ಸಿಂಗಾಪುರಕ್ಕಿಂದು ಪೌರ ಕಾರ್ಮಿಕರ ಎರಡನೇ ತಂಡ
Team Udayavani, Jul 25, 2017, 2:00 AM IST
ಬೆಂಗಳೂರು: ಸ್ವತ್ಛತೆ ಹಾಗೂ ವೈಜ್ಞಾನಿಕವಾಗಿ ಕಸ ಸಂಸ್ಕರಣೆ ಕುರಿತು ಪೌರ ಕಾರ್ಮಿಕರಲ್ಲಿ ತಿಳಿವಳಿಕೆ ಮೂಡಿಸಲು ಹಾಗೂ ಅಧಿಕಾರಿಗಳು ಅಧ್ಯಯನ ಮಾಡಿಕೊಂಡು ಬರಲು ರಾಜ್ಯ ಸರ್ಕಾರ ರೂಪಿಸಿರುವ “ಸಿಂಗಾಪುರ ಪ್ರವಾಸ’ ಭಾಗ್ಯಕ್ಕೆ ಎರಡನೇ ತಂಡ ಸಜ್ಜಾಗಿದೆ.
ಬಿಬಿಎಂಪಿ ಸೇರಿ ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ 39 ಪೌರ ಕಾರ್ಮಿಕರು ಹಾಗೂ ಮೂವರು ಅಧಿಕಾರಿಗಳನ್ನೊಳಗೊಂಡ ತಂಡಮಂಗಳವಾರ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಲಿದೆ.
ನಾಲ್ಕು ದಿನಗಳ ಸಿಂಗಾಪುರ ಪ್ರವಾಸ ಕೈಗೊಳ್ಳುತ್ತಿರುವ ಪೌರ ಕಾರ್ಮಿಕರಿಗೆ ತಲಾ 70 ಸಾವಿರ ರೂ.
ವೆಚ್ಚವಾಗುತ್ತಿದ್ದು ಐದು ಸಾವಿರ ರೂ. (100 ಸಿಂಗಪುರ ಡಾಲರ್) ಪಾಕೆಟ್ ಮನಿಯಾಗಿ ಸಹ ನೀಡಲಾಗುತ್ತಿದೆ. ವಿಕಾಸೌಧದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಂಗಾಪುರ ಪ್ರವಾಸ ಕೈಗೊಂಡಿರುವವರಿಗೆ ಪೌರಾಡಳಿತ ಸಚಿವ ಈಶ್ವರ ಖಂಡ್ರೆ ವಿಮಾನ ಟಿಕೆಟ್ ವಿತರಿಸಿ ಶುಭ ಹಾರೈಸಿದರು.
ಮೊದಲ ತಂಡದಲ್ಲಿ ಕೇವಲ ಮೂವರು ಹಾಗೂ ಎರಡನೇ ತಂಡದಲ್ಲಿ ಐವರು ಮಹಿಳೆಯರು ಮಾತ್ರ ಇರುವುದನ್ನು ಗಮನಿಸಿದ ಸಚಿವರು ಮುಂದೆ ಪೂರ್ಣ ಪ್ರಮಾಣದಲ್ಲಿ ಮಹಿಳೆಯರು ಹಾಗೂ ಮಹಿಳಾ ಅಧಿಕಾರಿಗಳನ್ನೇ ಕಳುಹಿಸಲಾಗುವುದು ಎಂದು ತಿಳಿಸಿದರು.
ಒಟ್ಟು 1 ಸಾವಿರ ಪೌರ ಕಾರ್ಮಿಕರನ್ನು ಸಿಂಗಾಪುರ ಪ್ರವಾಸ ಮಾಡಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದರು. ಕಾರ್ಯಕ್ರಮದಲ್ಲಿ ಮೊದಲ ತಂಡದಲ್ಲಿ ಸಿಂಗಾಪುರ ಪ್ರವಾಸ ಕೈಗೊಂಡಿದ್ದ ಅಧಿಕಾರಿಗಳು ಹಾಗೂ ಪೌರ ಕಾರ್ಮಿಕರು ತಮ್ಮ ಅನುಭವ ಹಂಚಿಕೊಂಡರು. ರಸ್ತೆ, ಸಾರ್ವಜನಿಕ ಪ್ರದೇಶ, ಅಪಾರ್ಟ್‌ಮೆಂಟ್, ವಾಣಿಜ್ಯ ಸ್ಥಳಗಳಲ್ಲಿನ ಸ್ವತ್ಛತೆ ನಿರ್ವಹಣೆ ಮತ್ತು ಕಸ ಸಂಗ್ರಹಣೆ ಮಾಹಿತಿ ನೀಡಿದರು.
ಸಿಂಗಾಪುರ ಪ್ರವಾಸಕ್ಕೆ ಸರ್ಕಾರ ನನ್ನನ್ನು ಕಳುಹಿಸುತ್ತಿರುವುದು ಸಂತಸ ತಂದಿದೆ. ಸಿಂಗಾಪುರದಲ್ಲಿ ಕಸ ವಿಲೇವಾರಿ ಹಾಗೂ ಸಂಸ್ಕರಣೆ ಚೆನ್ನಾಗಿ ನಿರ್ವಹಣೆ ಮಾಡಲಾಗುತ್ತಿದೆ ಎಂದು ಹೇಳುತ್ತಾರೆ. ಅದನ್ನು ನೋಡಿ ಅದೇ ರೀತಿ ನಮ್ಮಲ್ಲೂ ಮಾಡಲು ಪ್ರಯತ್ನಿಸಲಾಗುವುದು.
– ಕೃಷ್ಣಪ್ಪ, ಪೌರ ಕಾರ್ಮಿಕ, ಜಿಗಣಿ ಪುರಸಭೆ, ಆನೇಕಲ್
ಸಿಂಗಾಪುರಕ್ಕೆ ಹೋಗುತ್ತಿರುವುದಕ್ಕೆ ಸಂತೋಷವಾಗಿದೆ. ನಮಗೂ ಬೇರೆ ದೇಶ ನೋಡೋ ಭಾಗ್ಯ ಬಂದಿದೆ.
– ಯಲ್ಲವ್ವ, ಪೌರ ಕಾರ್ಮಿಕ ಮಹಿಳೆ, ಸಿಂದಗಿ ಪುರಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.