ಅಂತಾರಾಷ್ಟ್ರೀಯ ಅಗ್ರಹಾರಗಳ ಆಧಿಪತ್ಯ

Team Udayavani, Mar 12, 2018, 12:23 PM IST

antharashtriya.jpg

ಬೆಂಗಳೂರು: ನಮ್ಮಲ್ಲಿಯೇ ಸೌಹಾರ್ದತೆ ಇಲ್ಲದಿರುವಾಗ ಜಗತ್ತಿಗೆ ಸೌಹಾರ್ದತೆ ಸಾರಲು ಸಾಧ್ಯವಿಲ್ಲ. ಹೀಗಾಗಿ ಜನ ಸಮುದಾಯದ ವಿವೇಕ ತಿಳಿಯಲು ಬಂಡಾಯ ಸಾಹಿತ್ಯ ಕೆಲಸ ಮಾಡಬೇಕಿದೆ ಎಂದು ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯಟ್ಟರು. 

ಬಂಡಾಯ ಸಾಹಿತ್ಯ ಸಂಘಟನೆ ಸೆಂಟ್ರಲ್‌ ಕಾಲೇಜಿನ ಸೆನೆಟ್‌ ಹಾಲ್‌ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ “ಬಂಡಾಯ ಸಾಹಿತ್ಯ ನಲವತ್ತರ ಹೆಜ್ಜೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅಂತಾರಾಷ್ಟ್ರೀಯ ಅಗ್ರಹಾರಗಳು ಇಂದು ಆರ್ಥಿಕ, ಧಾರ್ಮಿಕ ಆಧಿಪತ್ಯ ಸಾಧಿಸುತ್ತಿವೆ. ಇಂತಹ ಸಂದರ್ಭದಲ್ಲಿ ನಮ್ಮನ್ನು ನಾವು ಹೇಗೆ ರಕ್ಷಿಸಿಕೊಳ್ಳಬೇಕು ಹಾಗೂ ಸಮರ್ಥಿಸಿಕೊಳ್ಳಬೇಕು ಎನ್ನುವುದರ ಕುರಿತು ಚಿಂತನೆ ಅಗತ್ಯವಿದೆ ಎಂದರು.

ಬಂಡಾಯ ಸಾಹಿತ್ಯ ಸೈದ್ಧಾಂತಿಕ ಸೌಹಾರ್ದತೆ ಹುಟ್ಟುಹಾಕಲು ಕ್ರಿಯಾಶೀಲವಾಗಬೇಕಿದ್ದು, ಜಗತ್ತಿನಲ್ಲಿ ನಡೆದ ವಿವಿಧ ಕ್ರಾಂತಿಗಳನ್ನು ತಿಳಿಯುವುದಕ್ಕಾಗಿ ಟಾಲ್‌ಸ್ಟಾಯ್‌, ಕಾರ್ಲ್ ಮಾರ್ಕ್ಸ್ ಅವರನ್ನು ಓದಿಕೊಳ್ಳಬೇಕಿದೆ. ಬಂಡಾಯ ಸಾಹಿತ್ಯ ಎಡ ಹಾಗೂ ಬಲ ವಾದಗಳನ್ನು ಸಂಯೋಜಿಸಿದ್ದು, ಬಂಡಾಯ ಸಾಹಿತ್ಯವನ್ನು ಮತ್ತಷ್ಟು ಬಲಗೊಳಿಸಬೇಕಾಗಿದೆ ಎಂದು ಹೇಳಿದರು.

ಪ್ರಸ್ತುತ ಕಾಲಘಟ್ಟದಲ್ಲಿ ಏನು ಬೇಕಾದರೂ ಮಾತನಾಡಬಹುದು ಎಂಬ ಉದಾರಿತನ ಹಾಗೂ ಪುಢಾರಿ ಪರಿಭಾಷೆ ವಿಜೃಂಭಿಸುತ್ತಿದ್ದು, ಹಿಂಸೆ ಮತ್ತು ಪುಢಾರಿತನ ಭಾಷೆಯನ್ನೇ ಭ್ರಷ್ಟಗೊಳಿಸುತ್ತಿದೆ. ಹೀಗಾಗಿ ಸಾಹಿತ್ಯದ ಮಹತ್ವ ಅರಿತು ಪಾರಂಪರಿಕ ಸಾಹಿತ್ಯ ಹೆಚ್ಚಿಸಬೇಕಾಗಿದ್ದು, ಆ ಮೂಲಕ ಸಾಹಿತ್ಯ ಭಾಷೆ, ಪುಢಾರಿ ಭಾಷೆಯಾಗದಂತೆ ಎಚ್ಚರ ವಹಿಸಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಜಾತಿಯೊಳಗಿದ್ದು ಜಾತಿ ಮೀರುವ, ಪಕ್ಷದೊಳಗಿದ್ದು ಪಕ್ಷವನ್ನು ಮೀರುವ, ಧರ್ಮದೊಳಗಿದ್ದು ಧರ್ಮ ಮೀರುವ, ಸಂಕುಚಿತ ನೆಲೆಗಳನ್ನು ಮೀರುವ ಮುತ್ಸದ್ಧಿತನ ತೋರುವ, ನೆಲೆಗಳನ್ನು ಮೀರುವ, ಮುರಿಯುವಂತಹ ನಾಯಕತ್ವ ಅಗತ್ಯವಿದೆ. ಭೂತ, ವರ್ತಮಾನ ಮತ್ತು ಭವಿಷ್ಯತ್‌ ಕಾಲಗಳ ಅಂತರ್‌ ಸಂಬಂಧ ಬೆಳೆಸಬೇಕಿದ್ದು, ಹಿನ್ನೋಟ ಮತ್ತು ಮುನ್ನೋಟಗಳನ್ನು ಒಂದುಗೂಡಿಸುವ ತಿಳುವಳಿಕೆ ಎಲ್ಲರಿಗೂ ಸರಳವಾಗಿ ಅರ್ಥವಾದರೆ, ಹುಸಿ ಕ್ರಾಂತಿಗಳು ನಡೆಯುವುದಿಲ್ಲ ಎಂದು ರಾಮಚಂದ್ರಪ್ಪ ತಿಳಿಸಿದರು.

“ಜನತಂತ್ರ; ಸೃಜನಶೀಲತೆ’ ವಿಷಯ ಕುರಿತು ಮಾತನಾಡಿದ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌, ಚುನಾವಣೆಗಳಿಂದು ಜಾತಿ-ಧರ್ಮ, ಹಣ ಹಾಗೂ ದೈಹಿಕ ಬಲದ ಮೇಲೆ ನಡೆಯುತ್ತಿದ್ದು, ಅತಿಹೆಚ್ಚು ಕ್ರಿಮಿನಲ್‌ ಕೇಸುಗಳು ಹಾಗೂ ಹಣ ಹೊಂದಿರುವವರು ಚುನಾವಣೆಗಳಲ್ಲಿ ಆಯ್ಕೆಯಾಗುತ್ತಿರುವುದು ಆತಂಕಕಾರಿ ವಿಚಾರ ಎಂದರು.

ಅಂಕಿ-ಅಂಶಗಳ ಪ್ರಕಾರ 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ 543 ಸಂಸದರ ಪೈಕಿ 178 ಮಂದಿಯ ಮೇಲೆ ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿದ್ದು, ಇವರೆಲ್ಲ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಆದರೆ, ಯಾವುದೇ ಕ್ರಿಮಿನಲ್‌ ಕೇಸು ಇರದ ಹಾಗೂ ಹಣವಿಲ್ಲದಂತ ಅಭ್ಯರ್ಥಿಗಳು ಡಿಪಾಸಿಟ್‌ ಕಳೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಉತ್ತಮ ಪ್ರಜಾಪ್ರಭುತ್ವಕ್ಕಾಗಿ ಧರ್ಮ ಹಾಗೂ ರಾಜಕಾರಣ ಬೇರೆ ಬೇರೆ ಇರಬೇಕು. ಆದರಿಂದು ಧರ್ಮ ರಾಜಕಾರಣವನ್ನು ಕೈಗೆತ್ತಿಕೊಂಡಿದ್ದು, ಧರ್ಮದ ಪ್ರಮುಖರು ರಾಜಕೀಯವನ್ನು ಮುನ್ನಡೆಸುವಂತಹ ಪರಿಸ್ಥಿತಿ ಬಂದಿದೆ. ಸಂವಿಧಾನದ ಬಗ್ಗೆ ಗೌರವ ಇಲ್ಲದವರು ಸಂವಿಧಾನದ ಹುದ್ದೆಯಲ್ಲಿದ್ದು, ಇವರಿಂದ ಪ್ರಜಾಪ್ರಭುತ್ವ, ಜಾತ್ಯಾತೀತ, ಸಾಮಾಜಿಕ ನ್ಯಾಯದ ರಕ್ಷಣೆ ಆಗುತ್ತದೆಯೇ ಎಂದು ಪ್ರಶ್ನಿಸಿದರು.

ಪ್ರಜಾಪ್ರಭುತ್ವವನ್ನು ಕೋಮುವಾದೀಕರಣ ಮಾಡುವ ಪ್ರಯತ್ನಗಳು ನಡೆಯುತ್ತಿದ್ದು, ಅದು ಸಾಧ್ಯವಾಗದಿದ್ದಾಗ ಸಂವಿಧಾನಿಕ ಸಂಸ್ಥೆಗಳನ್ನು ಬಲಹೀನಗೊಳಿಸಲಾಗುತ್ತಿದೆ. ಸರ್ಕಾರದ ಕ್ರಮಗಳನ್ನು ಟೀಕಿಸಿದರೆ ರಾಷ್ಟ್ರದ್ರೋಹ ಹಣೆಪಟ್ಟಿ ಕಟ್ಟಿ ಜೈಲಿಗೆ ಕಳುಹಿಸುತ್ತಿದ್ದಾರೆ. ಜೈಲಿಗೆ ಕಳುಹಿಸಿದರೂ ಪರವಾಗಿಲ್ಲ. ಆದರೆ, ಎನ್‌ಕೌಂಟರ್‌ ಮಾಡಿ ಸಾಯಿಸುವಂತಹ ಪರಿಸ್ಥಿತಿಯಿದ್ದು, ದೇಶದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಭಯೋತ್ಪಾದನೆ ತಾಂಡವವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಬರಗೂರು ರಾಮಚಂದ್ರಪ್ಪ ಅವರ ಬಂಡಾಯ ಸಾಹಿತ್ಯ ಚಳವಳಿ, ಆರ್‌.ಜೆ.ಹಳ್ಳಿ ನಾಗರಾಜು ಅವರು ರಚಿಸಿರುವ ಬಂಡಾಯ ಸಾಹಿತ್ಯ ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು. ಈ ವೇಳೆ ಸಾಹಿತಿ ಚಂದ್ರಶೇಖರ ಪಾಟೀಲ್‌, ದಲಿತ ಮುಖಂಡ ಮಾವಳ್ಳಿ ಶಂಕರ್‌, ಲೇಖಕಿ ಬಿ.ಟಿ.ಲಲಿತಾ ನಾಯಕ್‌ ಸೇರಿದಂತೆ ಪ್ರಮುಖರು ಹಾಜರಿದ್ದರು.

ಟಾಪ್ ನ್ಯೂಸ್

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.