ಮೂರು ವರ್ಷದಲ್ಲಿ ಓಡಲಿದೆ ಉಪನಗರ ರೈಲು
Team Udayavani, Feb 3, 2020, 3:09 AM IST
ಬೆಂಗಳೂರು: ರಾಜಧಾನಿಯ ಜನರ ಬಹುದಿನದ ಕನಸಾಗಿದ್ದ ಉಪನಗರ ರೈಲು ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಕೇಂದ್ರ ಸರ್ಕಾರ 2020-21ನೇ ಸಾಲಿನ ಆಯವ್ಯಯದಲ್ಲಿ ಪ್ರಕಟಿಸಿದ್ದು, ಇದಕ್ಕಾಗಿ ಕೇಂದ್ರದ ಪ್ರಮುಖರಿಗೆ ಅಭಿನಂದನೆ ಸಲ್ಲಿಸಲಾಗುವುದು. ಮೂರು ವರ್ಷದಲ್ಲಿ ಯೋಜನೆ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಉಪನಗರ ರೈಲು ಯೋಜನೆ ಪಕ್ಷದ ಹಿರಿಯ ನಾಯಕ ದಿವಂಗತ ಅನಂತ ಕುಮಾರ್ ಅವರ ಕನಸಾಗಿತ್ತು. ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಸಂಸದ ಪಿ.ಸಿ.ಮೋಹನ್ ಅವರ ವಿಶೇಷ ಪ್ರಯತ್ನದಿಂದ ಕೇಂದ್ರ ಆಯವ್ಯಯದಲ್ಲಿ ಯೋಜನೆ ಘೋಷಣೆಯಾಗಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರೈಲ್ವೆ ಸಚಿವ ಪಿಯೂಶ್ ಗೋಯೆಲ್, ಸುರೇಶ್ ಅಂಗಡಿ ಅವರಿಗೆ ಧನ್ಯವಾದ ಅರ್ಪಿಸಲಾಗುವುದು ಎಂದು ತಿಳಿಸಿದರು.
ಉಪನಗರ ರೈಲು ಯೋಜನೆಯಡಿ 148.17 ಕಿ.ಮೀ. ಉದ್ದದ ಸಂಪರ್ಕ ಜಾಲವಿರಲಿದೆ. ಒಟ್ಟು 18,600 ಕೋಟಿ ರೂ. ಅಂದಾಜು ವೆಚ್ಚದ ಯೋಚನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ತಲಾ ಶೇ. 20ರಷ್ಟು ವೆಚ್ಚ ಭರಿಸಲಿದ್ದು, ಉಳಿಕೆ ಶೇ. 60ರಷ್ಟು ಪಾಲನ್ನು ಸಾಂಸ್ಥಿಕ ಸಾಲ ರೂಪದಲ್ಲಿ ಪಡೆಯಲಾಗುವುದು. ಮೂರು ವರ್ಷಗಳಲ್ಲಿ ಯೋಜನೆ ಅನುಷ್ಠಾನಗೊಳಿಸುವ ಗುರಿ ಇದೆ ಎಂದು ಹೇಳಿದರು.
ಉಪನಗರ ರೈಲು ಯೋಜನೆಯು ನಗರದ ಪ್ರಮುಖ ಸ್ಥಳಗಳಲ್ಲಿ 57 ರೈಲು ನಿಲ್ದಾಣಗಳನ್ನು ಒಳಗೊಂಡಿರಲಿದೆ. ಹವಾನಿಯಂತ್ರಿತ ಬೋಗಿಗಳಿರುವ ಉಪನಗರ ರೈಲುಗಳು ನಿತ್ಯ ಬೆಳಗ್ಗೆ 5ರಿಂದ ಮಧ್ಯರಾತ್ರಿವರೆಗೆ ಸಂಚರಿಸಲಿವೆ. ಈ ರೈಲು ಸೇವೆಯಿಂದ ಮುಖ್ಯವಾಗಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ. ಜತೆಗೆ ನಗರದ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಒಂದು ಸ್ಥಳದಿಂದ ಮತ್ತೂಂದು ಸ್ಥಳವನ್ನು ತ್ವರಿತವಾಗಿ ತಲುಪುವ ಜತೆಗೆ ಪರಿಸರ ಮಾಲಿನ್ಯ ನಿಯಂತ್ರಣಕ್ಕೂ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಉಪನಗರ ರೈಲು ಯೋಜನೆ ಜಾರಿಯು ದಿವಂಗತ ಅನಂತ ಕುಮಾರ್ ಅವರ ಕನಸಾಗಿತ್ತು. ಹಲವು ಅಧಿಕಾರಿಗಳ ಕನಸು ಕೂಡ ಇದೇ ಆಗಿತ್ತು. ಯೋಜನೆ ಸಂಬಂಧ ಮರು ಪ್ರಸ್ತಾವ ಮಂಡಿಸಿದ್ದರಿಂದ ತ್ವರಿತವಾಗಿ ಒಪ್ಪಿಗೆ ಪಡೆಯಲು ಅನುಕೂಲವಾಗಿದ್ದು, ಇದಕ್ಕಾಗಿ ಕೇಂದ್ರ ನಾಯಕರಿಗೆ ಅಭಿನಂದನೆ ಸಲ್ಲಿಸಲಾಗುವುದು. ರಾಜ್ಯ ಸರ್ಕಾರ ಆಸಕ್ತಿಯಿಂದ ಯೋಜನೆ ಜಾರಿಗೊಳಿಸಿದರೆ ಮೂರು ವರ್ಷದಲ್ಲಿ ಪೂರ್ಣಗೊಳಿಸಬಹುದು ಎಂದು ಹೇಳಿದರು.
ಉಪನಗರ ರೈಲು ಯೋಜನೆಯನ್ನು ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಘೋಷಿಸುವ ಮೂಲಕ ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡಿದೆ. ಉದ್ದೇಶಿತ ಯೋಜನೆಯಷ್ಟೇ ಜಾರಿಯಾಗಲಿದ್ದು, ಬಿಡದಿ, ದೊಡ್ಡಬಳ್ಳಾಪುರ ಇತರೆಡೆ ವಿಸ್ತರಿಸುವ ಚಿಂತನೆ ಇಲ್ಲ. ಎಲ್ಲ ಶಾಸಕರು, ಸಂಸದರು ಬಯಸಿದರೂ ಸದಕ್ಕೆ ಉದ್ದೇಶಿತ ಯೋಜನೆಯಂತೆ ಕಾರ್ಯಗತವಾಗಲಿದೆ ಎಂದು ಹೇಳಿದರು.
ಪ್ರಯಾಣ ದರ ಎಷ್ಟಿರಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸುರೇಶ್ ಅಂಗಡಿ, ಯೋಜನೆ ಪೂರ್ಣಗೊಳ್ಳುವ ಹೊತ್ತಿಗೆ ಚರ್ಚಿಸಿ ದರ ನಿಗದಿಪಡಿಸಲಾಗುವುದು. ಸಕಾಲದಲ್ಲಿ ತ್ವರಿತ ಗುಣಮಟ್ಟದ ಸೇವೆ ಒದಗಿಸಿದರೆ ಜನ ಅದರಲ್ಲೂ ಯುವಜನತೆ ಎಷ್ಟು ಹಣವನ್ನಾದರೂ ನೀಡುತ್ತಾರೆ ಎಂಬುದು ಅಂಕಿಸಂಖ್ಯೆಯಿಂದ ಗೊತ್ತಾಗಿದೆ ಎಂದು ತಿಳಿಸಿದರು.
ಹಿಂದಿನ ಸರ್ಕಾರಗಳು ಯೋಜನೆ ಜಾರಿಗೆ ಕ್ರಮ ಕೈಗೊಂಡಿದ್ದರೆ ಈ ಹೊತ್ತಿಗಾಗಲೇ ಪೂರ್ಣಗೊಳ್ಳಬೇಕಿತ್ತು. 2019-20ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಕೇಳಿದ ಕೆಲ ಮಾಹಿತಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿರಲಿಲ್ಲ. ಯೋಜನೆಗೆ ಭೂಸ್ವಾಧೀನ ಸಮಸ್ಯೆ ಇಲ್ಲ. ರೈಲ್ವೆ ಇಲಾಖೆಯೇ ಭೂಮಿ ನೀಡಲಿದೆ. ವಿಶೇಷ ವಿನ್ಯಾಸದ ಬೋಗಿಗಳು ಇರಲಿದೆ ಎಂದು ಮಾಹಿತಿ ನೀಡಿದರು.
ಸಂಸದ ಪಿ.ಸಿ.ಮೋಹನ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಯೋಜನೆಗೆ ಆಗಸ್ಟ್‌ನಲ್ಲಿ ಒಪ್ಪಿಗೆ ನೀಡಿದ ಬಳಿಕಷ್ಟೇ ಉಪನಗರ ರೈಲು ಯೋಜನೆ ಈ ಹಂತಕ್ಕೆ ಬರಲು ಕಾಣವಾಯಿತು. ಹಿಂದಿನ ಸರ್ಕಾರಗಳಲ್ಲಿ ಸಂಧಾನ ಕುರಿತು ಚರ್ಚೆ ನಡೆಯುತ್ತಿತ್ತೇ ಹೊರತು ಅಂತಿಮ ನಿರ್ಧಾರ ಕೈಗೊಳ್ಳುತ್ತಿರಲಿಲ್ಲ. ಯೋಜನೆಯನ್ನು ಕೇಂದ್ರ ಬಜೆಟ್‌ನಲ್ಲಿ ಘೋಷಿಸಿರುವುದರಿಂದ ಸಾಂಸ್ಥಿಕ ಸಾಲ ಪಡೆಯಲು ಹೆಚ್ಚಿನ ಶಕ್ತಿ ಬರಲಿದೆ ಎಂದು ಹೇಳಿದರು. ಸಚಿವ ಆರ್.ಅಶೋಕ್, ಮಾಜಿ ಸಚಿವ ಉಮೇಶ್ ಕತ್ತಿ, ಸಂಸದ ತೇಜಸ್ವಿ ಸೂರ್ಯ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಇತರರು ಉಪಸ್ಥಿತರಿದ್ದರು.
ಯೋಜನೆ ಇರುವುದೇ ಬಡವರಿಗೆ: ಉಪನಗರ ರೈಲಿನಲ್ಲಿ ಸಾಮಾನ್ಯ ಬೋಗಿ ಇರದೆ ಏಕಪ್ರಕಾರದ ಬೋಗಿ ಇರುವುದರಿಂದ ಬಡವರಿಗೆ ಅವಕಾಶವಿರುವುದೇ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಸುರೇಶ್ ಅಂಗಡಿ, ಉಪನಗರ ರೈಲು ಯೋಜನೆ ಇರುವುದೇ ಬಡವರಿಗೆ. ಪ್ರಧಾನಿಯವರು ಇರುವುದೇ ಬಡವರಿಗಾಗಿ. ದೇಶದ 70 ವರ್ಷದ ಇತಿಹಾಸದಲ್ಲಿ ಚಹಾ ಮಾರುತ್ತಿದ್ದ ನರೇಂದ್ರ ಮೋದಿಯವರು ಬಡವರ ಪ್ರಧಾನಿಯಾಗಿದ್ದರೆ, ಸಣ್ಣ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಇಬ್ಬರೂ ಬಡವರ ಸಲುವಾಗಿಯೇ ಇದ್ದಾರೆ ಎಂದು ಹೇಳಿದರು.
ಬೈಯಪ್ಪನಹಳ್ಳಿ ಕೋಚ್ ಟರ್ಮಿನಲ್ ಸೇರಿದಂತೆ ಅಭಿವೃದ್ಧಿ ಕಾರ್ಯ ತ್ವರಿತವಾಗಿ ನಡೆದಿದ್ದು, ಮಾರ್ಚ್‌ನಲ್ಲಿ ಉದ್ಘಾಟಿಸಲು ಪ್ರಯತ್ನ ನಡೆದಿದೆ. ಉಪನಗರ ರೈಲು ಯೋಜನೆಗೆ ಹೆಸರಿಡುವ ಬಗ್ಗೆ ಇನ್ನೂ ಚಿಂತಿಸಿಲ್ಲ. ವೈಯಕ್ತಿಕ ಹೆಸರುಗಳ ನಾಮಕರಣಕ್ಕೆ ಕೇಂದ್ರ ನಾಯಕರು ನಿರ್ಬಂಧ ಹೇರಿದ್ದಾರೆ ಎಂದು ತಿಳಿಸಿದರು.
ಏರ್‌ಪೋರ್ಟ್‌ಗೆ ಉಪನಗರ ರೈಲು ಸಂಪರ್ಕ
ಬೆಂಗಳೂರು: ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿರುವ ಉಪನಗರ ರೈಲು ಯೋಜನೆ ಜಾರಿಗೆ ಆರು ವರ್ಷದಲ್ಲಿ ಪೂರ್ಣಗೊಳಿಸುವ ಗುರಿಯಿದ್ದರೂ ಬೆಂಗಳೂರು ನಗರ ರೈಲ್ವೆ ನಿಲ್ದಾಣದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗವನ್ನು ಆದ್ಯತೆ ಮೇರೆಗೆ ಮೂರು ವರ್ಷಗಳಲ್ಲಿ ಪೂರ್ಣಗೊಳಿಸುವ ಗುರಿ ಹಾಕಿಕೊಂಡಿದೆ.
ಯೋಜನೆಗೆ ಮಂಜೂರಾತಿ ದೊರೆತ ದಿನಾಂಕದಿಂದ ಆರು ವರ್ಷದೊಳಗೆ ಒಟ್ಟು 148 ಕಿ.ಮೀ. ಉದ್ದದ ಉಪನಗರ ರೈಲು ಮಾರ್ಗದ ಯೋಜನೆಯನ್ನು ಅನುಷ್ಠಾನಗೊಳಿಸುವ ಗುರಿಯನ್ನು “ಕೆ-ರೈಡ್’ ಸಂಸ್ಥೆ ಹೊಂದಿದೆ. ಅದರಲ್ಲಿ ಬೆಂಗಳೂರು ನಗರ ರೈಲ್ವೆ ನಿಲ್ದಾಣದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಸಂಪರ್ಕಿಸುವ ಮಾರ್ಗವನ್ನು ಮೂರು ವರ್ಷದಲ್ಲಿ ಪೂರ್ಣಗೊಳಿಸಲು ಉದ್ದೇಶಿಸಿದೆ.
ಹಾಲಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ರಸ್ತೆಯಲ್ಲಿ ವಾಹನ ದಟ್ಟಣೆ ತೀವ್ರವಾಗಿದ್ದು, ಪ್ರಯಾಣಿಕರು ಸಕಾಲದಲ್ಲಿ ವಿಮಾನನಿಲ್ದಾಣ ತಲುಪಲು ಪರದಾಡಬೇಕಾದ ಸ್ಥಿತಿ ಇದೆ. ಹಾಗಾಗಿ ಆದ್ಯತೆ ಮೇರೆಗೆ ಈ ಮಾರ್ಗ ನಿರ್ಮಾಣಕ್ಕೆ ಒತ್ತು ನೀಡಲು ನಿರ್ಧರಿಸಿರುವುದರಿಂದ ಮೊದಲಿಗೆ ಈ ಮಾರ್ಗದ ಕಾಮಗಾರಿಯೇ ಪೂರ್ಣಗೊಂಡು ಉಪನಗರ ರೈಲು ಸಂಚಾರ ಶುರುವಾಗುವ ನಿರೀಕ್ಷೆ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.