ಕನ್ನಡ ಅಂಕಿ ಬಳಕೆ ಸಪ್ತಾಹ ಆರಂಭ


Team Udayavani, Dec 28, 2019, 10:50 AM IST

bng-tdy-4

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ 4 ಸಾವಿರ ವಾಹನಗಳ ನೋಂದಣಿ ಫ‌ಲಕಗಳಿಗೆ ಕನ್ನಡದ ಅಂಕಿ ಮತ್ತು ಅಕ್ಷರಗಳನ್ನು ಬರೆಸುವ ಕನ್ನಡ ಅಂಕಿ ಬಳಕೆ ಸಪ್ತಾಹಕ್ಕೆ ಶುಕ್ರವಾರ ಚಾಲನೆ ದೊರೆತಿದೆ.

ಕನ್ನಡ ಅಂಕಿ ಅನುಷ್ಠಾನ ಮತ್ತು ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕನ್ನಡ ಅನುಷ್ಠಾನ ಮಂಡಳಿಯು ಮಲ್ಲೇಶ್ವರದ ಆಟದ ಮೈದಾನದಲ್ಲಿ ಆಯೋಜಿಸಿರುವ ಸಪ್ತಾಹದ ಮೊದಲ ದಿನವಾದ ಶುಕ್ರವಾರ, ದ್ವಿಚಕ್ರ ವಾಹನಗಳು, ಕಾರುಗಳು ಸೇರಿದಂತೆ ನೂರಾರು ವಾಹನಗಳ ನೋಂದಣಿ ಫ‌ಲಕದಲ್ಲಿ ಉಚಿತವಾಗಿ ಕನ್ನಡ ಅಂಕಿ ಬರೆದು ಕೊಡಲಾಯಿತು ಎಂದು ಮಂಡಳಿ ಅಧ್ಯಕ್ಷ ಡಾ.ಆರ್‌. ಎ.ಪ್ರಸಾದ್‌ ಮಾಹಿತಿ ನೀಡಿದರು.

ಕನ್ನಡ ಭಾಷೆ ಜತೆಗೆ ಕನ್ನಡ ಅಕ್ಷರ ಹಾಗೂ ಅಂಕಿಗಳನ್ನು ಜೀವಂತವಾಗಿರಿಸಲು ಮಂಡಳಿಯು 25 ವರ್ಷಗಳಿಂದ ವಾಹನಗಳಿಗೆ ಕನ್ನಡ ಅಂಕಿಗಳನ್ನು ಉಚಿತವಾಗಿ ಬರೆಸುವ ಕಾರ್ಯ ಮಾಡುತ್ತಿದೆ. ಕಳೆದ ವರ್ಷ 5,500 ವಾಹನಗಳಿಗೆ ಕನ್ನಡ ಅಂಕಿ ಬರೆಸಲಾಗಿತ್ತು. ಈ ಸಾಲಿನಲ್ಲಿ 4 ಸಾವಿರ ವಾಹನಗಳಲ್ಲಿ ಬರೆಯುವ ಗುರಿ ಹೊಂದಿದ್ದೇವೆ ಎಂದು ಹೇಳಿದರು.

ಬಹಳಷ್ಟು ಸಂಚಾರ ಪೊಲೀಸರಿಗೆ ವಾಹನಗಳ ಮೇಲಿನ ಕನ್ನಡ ಅಂಕಿಗಳನ್ನು ತಕ್ಷಣವೇ ಗುರುತಿಸಲು ಆಗುವುದಿಲ್ಲ. ಹೀಗಾಗಿ ಪೊಲೀಸರಿಗೆ ಕನ್ನಡ ಅಂಕಿಗಳನ್ನು ಕಲಿಸುವ ಕಾರ್ಯಾಗಾರ ನಡೆಸಲು ನಿರ್ಧರಿಸಿದ್ದು, ಈ ಕುರಿತು ಸಂಬಂಧಪಟ್ಟವರೊಂದಿಗೆ ಚರ್ಚೆ ನಡೆಯುತ್ತಿದೆ. ಪೊಲೀಸರಿಗೆ ಇಂತಹ ಕಾರ್ಯಾಗಾರಗಳ ಅಗತ್ಯವಿದೆ ಎಂದು ಹೇಳಿದರು.

ವಾಹನಗಳ ಮೇಲೆ ಕನ್ನಡ ಅಂಕಿಗಳನ್ನು ಬರೆಸುವ ಮೂಲಕ ಕನ್ನಡ ಭಾಷೆ ಬೆಳವಣಿಗೆಗೆ ಎಲ್ಲರೂ ಸಹಕರಿಸಬೇಕು. ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸುವ ಕಾರ್ಯವನ್ನು ಎಲ್ಲರೂ ಒಟ್ಟಾಗಿ ಮಾಡಬೇಕಿದೆ. ಕನ್ನಡ ಭಾಷೆ ತಾಂತ್ರಿಕವಾಗಿ ಹಿಂದುಳಿದಿದ್ದು, ಅದನ್ನು ಪ್ರಸ್ತುತ ದಿನಕ್ಕೆ ಬೇಕಾದಂತೆ ಬೆಳೆಸಬೇಕು ಎಂದರು.

ಸರ್ಕಾರದ ನಿವೃತ್ತ ಕಾರ್ಯದರ್ಶಿ ಡಾ.ಸಿ.ಸೋಮಶೇಖರ್‌ ಮಾತನಾಡಿ, ಕನ್ನಡ ಭಾಷೆ ಮತ್ತು ಅಂಕಿಗಳು ಕನ್ನಡಿಗರ ಶ್ರೀಮಂತಿಕೆಯಾಗಿದೆ. ಕನ್ನಡಿಗರ ಬದುಕಿನ ಅವಿಭಾಜ್ಯ ಅಂಗವಾಗಿರುವ ಕನ್ನಡ ಭಾಷೆ ಮತ್ತು ಅಂಕಿ ಬಳಕೆ ನಿತ್ಯ, ನಿರಂತರವಾಗಿರಬೇಕು ಎಂದು ಹೇಳಿದರು.

ನಿಯಮದ ಪ್ರಕಾರ ವಾಹನಗಳ ಎರಡೂ ಸಂಖ್ಯಾ ಫ‌ಲಕಗಳಲ್ಲಿ ಕನ್ನಡ ಅಂಕಿ ಬರೆಸುವಂತಿಲ್ಲ. ಆದರೆ, ಒಂದು ಕಡೆ ಬರೆಸಲು ನ್ಯಾಯಾಲಯವೇ ಅನುಮತಿ ನೀಡಿದೆ. ಹೀಗಾಗಿ ಈ ಬಗ್ಗೆ ಜನ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ. ಡಾ.ಆರ್‌.ಎ.ಪ್ರಸಾದ್‌, ಕನ್ನಡ ಅನುಷ್ಠಾನ ಮಂಡಳಿ ಅಧ್ಯಕ್ಷ

ಟಾಪ್ ನ್ಯೂಸ್

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.