ದಂಡ ತಪ್ಪಿಸಿಕೊಳ್ಳಲು ನಂ.ಪ್ಲೇಟ್‌ಗೆ ಸ್ಟಿಕ್ಕರ್ ಹಾಕಿದ್ದ ಸವಾರ ಕಡೆಗೂ ಸಿಕ್ಕಿಬಿದ್ದ
Team Udayavani, Nov 26, 2023, 10:20 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡ ತಪ್ಪಿಸಿಕೊಳ್ಳಲು ದ್ವಿಚಕ್ರ ವಾಹನದ ನೋಂದಣಿ ಫಲಕಕ್ಕೆ ಸ್ಟಿಕ್ಕರ್ ಅಂಟಿಸಿಕೊಂಡು ಓಡಾಡುತ್ತಿದ್ದ ಖತರ್ನಾಕ್ ಸವಾರನನ್ನು ಪತ್ತೆ ಹಚ್ಚಿ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನ್ಯೂತಿಪ್ಪಸಂದ್ರದ ಮಲ್ಲೇಶಪಾಳ್ಯ ನಿವಾಸಿ ಎಂ. ಚನ್ನಬಸವ (22) ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಆರೋಪಿಯು ಖಾಸಗಿ ಕಂಪನಿ ಉದ್ಯೋಗಿಯಾಗಿದ್ದು 3 ತಿಂಗಳ ಹಿಂದೆ ದ್ವಿಚಕ್ರ ವಾಹನ ಖರೀದಿಸಿದ್ದಾನೆ. ಸಂಚಾರ ನಿಯಮ ಉಲ್ಲಂ ಸುವ ವಾಹನಗಳಿಗೆ ದಂಡ ವಿಧಿಸುವ ಸಲುವಾಗಿ ನಗರ ಸಂಚಾರ ಪೊಲೀಸರು ಪ್ರಮುಖ ಜಂಕ್ಷನ್‌ಗಳು, ಸಿಗ್ನಲ್‌ಗಳು, ವೃತ್ತಗಳು ಸೇರಿದಂತೆ ನಗರದ ಹಲವೆಡೆ ಅತ್ಯಾಧುನಿಕ ತಂತ್ರಜ್ಞಾನದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ.
ಈ ಕ್ಯಾಮೆರಾಗಳ ಕಣ್ತಪ್ಪಿಸಿ ದಂಡದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಆರೋಪಿ ಚನ್ನಬಸವ ತನ್ನ ದ್ವಿಚಕ್ರ ವಾಹನದ ನೋಂದಣಿ ಫಲಕಕ್ಕೆ ಪ್ಲಾಸ್ಟರ್ ಅಂಟಿಸಿಕೊಂಡು ಓಡಾಡುತ್ತಿದ್ದ. ಇತ್ತೀಚೆಗೆ ಮಲ್ಲೇಶಪಾಳ್ಯ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬರು ಚನ್ನಬಸವನ ದೋಷಪೂರಿತ ನೋಂದಣಿ ಫಲಕದ ಫೋಟೋ ಕ್ಲಿಕ್ಕಿಸಿ ನಗರದ ಸಂಚಾರ ಪೊಲೀಸರ “ಪಬ್ಲಿಕ್ ಐ’ ಅಧಿಕೃತ ಆ್ಯಪ್‌ನಲ್ಲಿ ಅಪ್‌ಲೋಡ್ ಮಾಡಿದ್ದರು. ಜೀವನಭೀಮಾನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಬಳಿಕ ಮಲ್ಲೇಶ್ ಪಾಳ್ಯ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲ ರಸ್ತೆಗಳ ಸಿಸಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಆರೋಪಿಯ ದ್ವಿಚಕ್ರ ವಾಹನದ ಮೇಲೆ ನಿಗಾವಹಿಸಿದ್ದರು. ನ.24ರಂದು ಮಲ್ಲೇಶ್‌ಪಾಳ್ಯದ ಮುಖ್ಯರಸ್ತೆಯಲ್ಲಿ ಆರೋಪಿ ದ್ವಿಚಕ್ರ ವಾಹನ ಸಹಿತ ಸಿಕ್ಕಿಬಿದ್ದಿದ್ದಾನೆ. ಬಳಿಕ ಆತನನ್ನು ವಶಕ್ಕೆ ಪಡೆದು ಬೈಯಪ್ಪನಹಳ್ಳಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.