ರಾಷ್ಟ್ರಪಿತನಿಗೆ ಅವಮಾನಿಸುವುದು ಖಂಡನೀಯ


Team Udayavani, Jun 12, 2017, 12:51 PM IST

rashtrapitha.jpg

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಕುರಿತು ಅವಹೇಳಕನಕಾರಿಯಾಗಿ ಮಾತನಾಡಿರುವುದು ಖಂಡನೀಯ ಎಂದು ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಡಾ.ನಲ್ಲೂರು ಪ್ರಸಾದ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ವಿಶ್ವ ಮಾನ ಸಾಂಸ್ಕೃತಿಕ ಪ್ರತಿಷ್ಠಾನದ 5ನೇ ವಾರ್ಷಿಕೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ ಮತ್ತು ಸಮಾಜ ಸೇವಕ ಡಾ.ಎ.ಎಚ್‌.ಬಸವರಾಜು ಅವರಿಗೆ “ವಿಶ್ವ ಮಾನವ ಪ್ರತಿಷ್ಠಾನ ಪ್ರಶಸ್ತಿ’ ಪ್ರದಾನ ಮಾಡಿ ಮಾತನಾಡಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ ಅವರ ನೇತೃತ್ವದಲ್ಲಿ ಲಕ್ಷಾಂತರ ಮಂದಿ ತಮ್ಮ ಮನೆಮಠ ತೊರೆದು  ಪಾಲ್ಗೊಂಡಿದ್ದರು. ಮಹಾತ್ಮಗಾಂಧಿಯನ್ನು ಹತ್ಯೆಗೈದ ಸಂಘ ಪರಿವಾರದ ಕೂಸು ಗೋಡ್ಸೆಗೆ ದೇವಸ್ಥಾನ ನಿರ್ಮಿಸಿ, ಪೂಜೆ ಮಾಡಲು ಹೊರಟಿದ್ದಾರೆ. ಅದೇ ಪರಿವಾರದಲ್ಲಿ ಬೆಳೆದ ಅಮಿತ್‌ ಶಾ ಇಂದು ಗಾಂಧಿ ಬಗ್ಗೆ ಜಾತಿ ಹೆಸರಿನಲ್ಲಿ ಅವಹೇಳನ ಮಾಡಿರುವುದು ಖಂಡನೀಯ ಎಂದು ಟೀಕಿಸಿದರು.

ಸಮಾಜದಲ್ಲಿ ಕೆಟ್ಟವರ ಸಂಖ್ಯೆ ಹೆಚ್ಚಾಗುತ್ತಿದೆ. ಒಳ್ಳೆಯವರು ಹುಡುಕಿದರೂ ಸಿಗುತ್ತಿಲ್ಲ. ದೇಶಕ್ಕಾಗಿ ತ್ಯಾಗ ಮಾಡಿದ ನಾಯಕರ ಬಗ್ಗೆ ಜವಾಬ್ದಾರಿ ಸ್ಥಾನದಲ್ಲಿ ಇರುವವರು ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ  ಸಮಾಜಮುಖೀ ಜನರನ್ನು ನೆನೆಯುವುದು ಕಷ್ಟ. ಸಮಾಜದಲ್ಲಿ ಒಳ್ಳೆಯದನ್ನು ಮಾಡುತ್ತಿರುವವರನ್ನು ಗುರುತಿಸಬೇಕು. ಸಮಾಜಕ್ಕಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಗಳು ನಮ್ಮ ಮುಂದಿನ ಪೀಳಿಗೆಗೆ ಆದರ್ಶವಾಗಬೇಕು ಎಂದು ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಮಾತನಾಡಿ, ಮಹಾತ್ಮ ಗಾಂಧೀಜಿ ಅವರ ಹೆಸರಿನಲ್ಲಿ ಕೆಲವರು ಪ್ರಚಾರ ಪಡೆಯಲು ಮಾಧ್ಯಮಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಯಾರಿಂದಲೂ ಗಾಂಧೀಜಿ ಅವರ ಗೌರವಕ್ಕೆ ಧಕ್ಕೆ ತರಲು ಸಾಧ್ಯವಿಲ್ಲ. ಕೆಲವರಿಗೆ ಗಾಂಧೀಜಿ ಅವರ ಹೆಸರು ಹೇಳಲು ಕೂಡ ಯೋಗ್ಯತೆ ಇಲ್ಲ. ಇಂತಹ ಕಲುಷಿತ ಸಮಾಜದಲ್ಲಿ ಒಳ್ಳೆಯತನವನ್ನು ಗುರುತಿಸಿ ಗೌರವಿಸಬೇಕು ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ ಮಾತನಾಡಿ, ಸಮಾಜದಲ್ಲಿ ಯುವಜನರನ್ನು ದಾರಿ ತಪ್ಪಿಸುವವರ ಸಂಖ್ಯೆ ಹೆಚ್ಚುತ್ತಿದೆ. ಯುವ ಸಮುದಾಯವನ್ನು ಸಂಘಟಿಸಿ ಸಮಾಜವನ್ನು ಅರ್ಥ ಮಾಡಿಸಬೇಕು. ಸಾಯುವುದರೊಳಗೆ ಏನಾದರೂ ಸಮಾಜಮುಖೀ ಕೆಲಸ ಮಾಡಬೇಕು ಎಂಬ ಮನೋಭಾವವನ್ನು ಬೆಳೆಸಬೇಕು. ಈ ನಿಟ್ಟಿನಲ್ಲಿ ಸಂಸ್ಥೆಗಳು ಕಾರ್ಯನಿರ್ವಹಿಸಬೇಕು ಎಂದರು.

ರಂಗ ಗೌರವ: ಡಾ.ಆರ್‌.ನಾಗೇಶ್‌, ರಾಜೀವ್‌ ಬೀಜಾಡಿ, ಆರ್‌.ಮಂಜುನಾಥ್‌, ಆರ್‌.ಶ್ವೇತ, ಶ್ರೀನಾಥರಾವ್‌, ಅನಿತಾ ಅಡಿಗ ಅವರಿಗೆ ಈ ಸಂದರ್ಭದಲ್ಲಿ ರಂಗ ಗೌರವ ಸಲ್ಲಿಸಲಾಯಿತು.

ಪ್ರತಿಭಾ ಪುರಸ್ಕಾರ: ಇದೇ ವೇಳೆ ಮಾನಸಿ ಆರ್‌.ಕೌಶಿಕ್‌, ಸಚಿನ್‌ ಶಂಕರ್‌ಭಟ್‌, ಎಚ್‌.ಎಸ್‌.ಶ್ವೇತಾ, ಎಸ್‌.ಚಿನ್ಮಯಿ, ನಾಗರಂಜಿನಿ, ಎಸ್‌.ಮನೋಜ್‌ಕುಮಾರ್‌, ಎಸ್‌.ಶರಣ್ಯ, ಬಿಪಿನ್‌ ಕುಮಾರ್‌, ಪ್ರತೀಕ್ಷಾ, ಸಿ.ಸಿರಿ ಅವರಿಗೆ ವಿಶ್ವಮಾನವ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಟಾಪ್ ನ್ಯೂಸ್

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.