ಮಲ್ಲಿಕಾರ್ಜುನ ಖರ್ಗೆಗೆ ರಾಜ್ಯ ಸರ್ಕಾರದ “ಅರಸು’ ಪ್ರಶಸ್ತಿ
Team Udayavani, Aug 19, 2017, 7:30 AM IST
ಬೆಂಗಳೂರು: ರಾಜ್ಯ ಸರ್ಕಾರದ ಪ್ರಸಕ್ತ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕರಾಗಿರುವ ಎಂ.ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ.
ಸಾಹಿತಿ ಹಂ.ಪ.ನಾಗರಾಜಯ್ಯ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿಯು ಎಂ.ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಶಿಫಾರಸು ಮಾಡಿದ್ದು, ರಾಜ್ಯ ಸರ್ಕಾರ ಒಪ್ಪಿಕೊಂಡಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ತಿಳಿಸಿದ್ದಾರೆ.
ಆಗಸ್ಟ್ 20ರಂದು ಭಾನುವಾರ ವಿಧಾನಸೌಧ ಬಾಂಕ್ವೆಟ್ ಸಭಾಂಗಣದಲ್ಲಿ ನಡೆಯಲಿರುವ ಡಿ.ದೇವರಾಜ ಅರಸು ಅವರ 102 ನೇ ಜನ್ಮದಿನಾಚಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ಎರಡು ಲಕ್ಷ ರೂ. ನಗದು ಹಾಗೂ ಫಲಕ ಒಳಗೊಂಡಿದೆ.
ಸರ್ವಸಮ್ಮತ ಎಂದ ಹಂಪನ: ಡಿ.ದೇವರಾಜ ಅರಸು ಪ್ರಶಸ್ತಿಗೆ ಹಲವಾರು ಹೆಸರು ಪ್ರಸ್ತಾಪಗೊಂಡವು. ಆದರೆ, ಅರಸು ಗರಡಿಯಲ್ಲಿ ರಾಜಕಾರಣ ಮಾಡಿದ ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ, ಸಮಾಜ ಸೇವೆಯಲ್ಲೂ ನಿರತರಾಗಿರುವ ಖರ್ಗೆ ಅವರನ್ನು ಸರ್ವಸಮ್ಮತವಾಗಿ ಸಮಿತಿ ಆಯ್ಕೆ ಮಾಡಿತು ಎಂದು ಸಮಿತಿ ಅಧ್ಯಕ್ಷ ಹಂ.ಪ.ನಾಗರಾಜಯ್ಯ ತಿಳಿಸಿದರು. ಪ್ರಶಸ್ತಿಗಾಗಿ ಪರಿಶೀಲನೆ ನಡೆಸಿದ ಇತರೆ ಹೆಸರುಗಳನ್ನು ಹೇಳಲು ನಿರಾಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.