Arrested: ಕಿಟಕಿ ಪಕ್ಕ ಮಲಗಿದ್ದ ಮಹಿಳೆಯ್ದ ಮಾಂಗಲ್ಯ ಸರ ಕದ್ದ ರೌಡಿ ಸೆರೆ
Team Udayavani, Sep 4, 2024, 10:00 AM IST
ಬೆಂಗಳೂರು: ಕಿಟಕಿ ಪಕ್ಕದಲ್ಲಿ ಮಲಗಿದ್ದ ಮಹಿಳೆಯ ಮಾಂಗಲ್ಯ ಸರ ಕಳವು ಮಾಡಿದ್ದ ರೌಡಿಶೀಟರ್‌ನನ್ನು ಜೆ.ಪಿ.ನಗರ ಪೊಲೀಸರು ಬಂಧಿಸಿದ್ದಾರೆ.
ಎಸ್.ಜೆ.ಪಾಳ್ಯ ಠಾಣೆ ರೌಡಿ ಶೀಟರ್ ಸೈಯದ್ ಫರ್ವೇಜ್ (34) ಬಂಧಿತ. ಈತನಿಂದ 9 ಲಕ್ಷ ರೂ. ಮೌಲ್ಯದ 3 ದ್ವಿಚಕ್ರ ವಾಹನ, 109 ಗ್ರಾಂ ಚಿನ್ನದ ಸರ ಜಪ್ತಿ ಮಾಡಲಾಗಿದೆ.
ಆರೋಪಿಯ ಬಂಧನದಿಂದ ಜೆ.ಪಿ.ನಗರ ಠಾಣೆಯಲ್ಲಿ ದಾಖಲಾಗಿದ್ದ 5 ಕಳವು ಪ್ರಕರಣ ಪತ್ತೆಯಾಗಿವೆ ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿದರು. ಠಾಣಾ ವ್ಯಾಪ್ತಿಯ ಮಹಿಳಾ ನಿವಾಸಿಯೊಬ್ಬರು, ಕಿಟಕಿ ಬಾಗಿಲು ತೆರೆದು ಕಿಟಕಿ ಪಕ್ಕದಲ್ಲೇ ಮಲಗಿದ್ದರು. ಈ ವೇಳೆ ಆರೋಪಿ ಮನೆ ಬಳಿ ಹೋಗಿದ್ದು, ಕಿಟಕಿ ಪಕ್ಕದಲ್ಲಿ ಮಲಗಿದ್ದ ಮಹಿಳೆಯ ಮಾಂಗಲ್ಯ ಸರ ಕಸಿದುಕೊಳ್ಳಲು ಮುಂದಾಗಿದ್ದಾನೆ. ಆಗ ಎಚ್ಚರಗೊಂಡ ಮಹಿಳೆ ಕೂಡಲೇ ಸರವನ್ನು ಬಿಗಿಯಾಗಿ ಹಿಡಿದುಕೊಂಡಿದ್ದಾರೆ. ಆದರೂ ಆರೋಪಿ ಬಲವಾಗಿ ಎಳೆದು ಅರ್ಧದಷ್ಟು ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ರೂಢಿಗತ ಆರೋಪಿಯಾಗಿದ್ದು, ಈತನ ವಿರುದ್ಧ ನಗರ ವಿವಿಧ ಠಾಣೆಯಲ್ಲಿ ಕಳ್ಳತನ, ದರೋಡೆ, ಕೊಲೆ ಯತ್ನಗಳಂತಹ ಪ್ರಕರಣಗಳು ದಾಖಲಾಗಿವೆ.
ಎಸ್.ಜೆ.ಪಾಳ್ಯ ಠಾಣೆಯ ರೌಡಿ ಶೀಟರ್ ಆಗಿದ್ದಾನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.