ಬಿಜೆಪಿ ಸೇರುವ ಹೇಳಿಕೆ ಮೂರ್ಖತನದ ಸೂಚಕ
Team Udayavani, Mar 10, 2020, 3:06 AM IST
ಬೆಂಗಳೂರು: ತಾವು ಬಿಜೆಪಿ ಸೇರಿದರೆ ಕೇಂದ್ರ ಮಂತ್ರಿ ಮಾಡುವುದಾಗಿ ಬಾಬುರಾವ್ ಚಿಂಚನಸೂರು ನೀಡಿರುವ ಹೇಳಿಕೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟ್ವಿಟರ್ ಮೂಲಕ ತಿರುಗೇಟು ನೀಡಿದ್ದಾರೆ. ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ.
ಕಾನೂನು ವಿದ್ಯಾರ್ಥಿಯಾಗಿ 1972ರಲ್ಲಿ ರಾಜಕೀಯ ಪ್ರವೇಶ ಮಾಡಿದಾಗಿಂದ ಸಾಮಾಜಿಕ ನ್ಯಾಯ, ಸಮಾನತೆ, ಮೀಸಲಾತಿ ವ್ಯವಸ್ಥೆ ಪರ ಹೋರಾಡುತ್ತಾ ಬಂದಿದ್ದೇನೆ, ಬಿಜೆಪಿ ಈ ಎಲ್ಲ ತತ್ವಗಳಿಗೂ ವಿರುದ್ಧವಾಗಿದೆ. ಹೀಗಿರುವಾಗ ಬಿಜೆಪಿ ಸೇರಲು ಸಾಧ್ಯವೇ? ಇದೊಂದು ಮೂರ್ಖತನದ ಪ್ರಚಾರ ಎಂದಿದ್ದಾರೆ.
ಯಾರೇ ಆಗಲಿ ಒಂದು ಸಿದ್ಧಾಂತಕ್ಕೆ ಬದ್ಧವಾಗಿದ್ದಾಗ ಪದೇ ಪದೇ ಪಕ್ಷ ಬದಲಿಸುವಂತಹ ಸನ್ನಿವೇಶವೇ ಉದ್ಭವಿಸುವುದಿಲ್ಲ. ಅವಕಾಶವಾದಿ ರಾಜಕಾರಣಿಗಳು ಮಾತ್ರ ಅಧಿಕಾರ ಹುಡುಕಿಕೊಂಡು ಹೋಗುತ್ತಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಜನರಿಂದ ನೇರವಾಗಿ ಸಿಗಬೇಕೇ ಹೊರತು ವಾಮಮಾರ್ಗದ ಮೂಲಕ ಅಧಿಕಾರ ಪಡೆಯಲು ಹಪಹಪಿಸಬಾರದು ಎಂದು ಕೂಡ ವಿವರಿಸಿದ್ದಾರೆ.
ಬಾದಾಮಿ ಕ್ಷೇತ್ರದಲ್ಲಿ ರೂ.500 ಕೋಟಿ ವೆಚ್ಚದ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಬೇಡಿಕೆ ಇಟ್ಟಿದ್ದೀನಿ. ಯೋಜನೆ ಇನ್ನೂ ಅನುಮೋದನೆಗೊಂಡಿಲ್ಲ, ಆಗಲೇ ಬಿಜೆಪಿಯ ಕೆಲವು ನಾಯಕರು ಬಾದಾಮಿಗೆ ನಾವು ರೂ.650 ಕೋಟಿ ಕೊಟ್ಟಿದ್ದೀವಿ ಎಂದು ಪ್ರಚಾರ ಶುರು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.