ನಗರದಲ್ಲಿ ಸತತ ಎರಡನೇ ದಿನವೂ ಭಾರೀ ವರ್ಷಧಾರೆ
Team Udayavani, May 19, 2017, 11:33 AM IST
ಬೆಂಗಳೂರು: ನಗರದ ಹಲವೆಡೆ ಗುರುವಾರ ಕೂಡ ಸಂಜೆ ಮತ್ತು ರಾತ್ರಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿದಿದೆ. ಗುಡುಗು, ಗಾಳಿಯಿಂದ ಕೂಡಿದ ವರುಣನ ಆರ್ಭಟಕ್ಕೆ ರಾಜರಾಜೇಶ್ವರಿ ನಗರದಲ್ಲಿ 6 ,ಜಯನಗರದಲ್ಲಿ 1ಮರ ಸೇರಿದಂತೆ ಹಲವು ಭಾಗಗಳಲ್ಲಿ ಮರಗಳು ಧರೆಗುರುಳಿವೆ. ಸಂಜೆಯಿಂದಲೇ ತಾಸುಗಟ್ಟಲೇ ಸುರಿದ ಮಳೆಯಿಂದಾಗಿ ಕೆಲ ರಸ್ತೆಗಳಲ್ಲಿ ನೀರು ತುಂಬಿಕೊಂಡ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ಅಸ್ತವ್ಯಸ್ಥಗೊಂಡಿತ್ತು.
ಬೆಂಗಳೂರಿನ ಕೆಲ ಭಾಗಗಳಲ್ಲಿ ವಿದ್ಯುತ್ ತಂತಿಗಳ ಮೇಲೆ ಮರದ ಕೊಂಬೆಗಳು ಮುರಿದು ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಜನ ಪರದಾಡುವಂತಾಗಿತ್ತು. ಇಸ್ರೋ ಲೇಔಟ್,ಏರ್‌ಪೋರ್ಸ ಕ್ಯಾಟ್ರಸ್, ಆರ್‌ಟಿ. ನಗರ. ಹೆಬ್ಟಾಳ, ಡಾಲರ್ಸ್‌ಕಾಲೋನಿ, ಎಂಎಲ್‌ಎ ಲೇಔಟ್, ಕೆಂಗೇರಿ ಸುತ್ತಮುತ್ತಲ ಪ್ರದೇಶಗಳು ಹಾಗೂ ಪೂರ್ವ ಭಾಗದ ಕೆಲ ಬಡವಾಣೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.
ಬುಧವಾರ ಕೂಡ ಇದೇ ಪ್ರದೇಶಗಳಲ್ಲಿ ಮಳೆ ಸುರಿದು ವಿದ್ಯುತ್ ಕಡಿತಗೊಂಡಿತ್ತು. ಇದರಿಂದ ಜನರು ಪರಿತಪಿಸುಂ ತಾಯಿತು. ಭಾರೀ ಮಳೆಗಾಳಿಯಿಂದಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲು ಬೆಸ್ಕಾಂ ಅನಿವಾರ್ಯವಾಗಿ ವಿದ್ಯುತ್ ಕಡಿತಗೊಳಿಸಿತ್ತು. ಮಳೆ ಹಿನ್ನೆಲೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡ ಪರಿಣಾಮ ಬೆಸ್ಕಾಂ ಕಚೇರಿಗೆ ಸಾವಿರಾರು ಸಂಖ್ಯೆಯಲ್ಲಿ ದೂರುಗಳ ಮಹಾಪೂರವೇ ಹರಿದು ಬಂದಿದೆ.
ಗುರುವಾರ ಸಂಜೆ 6ಗಂಟೆಯಿಂದ ರಾತ್ರಿ 9 ಗಂಟೆಯ ಅವಧಿಯಲ್ಲಿ ಒಟ್ಟು 3715 ದೂರುಗಳು ದಾಖಲಾಗಿವೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದಾಗಿ ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆಯಲ್ಲಿ ಆ್ಯಂಬುಲೆನ್ಸ್ ಸಿಕ್ಕಿ ಹಾಕಿಕೊಂಡಿದ್ದರಿಂದ ಸಮಸ್ಯೆ ಉಂಟಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.