ರಾಜ್ಯದ ನಾಲ್ಕು ಕಡೆ ಅತ್ಯುನ್ನತ ಕೌಶಲ್ಯ ಕೇಂದ್ರ
Team Udayavani, Jun 10, 2017, 12:40 PM IST
ಬೆಂಗಳೂರು: ಅತ್ಯಾಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಲು ಅನುಕೂಲವಾಗುವಂತೆ ಐಟಿಐ, ಡಿಪ್ಲೊಮಾ ಹಾಗೂ ಎಂಜಿನಿಯರ್ ಮುಗಿಸಿದವರಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಕೈಗಾರಿಕಾ ತರಬೇತಿ ನೀಡುವ ಅತ್ಯುನ್ನತ ಕೇಂದ್ರಗಳು ರಾಜ್ಯದ ನಾಲ್ಕು ಕಡೆ ತಲೆಯೆತ್ತಲಿವೆ.
ರಾಜ್ಯದ ಯುವಜನತೆಗೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಗತ್ಯವಾದ ಕೌಶಲ್ಯ ತರಬೇತಿ ನೀಡುವ ಕೇಂದ್ರಗಳನ್ನು ಆರಂಭಿಸುವ ಸಂಬಂಧ ಸೀಮೆನ್ಸ್ ಇಂಡಸ್ಟ್ರಿ ಸಾಫ್ಟ್ವೇರ್ ಕಂಪನಿ ಹಾಗೂ ಡಿಸೈನ್‌ಟೆಕ್ ಸಿಸ್ಟಮ್ ಲಿಮಿಟೆಡ್‌ನೊಂದಿಗೆ ರಾಜ್ಯ ಸರ್ಕಾರ ಒಡಂಬಡಿಕೆ ಮಾಡಿಕೊಂಡಿತು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಒಡಂಬಡಿಕೆ ಪ್ರಕ್ರಿಯೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್ ಮುಗಿಸಿದವರಿಗೆ ಅತ್ಯಾಧುನಿಕ ಕೌಶಲ್ಯ ತರಬೇತಿ ನೀಡಲು ಪ್ರತಿಷ್ಠಿತ ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ಅದರಂತೆ ಬೆಂಗಳೂರಿನಲ್ಲಿ ವೈಮಾನಿಕ ತರಬೇತಿ, ಮೈಸೂರಿನಲ್ಲಿ ಆಟೋಮೋಟಿವ್, ಕಲಬುರಗಿಯಲ್ಲಿ ಇಂಡಸ್ಟ್ರಿಯಲ್ ಮಿಷನರಿ ಹಾಗೂ ದಾಂಡೇಲಿಯಲ್ಲಿ ನವೀಕರಿಸಬಹುದಾದ ಇಂಧನಕ್ಕೆ ಸಂಬಂಧಪಟ್ಟಂತೆ ತರಬೇತಿ ನೀಡುವ ಅತ್ಯುನ್ನತ ಕೇಂದ್ರಗಳು ನಿರ್ಮಾಣವಾಗಲಿವೆ ಎಂದು ಹೇಳಿದರು.
ಪ್ರತಿಯೊಂದು ಕೇಂದ್ರ ನಿರ್ಮಾಣಕ್ಕೆ ತಲಾ 500 ಕೋಟಿ ರೂ. ವೆಚ್ಚವಾಗಲಿದೆ. ಒಟ್ಟು 2,031.80 ಕೋಟಿ ರೂ. ಅಂದಾಜು ವೆಚ್ಚದ ಯೋಜನೆಗೆ ರಾಜ್ಯ ಸರ್ಕಾರ ಶೇ.10ರಷ್ಟು (219.32 ಕೋಟಿ ರೂ.) ಹಾಗೂ ಉಳಿದ ಶೇ.90ರಷ್ಟು ಹಣವನ್ನು (1822 ಕೋಟಿ ರೂ.) ಸೀಮೆನ್ಸ್ ಇಂಡಸ್ಟ್ರಿ ಸಾಫ್ಟ್ವೇರ್ ಕಂಪನಿ ಭರಿಸಲಿದೆ ಎಂದು ವಿವರಿಸಿದರು.
ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಮಾತನಾಡಿ, ಪ್ರತಿ ವರ್ಷ ಶಿಕ್ಷಣ ಮುಗಿಸಿ 11ಲಕ್ಷಕ್ಕೂ ಹೆಚ್ಚು ಮಂದಿ ಯುವಜನತೆ ಉದ್ಯೋಗ ಬಯಸುತ್ತಾರೆ. ಅವರು ಜಾಗತಿಕ ಮಟ್ಟದಲ್ಲೂ ಸ್ಪರ್ಧಿಸಲು ಅಗತ್ಯವಾದ ಕೌಶಲ್ಯ ಹಾಗೂ ತಾಂತ್ರಿಕ ತರಬೇತಿಯನ್ನು ಉಚಿತವಾಗಿ ನೀಡಲು ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಸೀಮೆನ್ಸ್ ಕಂಪೆನಿಯೊಂದಿಗೆ ರಾಜ್ಯ ಸರ್ಕಾರ ಮೂರು ವರ್ಷದ ಅವಧಿಗೆ ಒಡಂಬಡಿಕೆ ಮಾಡಿಕೊಂಡಿದೆ. ಪ್ರತಿ ವರ್ಷ 25,000ದಿಂದ 30,000 ಅಭ್ಯರ್ಥಿಗಳಿಗೆ ತರಬೇತಿ ನೀಡಲು ವ್ಯವಸ್ಥೆ ಕಲ್ಪಿಸಲಾಗುತ್ತದೆ. ತಾಂತ್ರಿಕ ತರಬೇತಿಗಾಗಿ ಈಗಾಗಲೇ ಆರು ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ (ಜಿಟಿಟಿಸಿ) ವ್ಯವಸ್ಥಾಪಕ ನಿರ್ದೇಶಕ ಬಿ.ಎನ್.ಗದಗ್, ಸೀಮೆನ್ಸ್ ಇಂಡ್ರಸ್ಟಿ ಸಾಫ್ಟ್ವೇರ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸುಮನ್ ಬೋಸ್ ಹಾಗೂ ಡಿಸೈನ್‌ಟೆಕ್ ಸಿಸ್ಟಮ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ವಿಕಾಸ್ ಖಾನ್ವೇಲ್ಕರ್ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಟಿಯಾ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷ ಮುರಳೀಧರ ಹಾಲಪ್ಪ ಇತರರು ಉಪಸ್ಥಿತರಿದ್ದರು.
ಅತ್ಯುನ್ನತ ಕೇಂದ್ರದ ಉಪಯುಕ್ತತೆ: ಕೈಗಾರಿಕೆಗಳು ಬಯಸುವ ಉತ್ಕೃಷ್ಠ ಕೌಶಲ್ಯಾಭಿವೃದ್ಧಿ ತಾಂತ್ರಿಕ ತರಬೇತಿಯ ಪಠ್ಯಕ್ರಮ. ಕೈಗಾರಿಕೆಗಳ ಅಗತ್ಯಕ್ಕೆ ತಕ್ಕಂತೆ ತರಬೇತಿ. ಕೇಂದ್ರದಲ್ಲಿ ಪಡೆದ ತರಬೇತಿಯು ಉದ್ಯೋಗ ಪಡೆಯಲು ಸಹಕಾರಿ. ಸ್ಥಳೀಯವಾಗಿ ಮಾತ್ರವಲ್ಲದೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಉದ್ಯೋಗ ಪಡೆಯಲು ಅನುಕೂಲವಾಗಲಿದೆ ಎಂಬುದು ಇಲಾಖೆಯ ನಿರೀಕ್ಷೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ
Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು
Artificial Intelligence: ಎಐ ಯುಗದಲ್ಲಿ ನಾವು ನೀವು?
Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್ ಟೈಮ್ ಎಷ್ಟು?
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.