ಬೇಸಿಗೆ ಮೊದಲೇ ನೀರಿಗೆ ಹಾಹಾಕಾರಕ್ಕೆ ಸದಸ್ಯರ ತಳಮಳ
Team Udayavani, Feb 9, 2017, 3:45 AM IST
ವಿಧಾನಸಭೆ: ರಾಜ್ಯದಲ್ಲಿ ಬೇಸಿಗೆಗೆ ಮೊದಲೇ ಕುಡಿಯುವ ನೀರಿಗೆ ಉಂಟಾಗಾಗಿರುವ ಹಾಹಾಕಾರ ಕುರಿತು ಬುಧವಾರ ಗಂಭೀರ ಚರ್ಚೆ ನಡೆದು, ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಮೇವು ಪೂರೈಕೆಗೆ ತೊಂದರೆಯಾಗದಂತೆ ಈಗಿನಿಂದಲೇ ಸಮರೋಪಾದಿಯಲ್ಲಿ ಸಜ್ಜಾಗಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಒತ್ತಾಯಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಬಿಜೆಪಿಯ ಗೋವಿಂದ ಕಾರಜೋಳ ಅವರ ಪ್ರಶ್ನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಉತ್ತರಿಸಿದ ಸಂದರ್ಭದಲ್ಲಿ ಧ್ವನಿಗೂಡಿಸಿದ ಸದಸ್ಯರು, ರಾಜ್ಯದೆಲ್ಲೆಡೆ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದ್ದು ಶಾಸಕರ ಅಧ್ಯಕ್ಷತೆಯ ಕಾರ್ಯಪಡೆಗೆ ಕನಿಷ್ಠ 1 ಕೋಟಿ ರೂ. ಒದಗಿಸಬೇಕು ಎಂದು ಆಗ್ರಹಿಸಿದರು.
ಬರಪೀಡಿತ ಎಂದು ಘೋಷಣೆಯಾಗಿರುವ ತಾಲೂಕುಗಳಿಗೆ 60 ಲಕ್ಷ ರೂ., ಇತರೆ ತಾಲೂಕುಗಳಿಗೆ 40 ಲಕ್ಷ ರೂ. ಕುಡಿಯುವ ನೀರಿಗೆ ನೀಡಲಾಗಿದೆ. ಆದರೆ, ಆ ಹಣ ಏನೇನೂ ಸಾಲುತ್ತಿಲ್ಲ. ಈಗಾಗಲೇ ನಮ್ಮ ಕ್ಷೇತ್ರಗಳಲ್ಲಿ 1 ರಿಂದ 1.50 ಕೋಟಿ ರೂ. ವರೆಗೆ ವೆಚ್ಚ ಮಾಡಲಾಗಿದೆ. ಬರ ಪರಿಹಾರ ಕಾಮಗಾರಿಗಳಿಗೆ ಹಣ ಬಿಡುಗಡೆಯಲ್ಲಿ ಕಂಡೀಷನ್, ಲಿಮಿಟ್ ಹಾಕಬೇಡಿ ಎಂದು ಒಕ್ಕೊರಲ ಒತ್ತಾಯ ಮಾಡಿದರು.
ಈ ವೇಳೆ ಮಧ್ಯಪ್ರವೇಶ ಮಾಡಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ರಾಜ್ಯದಲ್ಲಿ ಎಲ್ಲಿಯೂ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಂಡಿಲ್ಲ. ಏನೇ ಕೇಳಿದರೂ ಜಿಲ್ಲಾಧಿಕಾರಿಗಳು ಕೈ ಚೆಲ್ಲುತ್ತಾರೆ. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿಯ ಸಿ.ಟಿ.ರವಿ, ಕುಡಿಯುವ ನೀರು ಪೂರೈಕೆಗೆ 40 ಲಕ್ಷ ರೂ. ಯಾವುದಕ್ಕೂ ಸಾಲುವುದಿಲ್ಲ. ಜಿಲ್ಲಾಧಿಕಾರಿಗಳನ್ನು ಕೇಳಿದರೆ ಲಿಮಿಟ್ ಎಂದು ಹೇಳುತ್ತಿದ್ದಾರೆ. ನಮ್ಮ ಕ್ಷೇತ್ರದಲ್ಲಿ 1.50 ಕೋಟಿ ರೂ. ಮೊತ್ತದ ಕೆಲಸ ಆಗಿದೆ. ನಮ್ಮ ವಿಶ್ವಾಸಕ್ಕೆ ಗುತ್ತಿಗೆದಾರರು ಕೆಲಸ ಮಾಡಿದ್ದಾರೆ. ಇದೀಗ ಅವರಿಗೆ ಹಣ ಕೊಡಲಿಲ್ಲ ಎಂದರೆ ಹೇಗೆ? ಎಂದು ಪ್ರಶ್ನಿಸಿದರು.
ಜೆಡಿಎಸ್ನ ಶಿವಲಿಂಗೇಗೌಡ, ಮಂಜುನಾಥಗೌಡ, ರಮೇಶ್ಬಂಡೆಸಿದ್ದೇಗೌಡ ಸಹ ಇದಕ್ಕೆ ಧ್ವನಿಗೂಡಿಸಿದರು.
ಇದಕ್ಕೂ ಮುನ್ನ ಗೋವಿಂದ ಕಾರಜೋಳ ಅವರು, ರಾಜ್ಯದಲ್ಲಿ ಎಷ್ಟು ಬೋರ್ವೆಲ್ ಕೊರೆದಿದ್ದೀರಿ, ಎಷ್ಟರಲ್ಲಿ ನೀರು ಸಿಕ್ಕಿದೆ. ಈಗಾಗಲೇ ಇರುವ ಬೋರ್ವೆಲ್ಗಳ ಸಂಖ್ಯೆ ಎಷ್ಟು, ಎಷ್ಟರಲ್ಲಿ ನೀರು ಬತ್ತಿದೆ. ಎಷ್ಟು ಕಿರು ನೀರು ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಶುದ್ಧ ಕುಡಿಯುವ ನೀರಿನ ಘಟಕಗಳು ಎಷ್ಟು ಕೆಟ್ಟಿವೆ ಎಂಬುದರ ಬಗ್ಗೆ ಮಾಹಿತಿ ಕೊಡಿ ಎಂದು ಆಗ್ರಹಿಸಿದರು.
ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸದಸ್ಯ ಎಚ್.ಕೆ.ಪಾಟೀಲ್, ರಾಜ್ಯದಲ್ಲಿ 7390 ಗ್ರಾಮಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ಇನ್ನೂ 6935 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇರುವುದನ್ನು ಪತ್ತೆ ಹಚ್ಚಲಾಗಿದೆ. ತೀವ್ರ ಸಮಸ್ಯೆ ಇರುವ 496 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಒಟ್ಟಾರೆ ನೀರು ಪೂರೈಕೆಗೆ ತೊಂದರೆಯಾಗದಂತೆ 622 ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ಕುಡಿಯುವ ನೀರಿಗೆ ತೊಂದರೆ ಇಲ್ಲದಂತೆ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಶಾಸಕರ ಅಧ್ಯಕ್ಷತೆಯ ಕಾರ್ಯಪಡೆಗೆ ಕೊಟ್ಟಿರುವ ಹಣ ವೆಚ್ಚ ಆಗಿದ್ದರೆ ಆತಂಕ ಪಡುವ ಅಗತ್ಯವಿಲ್ಲ. ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲೂ ಬರ ಪರಿಹಾರಕ್ಕೆ ಹೆಚ್ಚು ಹಣ ಕೊಡಬೇಕು ಎಂಬ ಪ್ರಸ್ತಾಪವಾಗಿದೆ. ಈಗಾಗಲೇ ಕೊಟ್ಟಿರುವ 60 ಲಕ್ಷ ರೂ., 40 ಲಕ್ಷ ರೂ. ವೆಚ್ಚವಾಗಿದ್ದರೆ ಎರಡನೇ ಕಂತಿನ ಹಣ ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.