ಬಿಸಿಲಿನ ಬೇಗೆಗೆ ಎನ್‌ಆರ್‌ಇಜಿ ಕೂಲಿ ಸಮಯ ಕಡಿತ: ಎಚ್.ಕೆ. ಪಾಟೀಲ್
Team Udayavani, Mar 9, 2017, 3:45 AM IST
ಬೆಂಗಳೂರು:ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಬೇಸಿಗೆ ಸಮಯದಲ್ಲಿ ಕಾರ್ಮಿಕರಿಗೆ ಕೆಲಸದ ಅವಧಿಯಲ್ಲಿ ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಮಾರ್ಚ್‌ನಿಂದ ಜೂನ್ ಅಂತ್ಯದವರೆಗೆ ಪ್ರತಿ ದಿನದ ಕೆಲಸದ ಅವಧಿಯಲ್ಲಿ ಕನಿಷ್ಠ ಶೇ. 20 ರಿಂದ 30 ರಷ್ಟು ಸಮಯದ ರಿಯಾಯಿತಿ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್. ಕೆ. ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್‌ಆರ್‌ಇಜಿ ಯೋಜನೆಯಲ್ಲಿ ಒಟ್ಟು 7 ಕೋಟಿ 64 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡಲಾಗಿದ್ದು, 2761 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. 1804 ಕೋಟಿ ರೂಪಾಯಿ ಕೂಲಿಗಾಗಿ 790.67 ಕೋಟಿ ರೂಪಾಯಿಯನ್ನು ಸಾಮಗ್ರಿಗಾಗಿ ವೆಚ್ಚ ಮಾಡಲಾಗಿದೆ. ಏಪ್ರಿಲ್‌ನಿಂದ ರಾಜ್ಯದಲ್ಲಿ ಕೂಲಿ ದರ 236 ರೂಪಾಯಿಗೆ ಹೆಚ್ಚಿಸಲು ತೀರ್ಮಾನ ಮಾಡಲಾಗಿದ್ದು, ಏಪ್ರಿಲ್ 1 ರಿಂದ ಹೊಸ ಕೂಲಿ ದೊರೆಯಲಿದೆ ಎಂದು ಅವರು ಹೇಳಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಕುಡಿಯುವ ನೀರಿಗೆ 2937 ಕೋಟಿ ರೂಪಾಯಿ ಮೀಸಲಿಟ್ಟುದ್ದು, ಅದರಲ್ಲಿ ಈಗಾಗಲೇ 1939 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಅಲ್ಲದೇ ಜಿಲ್ಲಾಧಿಕಾರಿಗಳ ಬಳಿ ಇನ್ನೂ 1006.56 ಕೋಟಿ ರೂಪಾಯಿ ಲಭ್ಯವಿದೆ. ಕುಡಿಯುವ ನೀರು ಸರಬರಾಜು ಮಾಡಲು ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ ರಚನೆ ಮಾಡಲಾಗಿದೆ. 884 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಈ ವರ್ಷ ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೇ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ ಎಂದು ಹೇಳಿದರು.
ನಿರ್ಬಂಧ ಸಡಿಲಿಕೆ
ಸರ್ಕಾರಿ ಹಾಗೂ ಸಾರ್ವಜನಿಕರಿಗೆ ಅನುಕೂಲಕ್ಕೆ ಬಳಕೆಯಾಗುವ ಕೊಳವೆ ಬಾವಿಗಳನ್ನು ಮಾತ್ರ ಕೊರೆಯಲು ಸರ್ಕಾರ ಆದೇಶ ಮಾಡಿತ್ತು. ಅಂತರ್ ಜಲ ಮಟ್ಟ ಕುಸಿತ ಕಂಡಿರುವುದರಿಂದ ಖಾಸಗಿಯವರು ಬೋರ್‌ವೆಲ್ ಕೊರೆಯದಂತೆ ಸರ್ಕಾರ ಕಂದಾಯ ಇಲಾಖೆಯ ಮೂಲಕ ಆದೇಶ ಹೊರಡಿಸಿತ್ತು. ಆದರೆ, ರಾಜ್ಯ ಸರ್ಕಾರ ಈಗ ಆ ಆದೇಶದಲ್ಲಿ ನಿರ್ಬಂಧ ಸಡಿಲಿಕೆ ಮಾಡಿದೆ. ಅಗತ್ಯ ಇರುವ ಪ್ರದೇಶಗಳಲ್ಲಿ ಖಾಸಗಿಯವರೂ ಬೋರ್‌ವೆಲ್ ಕೊರೆಸಲು ಅನುಮತಿ ನೀಡಲಾಗುತ್ತದೆ ಎಂದು ಎಚ್.ಕೆ. ಪಾಟೀಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.