ಸಂಚಾರ ದಟ್ಟಣೆ ನಿರ್ವಹಣೆಗೆ ರಾಜ್ಯ ಸರ್ಕಾರ ವಿಫಲ
Team Udayavani, May 1, 2018, 11:49 AM IST
ಬೆಂಗಳೂರು: ರಾಜಧಾನಿ ಬೆಂಗಳೂರು ನಗರ ಸಂಚಾರ ದಟ್ಟಣೆ ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಆರೋಪಿಸಿದ್ದಾರೆ.
ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಮಾಡಿ ಮತಯಾಚನೆ ಮಾಡಿದ ಅವರು ಕ್ಷೇತ್ರದ ಮತದಾರರನ್ನು ಉದ್ದೇಶಿಸಿ ಮಾತನಾಡಿ, ಬೆಂಗಳೂರು ನಗರದಲ್ಲಿ ದಿನೇದಿನೇ ಹೆಚ್ಚುತ್ತಿರುವ ಸಂಚಾರ ದಟ್ಟಣೆಯಿಂದ ನಾಗರಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಬೆಳಗ್ಗೆ ಕಚೇರಿಗೆ ಹೋಗುವಾಗ ಹಾಗೂ ಸಂಜೆ ಮನೆಗೆ ಬರುವಾಗ ರಸ್ತೆಯಲ್ಲಿಯೇ ಗಂಟೆಗಟ್ಟಲೆ ಸಮಯ ವ್ಯಯವಾಗುತ್ತಿರುವುದರಿಂದ ಜನತೆ ಹೈರಾಣಾಗಿದ್ದಾರೆ ಎಂದು ದೂರಿದರು.
ಕಳೆದ ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಸಂಚಾರಿ ದಟ್ಟಣೆ ಸಮಸ್ಯೆ ನಿವಾರಿಸಲು ಯಾವುದೇ ರೀತಿಯಲ್ಲಿ ವೈಜ್ಞಾನಿಕ ಪರಿಹಾರ ಕಂಡುಕೊಳ್ಳದೆ ಜವಾಬ್ದಾರಿಯಿಂದ ನುಣಚಿಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೆಂಗಳೂರು ನಗರದಲ್ಲಿ ದ್ವಿಚಕ್ರ ವಾಹನ ಹಾಗೂ ಕಾರು ಸಹಿತ 50 ಲಕ್ಷಕ್ಕೂ ಅಧಿಕ ವಾಹನಗಳಿವೆ. ರಾಜ್ಯ ಸರ್ಕಾರ ಪರಿಣಾಮಕಾರಿಯಾಗಿ ಸಮೂಹ ಸಾರಿಗೆ ಸೌಲಭ್ಯ ಕಲ್ಪಿಸದೆ ಇರುವುದರಿಂದ ಸಂಚಾರಿ ದಟ್ಟಣೆ ಸಮಸ್ಯೆ ಉಲ್ಬಣವಾಗಲು ಕಾರಣವಾಗಿದೆ ಎಂದು ಅಶ್ವತ್ಥ್ ನಾರಾಯಣ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.