತಿನಿಧಿಗಳು ಮತ್ತು ವಕೀಲರ ನಡುವಿನ ಸಂಘರ್ಷದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನೋಟರಿ ವಕೀಲರೊಬ್ಬರು ಇದೀಗ ಒಂದು ಕೋಟಿ ರೂ. ಪರಿಹಾರ ಕೊಡಿಸುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಜಯನಗರದ 4ನೇ ಬ್ಲಾಕ್ ನಿವಾಸಿಯಾದ ನೋಟರಿ ವಕೀಲ ಅರುಣ್ ಆರ್. ನಾಯಕ್ ಅವರು ಈ ಸಂಬಂಧ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿದ್ದಾರೆ. ಘಟನೆ ನಡೆದು ಐದು ವರ್ಷ ಸಮೀಪಿಸುತ್ತಿರುವ ಸಂರ್ಭದಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ಅರುಣ್ ನಾಯಕ್, 2012ರ ಮಾರ್ಚ್ 2ರಂದು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಸಂಘರ್ಷದ ವೇಳೆ ತಮ್ಮ ನೋಟರಿ ಕಚೇರಿಯನ್ನು ಧ್ವಂಸ ಮಾಡಲಾಗಿತ್ತು.
ಹಾಗೆಯೇ, ತಮ್ಮ ಮೇಲೆ ಗಂಭೀರವಾಗಿ ಹಲ್ಲೆ ಮಾಡಲಾಗಿತ್ತು. ಘಟನೆಯಿಂದ ತೀವ್ರ ಸ್ವರೂಪದಲ್ಲಿ ಗಾಯಗೊಂಡ ನಾನು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತಾಯಿತು. ಇದರಿಂದ ನನ್ನ ಬದುಕು ದುಸ್ತರವಾಗಿದೆ ಎಂದು ಅರ್ಜಿಯಲ್ಲಿ ದೂರಿದ್ದಾರೆ. ಅಲ್ಲದೆ, ಸರ್ಕಾರ ನನಗೆ ಈವರೆಗೂ ಪರಿಹಾರ ನೀಡಿಲ್ಲ. ಆಸ್ಪತ್ರೆಯ ಚಿಕಿತ್ಸೆ ವೆಚ್ಚ ಭರಿಸಲು ಮತ್ತು ಜೀವನ ನಡೆಸಲು ನನಗೆ ಕಷ್ಟವಾಗಿದೆ.
ಹೀಗಾಗಿ, ಒಂದು ಕೋಟಿ ರೂ. ಶಾಶ್ವತ ಪರಿಹಾರ ಕೊಡಲು ಸರ್ಕಾರಕ್ಕೆ ಆದೇಶಿಸಬೇಕು. ಜತೆಗೆ, ಮಧ್ಯಂತರ ಪರಿಹಾರವಾಗಿ ಹತ್ತು ಲಕ್ಷ ರೂ. ನೀಡಲು ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ. ಮಂಗಳವಾರ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಏಕಸದಸ್ಯ ಪೀಠವು ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ಸಂಘರ್ಷ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ವಿಶೇಷ ತನಿಖಾ ತಂಡಕ್ಕೆ ನೋಟಿಸ್ ಜಾರಿ ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.