ಪರಿಹಾರ ಕಾಮಗಾರಿ ಮತ್ತಷ್ಟು ಚುರುಕಾಗಲಿ
Team Udayavani, Aug 21, 2018, 6:10 AM IST
ಬೆಂಗಳೂರು:ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಸಂಕಷ್ಟಕ್ಕೀಡಾಗಿರುವ ಜನರಿಗೆ ನೆರವಾಗಲು ಬಿಜೆಪಿಯ ವಿಧಾನಸಭೆ, ವಿಧಾನಪರಿಷತ್, ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ತಮ್ಮ ಒಂದು ತಿಂಗಳ ವೇತನ ಪರಿಹಾರ ನಿಧಿಗೆ ನೀಡಲು ತೀರ್ಮಾನಿಸಿದ್ದಾರೆ.
ಬಿಜೆಪಿಯ ಶಾಸಕರು ಹಾಗೂ ಸಂಸದರ ಒಂದು ತಿಂಗಳ ವೇತನ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಳುಹಿಸಲಾಗುವುದು. ಸಾರ್ವಜನಿಕರು ಸಹ ಉದಾರವಾಗಿ ಧನ ಸಹಾಯ ಮಾಡಬೇಕು ಎಂದು ಪ್ರತಿಪಕ್ಷ ನಾಯಕರ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಊಹೆಗೂ ನಿಲುಕದಷ್ಟು ಹಾನಿಯುಂಟಾಗಿದ್ದು ಜಿಲ್ಲೆಯ ಜನರು ತಮ್ಮ ಸಹಜ ಜೀವನಕ್ಕೆ ಮರಳಲು ಹೆಣಗಾಡುತ್ತಿದ್ದಾರೆ. ಮನೆ, ಆಸ್ತಿ ಎಲ್ಲವನ್ನೂ ಕಳೆದುಕೊಂಡಿರುವ ಜನರಿಗೆ ನೆರವಿಗೆ ಧಾವಿಸುವುದು ನಮ್ಮ ಪ್ರಥಮ ಕರ್ತವ್ಯವಾಗಿದೆ. ಸದ್ಯಕ್ಕೆ ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವ ಜನರಿಗೆ ಸಮರೋಪಾದಿಯಲ್ಲಿ ಶಾಶ್ವತ ನೆಲೆಯನ್ನು ಒದಗಿಸಬೇಕಾಗದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತಷ್ಟು ಚುರುಕಾಗಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಪುನರ್ವಸತಿ ಕೇಂದ್ರಗಳಲ್ಲಿರುವ ಸಂತ್ರಸ್ತರನ್ನು ನಾನು ಖುದ್ದಾಗಿ ಭೇಟಿ ಮಾಡಿದ್ದೇನೆ. ಸರ್ವಸ್ವವನ್ನೂ ಕಳೆದುಕೊಂಡಿರುವ ಜನರಿಗೆ ಶಾಶ್ವತ ಪುನರ್ವಸತಿ ಒದಗಿಸಲು ಕೇಂದ್ರ ಸರ್ಕಾರದಿಂದಲೂ ನೆರವು ಕಲ್ಪಿಸಲು ಪ್ರಯತ್ನಿಸಲಾಗುವುದು. ರಾಜ್ಯ ಸರ್ಕಾರ ಈ ಸಂಬಂಧ ತಕ್ಷಣವೇ ಯೋಜನೆ ರೂಪಿಸಿ ಅನುಷ್ಟಾನಕ್ಕೆ ತರಬೇಕು ಎಂದು ಆಗ್ರಹಿಸಿದ್ದಾರೆ.
ಪಾಲಿಕೆ ಸದಸ್ಯರ ಎರಡು ತಿಂಗಳ ವೇತನ
ಈಮಧ್ಯೆ, ಬಿಬಿಎಂಪಿಯಲ್ಲಿರುವ ಬಿಜೆಪಿಯ 99 ಪಾಲಿಕೆ ಸದಸ್ಯರು ಎರಡು ತಿಂಗಳ ವೇತನ ಪರಿಹಾರ ನಿಧಿಗೆ ಕೊಡಲು ತೀರ್ಮಾನಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ ತಿಳಿಸಿದ್ದಾರೆ.
ಸಂತ್ರಸ್ತರಿಗೆ ನೆರವು ಕೊಡಿ
“ಕೊಡಗು ಜಿಲ್ಲೆಯಲ್ಲಿ ಮಳೆಯಬ್ಬರದಿಂದ ಪರಿಸ್ಥಿತಿ ಕೈ ಮೀರಿದೆ. ಜನ ಜೀವನ ಸಹಜ ಸ್ಥಿತಿಗೆ ಬರಲು ತಿಂಗಳುಗಳೇ ಬೇಕು. ಅಲ್ಲಿನ ಸಂತ್ರಸ್ತರಿಗೆ ನನ್ನ ಕೈಲಾದಷ್ಟು ನೆರವು ನೀಡಿದ್ದೇನೆ.ರಾಜ್ಯದ ಸಹೃದಯಿಗಳು ಮಾನವೀಯತೆಯ ದೃಷ್ಟಿಯಿಂದ ಕೈಲಾದಷ್ಟು ನೆರವು ನೀಡಬೇಕು’ಎಂದು ನಟ ಪುನೀತ್ ರಾಜಕುಮಾರ್ ಬಾಗಲಕೋಟೆಯಲ್ಲಿ ಮನವಿ ಮಾಡಿದರು.
ಹಾಲಿನ ಪುಡಿ ರವಾನೆ
ಮಂಡ್ಯ: ಕೊಡಗು ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹದಿಂದ ನೆಲೆ ಕಳೆದುಕೊಂಡು ನಿರಾಶ್ರಿತರಾಗಿರುವ ಜನರಿಗೆ ಜಿಲ್ಲಾ ಹಾಲು ಒಕ್ಕೂಟ 10 ಲಕ್ಷ ರೂ. ಮೌಲ್ಯದ ಹಾಲು ಮತ್ತು ಹಾಲಿನ ಪುಡಿಯನ್ನು ಸೋಮವಾರ ರವಾನಿಸಿತು. ಮನ್ ಮುಲ್‌ನಿಂದ ಎರಡು ಲಾರಿಗಳಲ್ಲಿ 1 ಕೆ.ಜಿ. ಪ್ಯಾಕೆಟ್ ನ 2,000 ಪ್ಯಾಕೆಟ್‌ಗಳು ಹಾಗೂ 500 ಎಂಎಲ್‌ನ 30 ಸಾವಿರ ಯುಎಚ್‌ಟಿ ಗುಡ್‌ಲೈಫ್ ಹಾಲಿನ ಪ್ಯಾಕೆಟ್‌ಗಳನ್ನು ನೆರೆ ಸಂತ್ರಸ್ತರಿಗೆ ಕಳುಹಿಸಿಕೊಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.