ಸುಮೇರು ಸುತ್ತಮುತ್ತ ನೀರವ ಮೌನ


Team Udayavani, Nov 13, 2018, 12:00 PM IST

sumeru.jpg

ಬೆಂಗಳೂರು: ಅನಂತದಲ್ಲಿ ಲೀನವಾದ ಅನಂತ ಕುಮಾರ್‌ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯಲು ಸೋಮವಾರ ಬೆಳಗ್ಗೆಯಿಂದಲೇ ಅವರ ಮನೆ ಮುಂದೆ ಜನ ಸಾಗರವೇ ಸೇರಿತ್ತು. ಮನೆಯ ಮುಂಭಾಗದಲ್ಲಿ ಅನಂತಕುಮಾರ್‌ ಅವರ ಹಸನ್ಮುಖೀ ಆಳೆತ್ತದ ಚಿತ್ರಪಟ ಇಟ್ಟು ಹೂವಿನ ಹಾರ ಹಾಕಲಾಗಿತ್ತು. ಅನಂತಕುಮಾರ್‌ ಅವರ ಪಾರ್ಥೀವ ಶಾರೀರ ಕೇಸರಿ ಬಣ್ಣದ ಕೋಟಿನಲ್ಲೇ ಇತ್ತು. 

ಅನಂತ ಕುಮಾರ್‌ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ನಗರ ವಿವಿಧ ಭಾಗದಿಂದ ಸಾವಿರಾರು ಜನರು ಅವರ ಮನೆಮುಂದೆ ಸೇರಿದ್ದರು. ಮಕ್ಕಳಿಂದ ಹಿಡಿದು ಶತಾಯುಷಿಗಳು ಅಂತಿಮ ದರ್ಶನಕ್ಕೆ ಬಂದಿದ್ದರು. ಕುಟುಂಬದವರು, ಸಂಘಪರಿವಾರದ ಸದಸ್ಯರು, ಕಾರ್ಯಕರ್ತರು,  ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿನ್‌ ಧರ್ಮಗುರುಗಳು ಅಂತಿಮ ದರ್ಶನ ಪಡೆದರು.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್‌.ಯಡಿಯೂರಪ್ಪ, ಸಚಿವರಾದ ಡಾ.ಜಿ.ಪರಮೇಶ್ವರ್‌, ಡಿ.ಕೆ.ಶಿವಕುಮಾರ್‌, ಜಮೀರ್‌ ಅಹಮದ್‌ ಸೇರಿದಂತೆ ಶಾಸಕರು, ಸಂಸದರು, ಪಾಲಿಕೆ ಸದಸ್ಯರು, ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ನಾಯಕರು, ಮುಖಂಡರು ಅಂತಿಮ ನಮನ ಸಲ್ಲಿಸಿದರು.

ಗಣ್ಯರಿಗೆ ಹಾಗೂ ಸಾರ್ವಜನಿಕರಿಗೆ ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಸೋಮವಾರ ಬೆಳಗ್ಗೆ ಮಾಡಲಾಗಿತ್ತು. ಗಣ್ಯರ ವೇಳಾಪಟ್ಟಿಯಲ್ಲಿ ವ್ಯತ್ಯಾಸವಾದ ಹಿನ್ನೆಲೆಯಲ್ಲಿ ಮನೆಯಲ್ಲೇ ದಿನಪೂರ್ತಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಮನೆಯ ಮುಂಭಾಗದಲ್ಲಿ ಸಾರ್ವಜನಿಕರಿಗೆ ಹಾಗೂ ಗಣ್ಯರ ಪ್ರವೇಶಕ್ಕಾಗಿ ಪೊಲೀಸರು ಬ್ಯಾರಿಕೇಡ್‌ ಹಾಕಿದ್ದರು. ಲಾಲ್‌ಬಾಗ್‌ ಪಶ್ಚಿಮ ದ್ವಾರದ ಸಮೀಪದಲ್ಲಿರುವ ಅನಂತಕುಮಾರ್‌ ಅವರ ಮನೆಯ ರಸ್ತೆಯಲ್ಲಿ ಸಂಪೂರ್ಣ ಪೊಲೀಸ್‌ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು. ಟ್ರಾಫಿಕ್‌ ಸಮಸ್ಯೆ ಉದ್ಭವಿಸದಂತೆ ಸಂಚಾರ ಪೊಲೀಸರು ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದರು.

ಬಿಗಿ ಬಂದೋಬಸ್ತ್: ಅನಂತಕುಮಾರ್‌ ಅವರ ಅಂತಿಮ ದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಲಾಲ್‌ಬಾಗ್‌ ಪಶ್ಚಿಮ ದ್ವಾರದ ಸುತ್ತಲು ಬಿಗಿ ಪೊಲೀಸ್‌ ಭದ್ರತೆ ನಿಯೋಜಿಸಲಾಗಿತ್ತು. ಮನೆಯ ಸುತ್ತಲಿನ ರಸ್ತೆಗಳಲ್ಲಿ ನೂರು ಮೀಟರ್‌ ವ್ಯಾಪ್ತಿವರೆಗೂ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿತ್ತು. ಬಿಜೆಪಿಯ ಹಿರಿಯ ನಾಯಕರು, ಸಚಿವರು, ಶಾಸಕರು ಮತ್ತು ಕುಟುಂಬದ ಸದಸ್ಯರನ್ನು ಹೊರತುಪಡಿಸಿ ಬೇರೆ ಯಾರಿಗೂ ಪ್ರಧಾನಿ ಭೇಟಿ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಕ್ಕೆ ಅವಕಾಶ ನೀಡಿಲ್ಲ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.