ಅಬ್ಬರಿಸಿ ಬೆಂಗಳೂರಿಗೆ ನೆರವಾದ ಮಳೆ

Team Udayavani, Jun 3, 2017, 12:49 PM IST

krs-pack.jpg

ಬೆಂಗಳೂರು: ಬೆಂಗಳೂರು ಸೇರಿದಂತೆ ಕಾವೇರಿ ನದಿ ಪಾತ್ರದ ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮುಂಗಾರು ಪೂರ್ವ ಮಳೆಯು ರಾಜಧಾನಿಯ ಕುಡಿಯುವ ನೀರಿನ ಸಮಸ್ಯೆಯನ್ನು ದೂರುವಾಗಿಸಿದೆ. ಕೆಆರ್‌ಎಸ್‌ ಮೇಲಿನ ನಗರದ ಅವಲಂಬನೆಯನ್ನು ತಪ್ಪಿಸಿದೆ. 

 ಈ ಹಿಂದೆ, ಬೇಸಿಗೆಯಲ್ಲಿ ನಗರಕ್ಕೆ ಕುಡಿಯುವ ನೀರು ಪೂರೈಸಲು ಕೆಆರ್‌ಎಸ್‌ ಜಲಾಶಯದ ನೀರು ಪಡೆಯಲಾಗುತ್ತಿತ್ತು. ಆದರೆ, ಇದೀಗ ಮುಂಗಾರು ಪೂರ್ವ ಮಳೆಯಿಂದಾಗಿ ನದಿ ಪಾತ್ರದಲ್ಲಿ ನೀರಿನ ಹರಿವು ಹೆಚ್ಚಳವಾಗಿರುವುದರಿಂದ ನದಿ ನೀರನ್ನೇ ಪಂಪಿಂಗ್‌ ಮೂಲಕ ನಗರಕ್ಕೆ ಪೂರೈಕೆ ಮಾಡಲಾಗುತ್ತಿದೆ. ಹೀಗಾಗಿ, ಒಂದೊಮ್ಮೆ ಮುಂಗಾರು ಮಳೆ ರಾಜ್ಯ ಪ್ರವೇಶಿಸಿರುವುದು ತಡವಾದರೂ ನಗರಕ್ಕೆ ಕುಡಿಯುವ ನೀರಿನ ಪೂರೈಕೆಯಲ್ಲಿ ತತಕ್ಷಣಕ್ಕೆ ಯಾವುದೇ ತೊಂದರೆಯಾಗದು ಎಂದು ಹೇಳಲಾಗುತ್ತಿದೆ.

 ಕಾವೇರಿ ನದಿಯ ಸುತ್ತಮುತ್ತಲಿನ ಭಾಗಗಳಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ. ಅದರ ಹಿನ್ನೆಲೆಯಲ್ಲಿ ಬೆಂಗಳೂರು ಜಲಮಂಡಳಿಯು ಕೆಆರ್‌ಎಸ್‌ನಿಂದ ಪಡೆಯುವ ನೀರಿನ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡಿದೆ. ನದಿಯಲ್ಲಿ ಹರಿಯುತ್ತಿರುವ ನೀರನ್ನೇ ಪಂಪಿಂಗ್‌ ಮೂಲಕ ಶಿಂಷಾ ಕೇಂದ್ರಕ್ಕೆ ಹರಿಸಲಾಗುತ್ತಿದೆ. ಅಲ್ಲಿಂದ ನಗರಕ್ಕೆ ನೀರು ಸರಬರಾಜು ಮಾಡಲಾಗುತ್ತಿದೆ.  

ಕೆಆರ್‌ಎಸ್‌ ಜಲಾಶಯದ ನಂತರದ ಕಾವೇರಿ ನದಿ ಭಾಗಗಳಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ನದಿ ನೀರನ್ನು ಜಲಮಂಡಳಿಯು ಶಿವ ಅಣೆಕಟ್ಟೆ ಮಾರ್ಗದ ಬಳಿಯ ಶಿಂಷಾ ಕೇಂದ್ರದಿಂದ ಪಂಪ್‌ ಮಾಡುತ್ತಿದೆ. ಆ ಮೂಲಕ ಕೆಆರ್‌ಎಸ್‌ನಿಂದ ಮೇಲಿನ ಅವಲಂಬನೆಯನ್ನು ಸದ್ಯ ಶೇ.70ರಷ್ಟು ಕಡಿತಗೊಳಿಸಲಾಗಿದೆ ಎಂದು ಜಲಮಂಡಳಿ ಮೂಲಗಳು ತಿಳಿಸಿವೆ.

ಸುಮಾರು 100 ಕಿ.ಮೀ. ದೂರದ ಕಾವೇರಿ ನದಿಯಿಂದ ಗುರುತ್ವಾಕರ್ಷಣೆ ಬಲದ ಮೂಲಕ ಬೆಂಗಳೂರಿಗೆ ನೀರು ಹರಿಸಲಾಗುತ್ತಿದೆ. ಹಿಂದೆ ಕೆಆರ್‌ಎಸ್‌ನಿಂದ ನಿತ್ಯ 1400 ಎಂಎಲ್‌ಡಿ ನೀರನ್ನು ನಗರಕ್ಕೆ ಪಂಪ್‌ ಮಾಡಲಾಗುತ್ತಿತ್ತು. ಆದರೆ, ಮುಂಗಾರು ಪೂರ್ವ ಮಳೆಯಿಂದಾಗಿ ಕಳೆದೊಂದು ವಾರದಿಂದ ಕೆಆರ್‌ಎಸ್‌ ಜಲಾಶಯದಿಂದ ಕೇವಲ 300 ಎಂಎಲ್‌ಡಿಯಷ್ಟು ನೀರು ಮಾತ್ರ ಪಂಪ್‌ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಕೆಆರ್‌ಎಸ್‌ನಲ್ಲಿ 2 ಟಿಎಂಸಿ ನೀರು!
ಮುಂಗಾರು ಪೂರ್ವ ಮಳೆಯಿಂದಲೇ ಕೆಆರ್‌ಎಸ್‌ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಸುಮಾರು 2 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ. ಮುಂಗಾರು ವಿಳಂಬವಾದರೆ ನಗರಕ್ಕೆ ಪೂರೈಕೆ ಮಾಡಲು ನೀರನ್ನು ಮೀಸಲಿರುಸುವಂತೆ ಸರ್ಕಾರವನ್ನು ಕೋರಲಾಗಿದೆ. ಆದರೂ, ಮುಂದಿನ ಹದಿನೈದು ದಿನಗಳಿಗೆ ಬೇಕಾಗುವಷ್ಟು ನೀರು ನದಿಯಿಂದಲೇ ಲಭ್ಯವಾಗಲಿದೆ. ಆ ವೇಳೆಗೆ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದ್ದು, ಬೆಂಗಳೂರಿನ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವುದಿಲ್ಲ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ. 

ಕಾವೇರಿ ನೀರು ಪೂರೈಕೆ ಹೇಗೆ?
ಕಾವೇರಿ ನದಿಯಿಂದ ಶಿವ ಅಣೆಕಟ್ಟೆ ಮಾರ್ಗವಾಗಿ ನೆಟ್‌ಕಲ್‌ ಜಲಾಶಯಕ್ಕೆ ನೀರು ಬಂದು ತಲುಪುತ್ತದೆ. ಈ ಕಚ್ಚಾನೀರು ಸಂಸ್ಕರಣೆಗಾಗಿ ಕನಕಪುರ-ಮಳವಳ್ಳಿ ರಸ್ತೆಯಲ್ಲಿರುವ ತೊರೆಕಾಡನಹಳ್ಳಿಯಲ್ಲಿ ಶುದ್ದೀಕರಣ ಘಟಕವನ್ನು ನಿರ್ಮಿಸಲಾಗಿದೆ. ಶುದ್ಧೀಕರಿಸಿದ ನೀರುನ್ನು ಮೂರು ಹಂತಗಳಲ್ಲಿ ದಿನ 24 ಗಂಟೆಯೂ ಪಂಪ್‌ ಮಾಡುವ ಮೂಲಕ ನಗರಕ್ಕೆ ಹರಿಸಲಾಗುತ್ತದೆ. ಟಿ.ಕೆ.ಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿ ಜಲಮಂಡಳಿಯ ಪಂಪಿಂಗ್‌ ಕೇಂದ್ರಗಳಿದ್ದು, ತಾತಗುಣಿ ಪಂಪಿಂಗ್‌ ಕೇಂದ್ರದಿಂದ ನಗರದೆಲ್ಲೆಡೆ ನಿರ್ಮಿಸಿರುವ 57 ನೆಲಮಟ್ಟದ ಜಲಾಗಾರಗಳು, 36 ಓವರ್‌ ಹೆಡ್‌ ಟ್ಯಾಂಕ್‌ಗಳಿಗೆ ನೀರುನ್ನು ಸರಬರಾಜು ಮಾಡಲಾಗುತ್ತಿದೆ. ಇಲ್ಲಿಂದ 9.25 ಲಕ್ಷ ಕಟ್ಟಡಗಳಿಗೆ ನೀರು ಹರಿಯುತ್ತದೆ. 

ಮುಂಗಾರು ಪೂರ್ವ ಮಳೆಯಿಂದಾಗಿ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಕೆಆರ್‌ಎಸ್‌ನಿಂದ ನೀರು ಪಡೆಯುತ್ತಿದ್ದ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ. ನದಿಯಲ್ಲಿ ಹರಿಯುತ್ತಿರುವ ನೀರನ್ನು ಶಿವ ಅಣೆಕಟ್ಟೆ ಮಾರ್ಗದ ಬಳಿಯ ಶಿಂಷಾ ಕೇಂದ್ರದ ಬಳಿಯಿಂದ ನಗರಕ್ಕೆ ಪಂಪ್‌ ಮಾಡಲಾಗುತ್ತಿದೆ. ಸದ್ಯ ಕೆಆರ್‌ಎಸ್‌ನಿಂದ ಕೇವಲ 300 ಎಂಎಲ್‌ಡಿ ನೀರನ್ನು ಮಾತ್ರ ಪಡೆಯಲಾಗುತ್ತಿದೆ. ಉಳಿದಂತೆ ಕೆಆರ್‌ಎಸ್‌ನಲ್ಲಿ 2 ಟಿಎಂಸಿ ನೀರು ಸಂಗ್ರಹವಾಗಿದ್ದು, ಮುಂಗಾರು ವಿಳಂಬವಾದರೆ ಅಲ್ಲಿಂದ ನೀರು ಪಡೆಯಲಾಗುವುದು.
– ಕೆಂಪರಾಮಯ್ಯ, ಪ್ರಧಾನ ಅಭಿಯಂತರರು, ಜಲಮಂಡಳಿ

* ವೆಂ.ಸುನೀಲ್‌ಕುಮಾರ್‌

ಟಾಪ್ ನ್ಯೂಸ್

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು

Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

Arrested: ಟ್ಯಾಟೂ ಆರ್ಟಿಸ್ಟ್‌ ಬಂಧನ: 2.50 ಕೋಟಿ ರೂ. ಡ್ರಗ್ಸ್‌ ಜಪ್ತಿ

Arrested: ಟ್ಯಾಟೂ ಆರ್ಟಿಸ್ಟ್‌ ಬಂಧನ: 2.50 ಕೋಟಿ ರೂ. ಡ್ರಗ್ಸ್‌ ಜಪ್ತಿ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Udupi: 9 ಲೀಟರ್ ಗೋವಾ ಮದ್ಯ ವಶಕ್ಕೆ

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

21

Karkala: ಶಾಲೆಯಿಂದ ಲ್ಯಾಪ್‌ಟಾಪ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.