ನಗರದ ರಸ್ತೆಯಲ್ಲಿ ಓಡಾಡಲಿವೆ ಹೈಟೆಕ್ ಬಸ್‌ಗಳು
Team Udayavani, Feb 7, 2017, 12:34 PM IST
ಬೆಂಗಳೂರು: ಜೆ-ನರ್ಮ್ ಯೋಜನೆಯ ಅಡಿಯಲ್ಲಿ ಬಿಎಂಟಿಸಿಗೆ ಲಭ್ಯವಾಗಿರುವ “ಅರ್ಬನ್ ಬಸ್ ಸ್ಪೆಸಿಫಿಕೇಷನ್’ ಮಾದರಿಯ ಹೊಸ ಹವಾನಿಯಂತ್ರಿತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸೋಮವಾರ ಚಾಲನೆ ನೀಡಿದರು.
ಬಸ್‌ಗಳಿಗೆ ಚಾಲನೆ ನೀಡಿದ ಸಚಿವ ರೆಡ್ಡಿ, ಅದೇ ಬಸ್‌ನಲ್ಲಿ ಶಾಂತಿನಗರದಲ್ಲಿ ಒಂದು ಸುತ್ತು ಪ್ರಯಾಣ ಮಾಡಿದರು. ಈ ಸಂದರ್ಭದಲ್ಲಿ ಸಂಸ್ಥೆ ಅಧ್ಯಕ್ಷ ಎಂ. ನಾಗರಾಜ್ ಯಾದವ್, ಉಪಾಧ್ಯಕ್ಷ ಡಿ. ಗೋವಿಂದರಾಜು, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಬಿ. ಬಸವರಾಜು, ಬಿಎಂಟಿಸಿ ನಿರ್ದೇಶಕಿ ಡಾ.ಏಕರೂಪ್ ಕೌರ್ ಮತ್ತಿತರರು ಪಾಲ್ಗೊಂಡಿದ್ದರು.
ಮಾರ್ಗಬದಲಾವಣೆ ಇಲ್ಲ: ಯಲಹಂಕದಲ್ಲಿ ಫೆ. 14ರಿಂದ 18ರವರೆಗೆ ನಡೆಯಲಿರುವ “ಏರೋ ಇಂಡಿಯಾ-2017′ ಪ್ರದರ್ಶನದ ವೇಳೆ ಬಿಎಂಟಿಸಿ ಬಸ್‌ಗಳ ಕಾರ್ಯಾಚರಣೆ ಎಂದಿನಂತೆ ಇರಲಿದೆ. ಸಾಮಾನ್ಯವಾಗಿ ವೈಮಾನಿಕ ಪ್ರದರ್ಶನದ ವೇಳೆ ಪ್ರತಿವರ್ಷ ಯಲಹಂಕ ಮಾರ್ಗದಲ್ಲಿ ಸಂಚರಿಸುವ ಬಿಎಂಟಿಸಿ ಬಸ್‌ಗಳ ಮಾರ್ಗ ಬದಲಾವಣೆ ಮಾಡಲಾಗುತ್ತಿತ್ತು. ಆದರೆ, ಈ ವರ್ಷ ವಾಯುವಜ್ರ ಮತ್ತು ದೂರ ಮಾರ್ಗದ ಯಾವುದೇ ಅನುಸೂಚಿ ಅಥವಾ ಸುತ್ತುವಳಿಗಳಲ್ಲಿ ಯಾವುದೇ ಮಾರ್ಗ ಬದಲಾವಣೆ ಇರುವುದಿಲ್ಲ ಎಂದು ಬಿಎಂಟಿಸಿ ಪ್ರಕಟಣೆ ಸ್ಪಷ್ಟಪಡಿಸಿದೆ.
ಬಸ್‌ನ ವೈಶಿಷ್ಟವೇನು?
ಹೊಸ ಮಾದರಿಯ ಬಸ್‌ಗಳಲ್ಲಿ ಆರಾಮದಾಯ ಆಸನಗಳು, ಪ್ರತಿ ಆಸನಗಳ ಸಾಲಿನಲ್ಲಿ ಮೊಬೈಲ್ ಮತ್ತು ಲ್ಯಾಪ್‌ಟಾಪ್ ಚಾರ್ಜಿಂಗ್ ವ್ಯವಸ್ಥೆ, ವಾಹನಗಳ ಒಳಭಾಗದಲ್ಲಿರುವ ಪ್ರತಿ ಕಂಬಗಳಲ್ಲಿ ವಾಹನಗಳ ನಿಲುಗಡೆ ಕೋರಿಕೆಯ ಸ್ವಿಚ್‌ಗಳು, ತುರ್ತು ಸಂದರ್ಭಗಳಲ್ಲಿ ಪ್ರಯಾಣಿಕರು ವಾಹನಗಳನ್ನು ನಿಲ್ಲಿಸಲು ಅನುಕೂಲವಾಗುವಂತೆ ವಾಹನದ ಮಧ್ಯಭಾಗದಲ್ಲಿ ಸ್ವಿಚ್ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.